For Quick Alerts
ALLOW NOTIFICATIONS  
For Daily Alerts

ಆರ್ಬಿಐ: ಮಹಿಳಾ ಸ್ವಸಹಾಯ ಸಂಘಗಳಿಗೆ ಶೇ. 7 ಬಡ್ಡಿದರದಲ್ಲಿ ಸಾಲ

By Siddu
|

ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ದೇಶದಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್ಎಚ್ಜಿ) ವಾರ್ಷಿಕ ಶೇ. 7ರ ಬಡ್ಡಿದರದಲ್ಲಿ ಸಾಲ ನೀಡುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ 2016-17ರ ಪರಿಷ್ಕ್ರತ ಮಾರ್ಗಸೂಚಿಯಂತೆ ದೀನ್ ದಯಾಳ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಅಡಿಯಲ್ಲಿ ಎಲ್ಲಾ ಮಹಿಳಾ ಸ್ವ ಸಹಾಯ ಸಂಘಗಳು ಶೇ. 7ರ ಬಡ್ಡಿದರದಲ್ಲಿ ರೂ. 3 ಲಕ್ಷದವರೆಗೆ ಸಾಲ ಪಡೆಯಲು ಅರ್ಹವಾಗಿವೆ ಆರ್ಬಿಐ ತಿಳಿಸಿದೆ.

ಆರ್ಬಿಐ: ಮಹಿಳಾ ಸ್ವಸಹಾಯ ಸಂಘಗಳಿಗೆ ಶೇ. 7 ಬಡ್ಡಿದರದಲ್ಲಿ ಸಾಲ

ಸ್ವರ್ಣಜಯಂತಿ ಗ್ರಾಮ ಸ್ವರಾಜ್ ಯೋಜನೆ ಅಡಿ ಸಬ್ಸಿಡಿ ಪಡೆಯುತ್ತಿರುವ ಸ್ವ ಸಹಾಯ ಗುಂಪುಗಳು ಈ ಸಾಲ ಸೌಲಭ್ಯ ಪಡೆಯಲು ಅರ್ಹವಲ್ಲ ಎಂದು ತಿಳಿಸಿದೆ. ಗ್ರಾಮೀಣ ಪ್ರದೇಶದ ಎಲ್ಲಾ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೇ. 7ರ ಬಡ್ಡಿದರದಲ್ಲಿ ಬ್ಯಾಂಕುಗಳು ಸಾಲ ನೀಡಲಿವೆ ಎಂದು ತಿಳಿಸಿದೆ.

ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವ ಗುಂಪುಗಳಿಗೆ ಉತ್ತೇಜನ ನಿಡುವ ಉದ್ದೇಶದಿಂದ ಸರ್ಕಾರ ಹೆಚ್ಚುವರಿಯಾಗಿ ಶೇ. 3ರಷ್ಟು ಅನುದಾನ ನೀಡುತ್ತಿದೆ ಎಂದು ಆರ್ಬಿಐ ಹೇಳಿದೆ.

Read more about: rbi
English summary

Provide loans to women SHGs at 7%: RBI to banks

The Reserve Bank today asked banks to provide loans to women self-help groups (SHGs) at 7 per cent per annum, as per the government's revised guidelines for 2016-17.
Story first published: Saturday, August 27, 2016, 14:32 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X