ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್ ಶನಿವಾರ 2020-21ನೇ ಸಾಲಿನ ನಾಲ್ಕನೇ ತ್ರೈಮಾಸಿಕ ವರದಿಯನ್ನು ಪ್ರಕಟಿಸಿದ್ದು, ಬ್ಯಾಂಕ್‌ನ ನಿವ್ವಳ ಲಾಭ ವರ್ಷದಿಂದ ವರ್ಷಕ್ಕೆ ಶೇಕಡಾ 260.47ರಷ್ಟು ಏರಿಕೆಗೊಂಡು, 4,402.61 ಕೋಟಿ ರೂಪಾಯಿಗೆ ತಲುಪಿದೆ.
ಮಾರ್ಚ್‌ನಿಂದ ಮೂರು ತಿಂಗಳವರೆಗೆ ಐಸಿಐಸಿಐ ಬ್ಯಾಂಕ್ ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 260.47ರಷ್ಟು (Y-O-Y) ನಿವ್ವಳ ಲಾಭ ಏರಿಕೆಗೊಂಡಿದ್ದು, 4,402.61 ಕೋಟಿ ರೂಪಾಯಿಗೆ ತಲುಪಿದೆ. ಹಿಂದಿನ ತ್ರೈಮಾಸಿಕದಲ್ಲಿ ಬ್ಯಾಂಕ್ 1,221.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.