Advertisement

ಏಪ್ರಿಲ್ 22ರ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಸರ್ಕಾರಿ ತೈಲ ಸಂಸ್ಥೆಗಳು ಗುರುವಾರ ತೈಲ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಗುರುವಾರ ಸತತ ಎರಡನೇ ದಿನವು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 80.73 ರೂ. ದಾಖಲಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ 80.73 ರೂ.

Advertisement
Advertisement

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.62 ರೂ. ಮತ್ತು ಡೀಸೆಲ್ ದರ 83.61 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.83 ರೂ. ಮತ್ತು ಡೀಸೆಲ್ ದರ 87.81 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.43 ರೂ. ಮತ್ತು ಡೀಸೆಲ್ ದರ 85.60 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.99 ರೂ. ಮತ್ತು ಡೀಸೆಲ್ ದರ 88.05 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.45 ರೂ. ಮತ್ತು ಡೀಸೆಲ್ ದರ 85.76 ರೂ.

English Summary

Domestic petrol and diesel prices Unchanged On Thursday In Many cities. Latest Rates Here
Read more...