Englishहिन्दी മലയാളം தமிழ் తెలుగు

'ಅನಿಲಭಾಗ್ಯ ಯೋಜನೆ' ಅಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮರೆಯದಿರಿ

Written By: Siddu
Subscribe to GoodReturns Kannada

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಅನಿಲ ಭಾಗ್ಯ ಯೋಜನೆಯು ಮೇ 1ರಿಂದ ಜಾರಿಯಾಗಲಿದೆ. ಈ ಯೋಜನೆ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ನೀಡಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಬಜೆಟ್ ನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಒದಗಿಸುವ ಅನಿಲ ಭಾಗ್ಯ ಯೋಜನೆಯನ್ನು ಘೋಷಣೆ ಮಾಡಿದ್ದರು. ಸರ್ಕಾರದ ಯೋಜನೆಗಳು

ಮೇ 1ರಿಂದ ಅನುಷ್ಠಾನ

ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಇದೇ ಮೇ 1ರಿಂದ ರಾಜ್ಯಾದ್ಯಂತ ಈ ಯೋಜನೆ ಅನುಷ್ಠಾನವಾಗಲಿದೆ. ಪ್ರಾರಂಭಿಕ ಸುತ್ತಿನಲ್ಲಿ 5 ಲಕ್ಷ ಕುಟುಂಬಗಳು ಈ ಸೌಲಭ್ಯ ಪಡೆಯಲಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆಗಳು

ಸೀಮೆಎಣ್ಣೆ ಮುಕ್ತ ರಾಜ್ಯ

ಮುಖ್ಯಮಂತ್ರಿಯವರು ರಾಜ್ಯವನ್ನು ಸೀಮೆಎಣ್ಣೆ ಮುಕ್ತ ಮಾಡುವ ಕನಸನ್ನು ಕಂಡಿದ್ದು, ಮೊದಲ ಹಂತದಲ್ಲಿ ಬಿಪಿಎಲ್ ಕುಟುಂಬಗಳಿಗೆ ಸುಮಾರು 2 ಸಾವಿರ ವೆಚ್ಚದಲ್ಲಿ ಅಡುಗೆ ಅನಿಲ ಸಂಪರ್ಕವನ್ನು ಪೂರೈಸಲಿದೆ. ಈ ಮೂಲಕ ರಾಜ್ಯವನ್ನು ಸೀಮೆಎಣ್ಣೆ ಮುಕ್ತ ಮಾಡುವ ಸಂಕಲ್ಪ ಮಾಡಲಾಗಿದೆ.

ಕೇಂದ್ರದ ಉಜ್ವಲ ರಾಜ್ಯದ ಅನಿಲಭಾಗ್ಯ

ಈಗಾಗಲೇ ಕೇಂದ್ರ ಸರ್ಕಾರ ಬಡ ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುತ್ತಿದೆ. ಕೇಂದ್ರದ ಉಜ್ವಲ ಯೋಜನೆ ಮಾದರಿಯಲ್ಲಿ ಅನಿಲಭಾಗ್ಯ ಯೋಜನೆ ಅನುಷ್ಠಾನವಾಗಲಿದೆ. ಆದರೆ ಕೇಂದ್ರ ಸರ್ಕಾರ ತಯಾರಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಶೇ. 60ರಷ್ಟು ಕುಟುಂಬಗಳು ಬರುತ್ತಿರಲಿಲ್ಲ. ಹೀಗಾಗಿ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ ಅವರೆಲ್ಲರಿಗೂ ಅಡುಗೆ ಅನಿಲ(ಗ್ಯಾಸ್) ಸಿಗಲಿದೆ.

ಸ್ಟವ್ ಸೌಲಭ್ಯ

ಕೇಂದ್ರದ ಉಜ್ವಲ ಯೋಜನೆ ಅಡಿಯಲ್ಲಿ ಗುರುತಿಸಿದ ಎಲ್ಲಾ ಫಲಾನುಭವಿಗಳಿಗೆ 1000 ರೂ. ಮೊತ್ತದ ಸ್ಟವ್ ನೀಡಲು ಆದೇಶದಲ್ಲಿ ಸೂಚಿಸಲಾಗಿದೆ. ಈ ಸ್ಟವ್ ವಿತರಣೆಯನ್ನು ರಾಜ್ಯದ ಅನಿಲ ಭಾಗ್ಯ ಯೋಜನೆಯ ಭಾಗವಾಗಿ ಪರಿಗಣಿಸಲು ಸೂಚನೆ ನೀಡಲಾಗಿದೆ.

ಅನ್ನಭಾಗ್ಯ ಫಲಾನುಭವಿಗಳಿಗೆ ಲಾಭ

ಈಗಾಗಲೇ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಲಾಭ ತಮ್ಮದಾಗಿಸಲಿದ್ದಾರೆ. ಮೊದಲ ಹಂತದಲ್ಲಿ 5 ಲಕ್ಷ ಕುಟುಂಬಗಳಿಗೆ ನೀಡಲಾಗುವುದು. ನಂತರದಲ್ಲಿ ಹಂತ ಹಂತವಾಗಿ ಒಟ್ಟು 18 ಲಕ್ಷ ಕುಟುಂಬಗಳಿಗೆ ಈ ಸೌಲಭ್ಯ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆಯಲು ಆಹಾರ ಇಲಾಖೆ ಸಿದ್ಧಪಡಿಸಿರುವ ಸಾಪ್ಟ್ವೇರ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ಇಲಾಖೆಯ ಸೇವಾ ಕೇಂದ್ರಗಳಾದ ಗ್ರಾಮ ಪಂಚಾಯಿತಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಜನಸ್ನೇಹಿ ಕೇಂದ್ರ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೇಂದ್ರದ ಪಟ್ಟಿಯಲ್ಲಿ ಹೆಸರಿದ್ದರೆ?

ಒಂದುವೇಳೆ ಅರ್ಜಿ ಸಲ್ಲಿಸಿದ ಕುಟುಂಬಗಳ ಹೆಸರು ಕೇಂದ್ರ ಸರ್ಕಾರದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ಪಟ್ಟಿಯಲ್ಲಿ ಗುರುತಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿದ್ದಲ್ಲಿ ಕೇಂದ್ರದ ಉಜ್ವಲ ಯೋಜನೆಯಡಿ ಅನಿಲ ಭಾಗ್ಯ ಸೌಲಭ್ಯ ಒದಗಿಲಾಗುವುದು. ಜತೆಗೆ ಉಳಿದ ಕುಟುಂಬಗಳಿಗೆ ಅನಿಲಭಾಗ್ಯ ಅಡಿಯಲ್ಲಿ ಗ್ಯಾಸ್ ಸಂಪರ್ಕ ನೀಡಲಾಗುವುದು.

English summary

Anila Bhagya Scheme Karnataka – Free LPG Connections for BPL Families

Anila Bhagya Scheme Karnataka – The Karnataka government is going to launch a new subsidy scheme named Anila Bhagya Scheme. Under this scheme the state government will provide free lpg connections to the poor people of the state.
Company Search
Enter the first few characters of the company's name or the NSE symbol or BSE code and click 'Go'
Thousands of Goodreturn readers receive our evening newsletter.
Have you subscribed?

Find IFSC

Get Latest News alerts from Kannada Goodreturns