ರಾಜ್ಯ ಸರ್ಕಾರ ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ಮೂರು ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸಲಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಉದ್ಯೋಗಿನಿ ಯೋಜನೆಯನ್ನು ಪ್ರ
ರಾಜ್ಯ ಸರ್ಕಾರ 'ಉದ್ಯೋಗಿನಿ' ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ಮೂರು ಲಕ್ಷದವರೆಗೆ ಸಹಾಯಧನ ಒದಗಿಸಲಿದೆ.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಸರಕಾರದ ಪ್ರಮುಖ ನವೀನ ಯೋಜನೆಗಳಲ್ಲಿ ಇದು ಕೂಡ ಒಂದು.
ಮಹಿಳಾ ಸಬಲೀಕರಣದ ಧ್ಯೇಯ
ಸಾಲ ನೀಡುವ ಬ್ಯಾಂಕುಗಳು
ವಾಣಿಜ್ಯ ಬ್ಯಾಂಕುಗಳು, ಜಿಲ್ಲೆಯ ಸಹಕಾರಿ ಬ್ಯಾಂಕುಗಳು ಮತ್ತು ಆರ್ಆರ್ಬಿಗಳಂತಹ ಹಣಕಾಸು ಸಂಸ್ಥೆಗಳ ಮೂಲಕ ಸಾಲಗಳನ್ನು ಹೊಂದಿಸಲಾಗುತ್ತದೆ. ಖಾಸಗಿ ಸಂಸ್ಥೆಗಳಿಂದ ಅತಿಹೆಚ್ಚು ಬಡ್ಡಿದರದಲ್ಲಿ ಸಾಲ ಪಡೆಯುವ ಮಹಿಳಾ ಉದ್ಯಮಿಗಳನ್ನು ಸಹಕರಿಸಲು ಈ ಯೋಜನೆ ಬಹಳ ಪ್ರಯೋಜನಕಾರಿಯಾಗಿದೆ.
ರೂ. 3 ಲಕ್ಷ ಸಾಲ ಸೌಲಭ್ಯ
ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಆರಂಭಿಸಲ್ಪಟ್ಟ ‘ಉದ್ಯೋಗಿನಿ' ಯೋಜನೆಯಲ್ಲಿ ಸರ್ಕಾರ ಮಹತ್ತರ ಬದಲಾವಣೆ ತಂದಿದ್ದು, ರೂ. 3 ಲಕ್ಷ ಸಾಲ ಸೌಲಭ್ಯ ಒದಗಿಸಲಿದ್ದು, ರೂ. 90,000 ಸಬ್ಸಿಡಿ ನೀಡಲಾಗುವುದು.
ಅರ್ಹತೆ ಮಾನದಂಡ
ಮಹಿಳೆಯರನ್ನು ಉದ್ಯಮಶೀಲರನ್ನಾಗಿ ರೂಪಿಸುವ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ವಾರ್ಷಿಕ ರೂ. 1.5 ಲಕ್ಷ ಆದಾಯ ಹೊಂದಿರುವ 55 ವರ್ಷದೊಳಗಿನ ಎಲ್ಲಾ ವರ್ಗದ ಮಹಿಳೆಯರಿಗೆ ಸಾಲ ಒದಗಿಸಲಾಗುತ್ತದೆ.
ಯಾವ ಉದ್ಯಮಕ್ಕಾಗಿ ಸಾಲ
ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಉಪ್ಪಿನಕಾಯಿ, ಅಗರಬತ್ತಿ, ಕಾಫಿ -ಟೀ ಅಂಗಡಿ, ಟೈಲರಿಂಗ್, ಎಸ್‌ಟಿಡಿ ಬೂತ್, ಬ್ಯೂಟಿ ಪಾರ್ಲರ್, ಅಗರಬತ್ತಿ, ಕ್ಲಿನಿಕ್, ಜಿಮ..., ಸಿಹಿ ಅಂಗಡಿ, ಹಿಟ್ಟಿನ ಗಿರಣಿ, ಪೋಟೋ ಸ್ಟೂಡಿಯೋ, ಕಾಂಡಿಮೆಂಟ್ಸ್, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಹೆಚ್ಚು ಪ್ರಮಾಣದ ಸಣ್ಣ ಉದ್ಯಮಗಳ ಆರಂಭಕ್ಕೆ ಸಾಲ ಸಿಗಲಿದೆ.
ಸಾಲ ಪಡೆಯೋದು ಹೇಗೆ?
ಎಲ್ಲಾ ಜಿಲ್ಲೆಗಳಲ್ಲಿರುವ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಯೋಜನೆ ಕಾರ್ಯಗತವಾಗಲಿದೆ. ತಾಲೂಕು, ಜಿಲ್ಲಾ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಗಮದ ಮೂಲಕ ನಿರೀಕ್ಷಕರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.
ವಯೋಮಿತಿ ಹಾಗು ಸಾಲ ಮಿತಿ ಏರಿಕೆ
ಈ ಹಿಂದೆ ಯೋಜನಾ ಫಲಾನುಭವಿಗಳ ವಯೋಮಿತಿಯನ್ನು 45ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಈಗ 55 ವರ್ಷಗಳಿಗೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಜತೆಗೆ ವಾರ್ಷಿಕ ಆದಾಯದ ಮಿತಿಯನ್ನು 40 ಸಾವಿರದಿಂದ ರೂ. 1.5 ಲಕ್ಷಗಳಿಗೆ ಏರಿಸಲಾಗಿದೆ. ಕಳೆದ 40 ವರ್ಷಗಳಿಂದ ಉದ್ಯೋಗಿನಿ ನಿಯಮಗಳು ಬದಲಾಗಿರಲಿಲ್ಲ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications