ಭಾರತ ಸರ್ಕಾರ ದೇಶದ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪರಿಚಯಿಸಿದ್ದು, ಕೈಗೆಟಕುವ ದರದಲ್ಲಿ ಸಾಲ ಒದಗಿಸಲು ಇದು ಸಹಾಯಕವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕೆಂದರೆ ಇನ್ಮುಂದೆ ಮೂರು ದಾಖಲೆಗಳನ್ನು ಸಲ್ಲಿಸಬೇಕು.
ಭಾರತ ಸರ್ಕಾರ ದೇಶದ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪರಿಚಯಿಸಿದ್ದು, ಕೈಗೆಟಕುವ ದರದಲ್ಲಿ ಸಾಲ ಒದಗಿಸಲು ಇದು ಸಹಾಯಕವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕೆಂದರೆ ಇನ್ಮುಂದೆ ಮೂರು ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ರೈತರು ತಮ್ಮ ಕೃಷಿ ಅಗತ್ಯಗಳಿಗಾಗಿ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಇತ್ಯಾದಿಗಳನ್ನು ಖರೀದಿಸಲು ಸಾಂಸ್ಥಿಕ ಹನಕಾಸು ಮೂಲಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿರುವುದರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಕಲ್ಪಿಸಲಾಗಿದೆ. ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ..
ಮೂರು ದಾಖಲಾತಿಗಳು
- ಕಿಸಾನ್ ಕಾರ್ಡ್ ಪಡೆಯಲು ಇಚ್ಚಿಸುವ ರೈತರು ಮೊದಲಿಗೆ ತಾವು ರೈತ ಎಂಬುದಕ್ಕೆ ಸಾಕ್ಷಿ ಒದಗಿಸಬೇಕು.
- ವಾಸದ ದೃಢೀಕರಣ ಪತ್ರ ಒದಗಿಸಬೇಕು.
- ಮೂರನೆಯದಾಗಿ ಬ್ಯಾಂಕ್ ನಲ್ಲಿ ಯಾವುದೇ ಸಾಲ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಲು ಅಫಿಡವಿಟ್ ಸಲ್ಲಿಸುವಂತೆ ತಿಳಿಸಲಾಗಿದೆ.
ಈ ಮೂರು ದಾಖಲೆಗಳೊಂದಿಗೆ ಕಿಸಾನ್ ಕಾರ್ಡ್ ಪಡೆಯಬಹುದು.
ರೂ. 3 ಲಕ್ಷದವರೆಗೆ ಸಾಲ
ಈ ಯೋಜನೆ ಮೂಲಕ ರೈತರು ಕೃಷಿ ಮೇಲೆ ರೂ. 3 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಯನ್ನು ಕೇವಲ ಕೃಷಿಕರಿಗೆ ಮಾತ್ರ ಸೀಮಿತವಾಗಿಸಿಲ್ಲ. ಬದಲಿಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೂ ಸಾಲ ನೀಡುತ್ತಿದೆ.
ಶೇ.7 ಬಡ್ಡಿ ದರ
ಈ ಸಾಲವನ್ನು ರಾಜ್ಯ ಸರ್ಕಾರಗಳು ಬ್ಯಾಂಕ್ ಮತ್ತು ಗ್ರಾಮ ಪಂಚಾಯತಿ ಸಹಾಯದಿಂದ ವಿತರಿಸಬಹುದಾಗಿದೆ.
ಇನ್ನು 3 ಲಕ್ಷದವರೆಗಿನ ಸಾಲಕ್ಕೆ ಇಲ್ಲಿ ಶೇ.7 ರಷ್ಟು ಬಡ್ಡಿ ದರವನ್ನು ವಿಧಿಸಲಾಗಿದೆ. ಅಲ್ಲದೆ ಈ ಸಾಲದ ಮೊತ್ತವನ್ನು 1 ವರ್ಷದೊಳಗೆ ಮರು ಪಾವತಿಸಿದರೆ ಶೇ. 3 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.
ಕಾರ್ಡ್ ಒದಗಿಸುವ ಬ್ಯಾಂಕುಗಳು
ಕಿಸಾನ್ ಕ್ರೆಡಿಟ್ ಕಾರ್ಡ್ ಅನೇಕ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಭಾರತದ ಗ್ರಾಮೀಣ ಬ್ಯಾಂಕುಗಳಿಂದ ನೀಡಲ್ಪಡುತ್ತದೆ. ಅವುಗಳಲ್ಲಿ ಕೆಲವು:
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)
- ಬ್ಯಾಂಕ್ ಆಫ್ ಇಂಡಿಯಾ (BOI)
- ಇಂಡಿಯಾ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ)
- ನಬಾರ್ಡ್
- ನ್ಯಾಷನಲ್ ಪೇಮೆಮಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಪಿಎಂ ಕಿಸಾನ್ ಯೋಜನೆ: ರೈತರು 6 ಸಾವಿರ ಸಹಾಯಧನ ಪಡೆಯುವುದು ಹೇಗೆ?


Click it and Unblock the Notifications