ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದು ಕಡ್ಡಾಯ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಈ ನಿಯಮವನ್ನು ಈಗ ಬದಲಾವಣೆ ಮಾಡಲಾಗಿದೆ. ಒಂದು ಕುಟುಂಬದ ಯಜಮಾನಿಯಾಗಿರುವ ಮಹಿಳೆಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೂ ಕೂಡಾ ಆಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಗುರುವಾರ ಕರ್ನಾಟಕ ರಾಜ್ಯ ಸಚಿವ ಸಂಪುಟವು ನಿರ್ಧಾರ ಮಾಡಿದೆ.
ಒಂದು ಕುಟುಂಬದ ಯಜಮಾನಿಗೆ 2000 ರೂಪಾಯಿಯನ್ನು ನೀಡುವ ಈ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 16ರಿಂದ ಆರಂಭವಾಗುತ್ತದೆ. ಅಂತಿಮ ಗಡುವು ನಿರ್ಧಾರವಾಗಿಲ್ಲ. ಇನ್ನು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಾದ ಫಲಾನುಭವಿಗಳ ಪೈಕಿ ಸುಮಾರು 22 ಲಕ್ಷ ಜನರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲ. ಆದ್ದರಿಂದಾಗಿ ಈ ಮಹಿಳೆಯರಿಗೆ ಈಗ ಸರ್ಕಾರದ ಈ ನಿರ್ಧಾರ ಸಹಾಯವಾಗಲಿದೆ. ಇನ್ನು ಅರ್ಜಿ ಸಲ್ಲಿಕೆಗೆ ಸಹಾಯ ಮಾಡಲು ಸರ್ಕಾರವು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡುತ್ತಿದೆ.

ಈ ಸಂದರ್ಭದಲ್ಲೇ ಬಿಪಿಎಲ್ ಕುಟುಂಬಗಳಿಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ಶೀಘ್ರವೇ ವಿಲೇವಾರಿ ಮಾಡುವುದಕ್ಕಾಗಿ ಕೋಡ್ ಆಫ್ ಸಿವಿಲ್ ಪ್ರೊಸೀಜರ್‌ಗೆ ತಿದ್ದುಪಡಿಯನ್ನು ತರಲು ಕೂಡಾ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಉತ್ತಮ ನಡತೆಗಾಗಿ 63 ಕೈದಿಗಳ ಬಿಡುಗಡೆ, ವೈದ್ಯನಾಥನ್ ಸಮಿತಿ ಅನುಷ್ಠಾನಕ್ಕಾಗಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ ತಿದ್ದುಪಡಿ, ಭೂಸ್ವಾಧೀನಕ್ಕೆ ಸಂಬಂಧಿಸಿದ ಇತರ ಕಾರ್ಯಸೂಚಿಗಳನ್ನು ಸಂಪುಟದಲ್ಲಿ ಚರ್ಚಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಬಗ್ಗೆ ತಿಳಿಯಿರಿ
* ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 16 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
* ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದರ, ಬಿಪಿಎಲ್, ಎಪಿಎಲ್ ಪಡಿತ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿದ್ದಾರೆ.
* ಒಂದು ಕುಟುಂಬದಲ್ಲಿ ಒಂದಕ್ಕಿಂತ ಅಧಿಕ ಮಹಿಳೆಯರು ಇದ್ದರೆ ಎಲ್ಲರಿಗೂ ಈ ಯೋಜನೆಯ ಲಾಭ ಲಭ್ಯವಾಗುವುದಿಲ್ಲ. ಮನೆಯ ಯಜಮಾನಿ ಎಂದು ಗುರುತಿಸಲ್ಪಟ್ಟ ಒಬ್ಬರಿಗೆ ಮಾತ್ರ ಈ ಯೋಜನೆಯ ಮೂಲಕ ಎರಡು ಸಾವಿರ ರೂಪಾಯಿ ಲಭ್ಯವಾಗುತ್ತದೆ.
* ಆನ್‌ಲೈನ್ ಆಪ್, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸ್ಥಳೀಯವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ಅರ್ಜಿ ಸಲ್ಲಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಸಹಾಯ ಪಡೆಯಬಹುದಾಗಿದೆ.
* ನೀವು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಅನುಮೋದನೆಯಾಗಿ ನಿಮಗೆ ಆಗಸ್ಟ್‌ನಲ್ಲಿ ಹಣ ಲಭ್ಯವಾಗಬಹುದು. ಆದರೆ ಬಳಿಕ ನೀವು ಸಲ್ಲಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ ನೀವು ನಕಲಿ ದಾಖಲೆ ಸಲ್ಲಿಸಿರುವುದು ಖಚಿತವಾದರೆ, ಅಥವಾ ನೀವು ತಪ್ಪು ಮಾಹಿತಿ ನೀಡಿದ್ದರೆ, ನಿಮಗೆ ನೀಡಿದ ಹಣವನ್ನು ಹಿಂಪಡೆಯಲಾಗುತ್ತದೆ. ಹಾಗೆಯೇ ನಿಮ್ಮ ವಿರುದ್ಧ ಸೂಕ್ತವಾದ ಕ್ರಮವನ್ನು ಕೈಗೊಳ್ಳಲಾಗುತ್ತದೆ.
ಯಾರು ಯೋಜನೆಗೆ ಅರ್ಹರಲ್ಲ
ಒಂದು ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಅನ್ನು ಸಲ್ಲಿಕೆ ಮಾಡುತ್ತಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. ಇನ್ನು ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರು ಆಗಿದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ ನೋಡಿ
ಹಂತ 1: ಸೇವಾ ಸಿಂಧು ಪೋರ್ಟರ್ ಅಥವಾ ಆಪ್‌ಗೆ ಲಾಗಿನ್ ಆಗಿ
ಹಂತ 2: ಗೃಹಲಕ್ಷ್ಮೀ ಎಂದು ನಮೂದಿಸಲಾಗಿರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಗೃಹ ಲಕ್ಷ್ಮೀ ಯೋಜನೆಗೆ ಆನ್‌ಲೈನ್ ಅರ್ಜಿ ಲಭ್ಯವಾಗುತ್ತದೆ.
ಹಂತ 4: ಅರ್ಜಿಯನ್ನು ಭರ್ತಿ ಮಾಡಿ.
ಹಂತ 5: I agree ಎಂಬುವುದನ್ನು ಕ್ಲಿಕ್ ಮಾಡಿ
ಹಂತ 6: word verification ಎಂದು ಇರುವಲ್ಲಿ ಕಾಣುವ ಸಂಖ್ಯೆಗಳನ್ನು ಬಾಕ್ಸ್‌ನಲ್ಲಿ ನಮೂದಿಸಿ submit ಕ್ಲಿಕ್ ಮಾಡಿ.


Click it and Unblock the Notifications