PM Kisan Yojana: ಪಿಎಂ ಕಿಸಾನ್‌ನ 15ನೇ ಕಂತು ಶೀಘ್ರ ಲಭ್ಯ, ಹೇಗೆ ಅರ್ಜಿ ಸಲ್ಲಿಸುವುದು?

ಲಕ್ಷಾಂತರ ಫಲಾನುಭವಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಮೊತ್ತಕ್ಕಾಗಿ ಕಾಯುತ್ತಿದ್ದಾರೆ. ಈ ಮೊತ್ತವನ್ನು ಸರ್ಕಾರವು ನವೆಂಬರ್ ಮತ್ತು ಡಿಸೆಂಬರ್ 2023 ರ ನಡುವೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಆದರೆ ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.

ಜುಲೈ 27, 2023 ರಂದು ಕೇಂದ್ರವು ಯೋಜನೆಯ 14 ನೇ ಕಂತನ್ನು ಬಿಡುಗಡೆ ಮಾಡಿತ್ತು. ಈಗ 15 ನೇ ಕಂತು ಬಿಡುಗಡೆ ಮಾಡಬೇಕಾಗಿದೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತ ಕುಟುಂಬಗಳು ವಾರ್ಷಿಕವಾಗಿ ಆರು ಸಾವಿರ ರೂಪಾಯಿ ಆರ್ಥಿಕ ಪ್ರಯೋಜನ ಪಡೆಯಬಹುದಾಗಿದೆ. 2000 ರೂಪಾಯಿಯ ಮೂರು ಕಂತಿನಂತೆ ಈ ಮೊತ್ತ ಲಭ್ಯವಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ....

 ಪಿಎಂ ಕಿಸಾನ್‌ನ 15ನೇ ಕಂತು ಶೀಘ್ರ ಲಭ್ಯ, ಹೇಗೆ ಅರ್ಜಿ ಸಲ್ಲಿಸುವುದು?

ಪಿಎಂ ಕಿಸಾನ್ ಯೋಜನೆ ಎಂದರೇನು?

ಕೇಂದ್ರ ವಲಯದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯು ದೇಶದ ಎಲ್ಲಾ ರೈತ ಕುಟುಂಬಗಳಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಂಬಂಧಿಸಿದ ಖರ್ಚಿಗಾಗಿ ಸರ್ಕಾರ ನೀಡುವ ಆದಾಯ ಬೆಂಬಲವಾಗಿದೆ. ಯೋಜನೆಯ ಭಾಗವಾಗಿ, ಫಲಾನುಭವಿಗಳಿಗೆ ಹಣಕಾಸನ್ನು ಸರ್ಕಾರ ನೇರವವಾಗಿ ಖಾತೆಗೆ ಜಮೆ ಮಾಡುತ್ತದೆ.

ಯೋಜನೆ ಪ್ರಯೋಜನ ಪಡೆಯಲು ಯಾರು ಅರ್ಹರು?

ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿ ಹೊಂದಿರುವ, ಜಮೀನು ಹೊಂದಿರುವ ರೈತರು ಯೋಜನೆಯಡಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ತಮ್ಮ ಹೆಸರಿನಲ್ಲಿ ಭೂಮಿ ಹೊಂದಿರುವ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂ ಕಿಸಾನ್) ಲಾಭವನ್ನು ಪಡೆಯುವ ಅರ್ಹತೆಯನ್ನು ಹೊಂದಿರುತ್ತಾರೆ.

ಯೋಜನೆಗೆ ಯಾರು ಅರ್ಹರಲ್ಲ?

* ಸಾಂಸ್ಥಿಕ ಭೂಮಿಯನ್ನು ಹೊಂದಿರುವವರು (ವಸತಿ, ಮನೆ)
* ಸಾಂವಿಧಾನಿಕವಾಗಿ ಅರ್ಹತೆಯನ್ನು ಹೊಂದಿರುವ ರೈತ ಕುಟುಂಬಗಳು
* ರಾಜ್ಯ ಅಥವಾ ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಅಥವಾ ನಿವೃತ್ತ ಅಧಿಕಾರಿಗಳು ಮತ್ತು ನೌಕರರು ರೈತ ಕುಟುಂಬಗಳು
* ವೈದ್ಯರು, ಎಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು
* 10 ರೂಪಾಯಿಗಿಂತ ಅಧಿಕ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಅರ್ಜಿ ಹೀಗೆ ಸಲ್ಲಿಸಿ

ಹಂತ 1: ಅಧಿಕೃತ ವೆಬ್‌ಸೈಟ್ www.pmkisan.gov.inಗೆ ಭೇಟಿ ನೀಡಿ
ಹಂತ 2: ಹೋಮ್‌ಪೇಜ್‌ನಲ್ಲಿ Farmer's Corner ಗೆ ಹೋಗಿ 'New Farmer Registration' ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, ಕ್ಯಾಪ್ಚಾ ಕೋಡ್ ಅನ್ನು ಹಾಕಿ
ಹಂತ 4: click here to continue ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 5: YES ಮೇಲೆ ಕ್ಲಿಕ್ ಮಾಡಿ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ಫಾರ್ಮ್ 2023 ಅನ್ನು ಭರ್ತಿ ಮಾಡಿ
ಹಂತ 6: ಈ ಅರ್ಜಿಯನ್ನು ಭರ್ತಿ ಮಾಡಿದ ಬಳಿಕ ಅದನ್ನು ಸೇವ್ ಮಾಡಿ, ಪ್ರಿಂಟ್‌ ಔಟ್‌ ಅನ್ನು ತೆಗೆಯಿರಿ

ಸ್ಟೇಟಸ್ ಪರಿಶೀಲನೆ ಮಾಡುವುದು ಹೇಗೆ?

ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್‌ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+