ಜನವರಿ ಅಂತ್ಯದಲ್ಲಿ ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿದೆ ಎಂದು ಆರೋಪಿಸಿ ಹಿಂಡನ್‌ಬರ್ಗ್ ವರದಿ ಮಾಡಿದೆ. ಇದಾದ ಬಳಿಕ ಸ್ಟಾಕ್ ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ನಷ್ಟವನ್ನು ಕಂಡಿದೆ. ಆದರೆ ಮಾರುಕಟ್ಟೆಯಲ್ಲಿ ಯಾವುದೇ ನಕಲಿ ಟ್ರೇಡಿಂಗ್ ಕಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ಯಾನೆಲ್ ಹೇಳಿದ ಬಳಿಕ ಸ್ಟಾಕ್ ಮೌಲ್ಯ ಏರಿಕೆಯಾಗುತ್ತಿದೆ.
ಅದರಲ್ಲೂ ಮುಖ್ಯವಾಗಿ ಕಳೆದ ಎರಡು ದಿನಗಳು ಸ್ಟಾಕ್ ಮಾರುಕಟ್ಟೆಯಲ್ಲಿ ಬಿಲಿಯನೇರ್ ಗೌತಮ್ ಅದಾನಿಗೆ ಅತೀ ಹೆಚ್ಚಿನ ಲಾಭ ಉಂಟಾಗಿದೆ. ಗೌತಮ್ ಅದಾನಿಯು ಕಳೆದ ಎರಡು ದಿನದಲ್ಲಿ ದೇಶದ ಅತೀ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿರುವ ಮುಕೇಶ್ ಅಂಬಾನಿಗಿಂತ ಅಧಿಕ ಗಳಿಸಿದ್ದಾರೆ. ಎರಡು ದಿನದಲ್ಲೇ ಗೌತಮ್ ಅದಾನಿಯ ನಿವ್ವಳ ಆದಾಯ 9.73 ಬಿಲಿಯನ್ ಡಾಲರ್ ಅಥವಾ 80,000 ಕೋಟಿ ರೂಪಾಯಿ ಏರಿಕೆಯಾಗಿದೆ.

ಬ್ಲ್ಯೂಬರ್ಗ್ ಬಿಲಿಯನೇರ್ ರಿಸರ್ಚ್ ಪ್ರಕಾರ ಪ್ರಸ್ತುತ ಗೌತಮ್ ಅದಾನಿಯ ನಿವ್ವಳ ಆದಾಯವು ಪ್ರಸ್ತುತ 64.2 ಬಿಲಿಯನ್ ಡಾಲರ್‌ಗೆ (5,14,000 ಕೋಟಿ ರೂಪಾಯಿ) ತಲುಪಿದೆ. ಈ ಹಿಂದೆ ವಿಶ್ವದಲ್ಲೇ ಎರಡನೇ ಅತೀ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದ ಗೌತಮ್ ಅದಾನಿಯು ಹಿಂಡನ್‌ಬರ್ಗ್ ವರದಿಯ ಬಳಿಕ ಟಾಪ್ 20ವರೆಗೆ ತಲುಪಿದ್ದಾರೆ.
ಪ್ರಸ್ತುತ ಗೌತಮ್ ಅದಾನಿಯು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದಾರೆ. ಸೋಮವಾರ ಗೌತಮ್ ಅದಾನಿಯ ನಿವ್ವಳ ಆದಾಯವು 5.35 ಬಿಲಿಯನ್ ಡಾಲರ್ ಏರಿಕೆಯಾಗಿದೆ. ಮಂಗಳವಾರ ಅದಾನಿಯು 4.38 ಬಿಲಿಯನ್ ಡಾಲರ್ ಹೆಚ್ಚಳವಾಗಿದೆ. ಆದರೆ ಹಿಂಡನ್‌ಬರ್ಗ್ ವರದಿಯ ಬಳಿಕ ಗೌತಮ್ ಅದಾನಿ ಸುಮಾರು 56.4 ಬಿಲಿಯನ್ ಡಾಲರ್ ಕಳೆದುಕೊಂಡಿದ್ದಾರೆ.
ಗೌತಮ್ ಅದಾನಿ ಸಂಸ್ಥೆಯು ಸ್ಟಾಕ್ ಮಾರುಕಟ್ಟೆಯಲ್ಲಿ ಸ್ಟಾಕ್ ಮ್ಯಾನಿಪುಲೇಷನ್ ಮಾಡುತ್ತಿದೆ ಎಂದು ಹಿಂಡನ್‌ಬರ್ಗ್ ವರದಿಯು ಆರೋಪ ಮಾಡಿದೆ. ಹೀಗೆಯೇ ಹಲವಾರು ವಂಚನೆಗಳನ್ನು ಮಾಡಿದೆ ಎಂದು ಆರೋಪಿಸಿದೆ. ಆದರೆ ಈ ಎಲ್ಲ ಆರೋಪಗಳನ್ನು ಅದಾನಿ ಗ್ರೂಪ್ ಅಲ್ಲಗಳೆದಿದೆ. ಇನ್ನು ಒಂದು ತಿಂಗಳ ಅವಧಿಯಲ್ಲಿಯೇ ಅದಾನಿ ಗ್ರೂಪ್ ಮಾರುಕಟ್ಟೆ ಮೌಲ್ಯವು 12 ಲಕ್ಷ ಕೋಟಿ ರೂಪಾಯಿ ಇಳಿಕೆಯಾಗಿದೆ. ಪ್ರಸ್ತುತ ಅದಾನಿ ಏಷ್ಯಾದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಈ ನಡುವೆ ಮುಕೇಶ್ ಅಂಬಾನಿ ಏಷ್ಯಾದ ಮೊದಲ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಂಬಾನಿ ನಿವ್ವಳ ಆದಾಯವು 84.1 ಬಿಲಿಯನ್ ಡಾರಲ್ ಆಗಿದೆ. ಹಾಗೆಯೇ ವಿಶ್ವದ 13ನೇ ಶ್ರೀಮಂತ ಮಹಿಳೆಯಾಗಿದ್ದಾರೆ. ಮುಕೇಶ್ ಅಂಬಾನಿ ನಿವ್ವಳ ಆದಾಯವು 55 ಲಕ್ಷ ಡಾಲರ್‌ನಷ್ಟು ಏರಿಕೆಯಾಗಿದೆ. ಆದರೆ ಸ್ಟಾಕ್ ಮಾರುಕಟ್ಟೆಯ ವಿಚಾರಕ್ಕೆ ಬಂದಾಗ ಅದಾನಿಯು ಮುಕೇಶ್ ಅಂಬಾನಿಯಗೂ ಮೇಲಿದ್ದಾರೆ.
ಹಿಂಡನ್‌ಬರ್ಗ್ ವರದಿ ಏನು ಹೇಳಿದೆ?
ಹಿಂಡನ್‌ಬರ್ಗ್ ತನಿಖಾ ವರದಿಯು ಅದಾನಿ ಗ್ರೂಪ್ ವಂಚನೆಯನ್ನು ಭಾಗಿಯಾಗಿದೆ. ದಶಕಗಳಿಂದ ವಂಚನೆ ನಡೆಸುತ್ತಿದೆ. ಅದಾನಿ ಗ್ರೂಪ್ ಬಗ್ಗೆ ಸುಮಾರು ಎರಡು ವರ್ಷಗಳ ಕಾಲ ತನಿಖೆಯನ್ನು ನಡೆಸಿ ವರದಿ ನೀಡಲಾಗಿದೆ. ಅದಾನಿ ಗ್ರೂಪ್‌ನ ಹಲವಾರು ವ್ಯಕ್ತಿಗಳ ಸಂದರ್ಶನ ಮಾಡಲಾಗಿದೆ. ಮಾಜಿ ಹಿರಿಯ ಅಧಿಕಾರಿಗಳ ಸಂದರ್ಶನವನ್ನು ಕೂಡಾ ಮಾಡಲಾಗಿದೆ. ದಾಖಲೆಗಳು ನಮ್ಮಲ್ಲಿದೆ ಎಂದು ಹಿಂಡನ್‌ಬರ್ಗ್ ಮಾಹಿತಿ ನೀಡಿದೆ.
ಜನವರಿ 24ರಂದು ವರದಿ ಬಿಡುಗಡೆ ಮಾಡಿರುವ ಹಿಂಡನ್‌ಬರ್ಗ್, ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಬಗ್ಗೆ ನಾವು ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದೇವೆ. 12ರಷ್ಟು ದೇಶಗಳಿಗೆ ಭೇಟಿ ನೀಡಿ ಸ್ವತಃ ಸ್ಥಳ ಪರಿಶೀಲನೆ ಮಾಡಿದ್ದೇವೆ. ಇದರಿಂದಾಗಿ ಅದಾನಿ ಗ್ರೂಪ್‌ಯು ವಂಚನೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ ಎಂದು ವರದಿ ಹೇಳಿದೆ.
ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್‌ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.


Click it and Unblock the Notifications