ಬಡ ಮಹಿಳೆಯರಿಗೆ ನಗದು ಪ್ರೋತ್ಸಾಹ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿಗೆ 86 ಲಕ್ಷಕ್ಕೂ ಹೆಚ್ಚು ಜನರು ನೋಂದಣಿಯನ್ನು ಮಾಡಿದ್ದಾರೆ. ಸೋಮವಾರ ಸಂಜೆಯವರೆಗೆ 86,59,467 ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಆರಂಭದಲ್ಲೇ ದಿನಕ್ಕೆ ಸುಮಾರು ನಾಲ್ಕೈದು ಲಕ್ಷ ರಿಜಿಸ್ಟ್ರೇಷನ್ ನಡೆದಿದೆ. ಆದರೆ ಅದು ಬಳಿಕ ಕಡಿಮೆಯಾಗಿದೆ.
ಪ್ರಸ್ತುತ ಆರಂಭದಲ್ಲಿ ಆದಷ್ಟು ರಿಜಿಸ್ಟ್ರೇಷನ್ ದೈನಂದಿನವಾಗಿ ನಡೆಯದಿದ್ದರೂ ಕೂಡಾ ಈಗ ಪ್ರತಿ ದಿನದಲ್ಲಿ ಸುಮಾರು ಮೂರು-ನಾಲ್ಕು ಲಕ್ಷ ಮಂದಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಸಂಜೆಯವರೆಗೆ ನಾವು ನೋಡಿದಾಗ 86,59,467 ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾದ ಮೊದಲಲ್ಲಿ ದಿನಕ್ಕೆ ಸುಮಾರು ನಾಲ್ಕೈದು ಲಕ್ಷ ಮಂದಿಯು ಅರ್ಜಿ ಸಲ್ಲಿಸುತ್ತಿದ್ದರು. ಆದರೆ ಅದಾದ ಬಳಿಕ ಈ ನೋಂದಣಿ ಪ್ರಕ್ರಿಯೆಯು ಮೂರು-ನಾಲ್ಕು ಲಕ್ಷಕ್ಕೆ ನಿಧಾನಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತಾಂತ್ರಿಕ ದೋಷ ಮತ್ತು ವಿದ್ಯುತ್ ಕಡಿತದ ಕಾರಣವನ್ನು ಹೊರತುಪಡಿಸಿ ಬೇರೆ ಯಾವುದೇ ಕಾರಣಗಳಿದ್ದರೂ ಕೂಡಾ ಅದನ್ನು ಪರಿಗಣಿಸದೆ ಅರ್ಜಿ ಸಲ್ಲಿಸಲು ಆದೇಶ ನೀಡಲಾಗಿದೆ.
ಅರ್ಜಿ ಸಲ್ಲಿಸುವಾಗ ಕಂಡುಬರುತ್ತಿರುವ ಸಮಸ್ಯೆ
ಗ್ರಾಮ ಪಂಚಾಯತ್ ಅಥವಾ ಮುನ್ಸಿಪಲ್ ಕಾರ್ಪೊರೇಷನ್‌ಗಳಂತಹ ಸರ್ಕಾರಿ ಏಜೆನ್ಸಿಗಳು ಅಥವಾ ಸರ್ಕಾರಿ ಅನುಮೋದಿತ ಏಜೆಂಟ್‌ಗಳು ಅರ್ಜಿಯನ್ನು ಅಪ್‌ಲೋಡ್ ಮಾಡಬೇಕು ಎಂದು ಆದೇಶಿಸಲಾಗಿದೆ. ಅದರಲ್ಲೂ ಹಳ್ಳಿಗಳಲ್ಲಿ ವಿದ್ಯುತ್ ಕಡಿತದ ಸಮಸ್ಯೆ ಸಾಮಾನ್ಯವಾಗಿದೆ. ಸರ್ವರ್ ಓವರ್ ಲೋಡ್ ಗ್ರಾಮ ಮತ್ತು ಪಟ್ಟಣಗಳ ನಿವಾಸಿಗಳನ್ನು ಕಾಡುತ್ತಿರುವ ಮತ್ತೊಂದು ಸಮಸ್ಯೆಯಾಗಿದೆ.
ವಿದ್ಯುನ್ಮಾನ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುವ ಅತ್ಯಂತ ಬಲಿಷ್ಠ ತಾಂತ್ರಿಕ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತರುತ್ತಿರುವುದರಿಂದ ಯೋಜನೆಯು ಸರ್ವರ್ ಓವರ್‌ಲೋಡ್‌ನಿಂದ ತೊಂದರೆಗೆ ಒಳಗಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಸಿದ್ಧತೆಗಳಿಗೆ ಅಧಿಕ ಸಮಯ ಬೇಕಾದ ಕಾರಣದಿಂದಾಗಿ ಯೋಜನೆಯ ಪ್ರಾರಂಭವು ವಿಳಂಬವಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಆದರೆ ಸಮಸ್ಯೆಗಳು ಈಗಲೂ ಕೂಡಾ ಇದೆ. ಈ ಯೋಜನೆಗೆ ನಾವು ಅರ್ಜಿಯನ್ನು ಆನ್‌ಲೈನ್ ಮೂಲಕ ಅಥವಾ ಆಫ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಅಪ್‌ಲೋಡ್ ಮಾಡುವ ಏಜೆನ್ಸಿ ಪರಿಶೀಲಿಸಬೇಕಾಗಿದೆ.
ಎಲ್ಲಾ ಅರ್ಜಿದಾರರಿಗೆ ಕಚೇರಿಗೆ ಹಿಂತಿರುಗಲು ಮತ್ತು ಅಪ್‌ಲೋಡ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ದಿನಾಂಕವನ್ನು ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಾಕಷ್ಟು ಸಮಯ ಹಿಡಿಯುತ್ತಿದ್ದು, ಗೊಂದಲ ಉಂಟಾಗುತ್ತಿದೆ ಎನ್ನುತ್ತಾರೆ ಆಕಾಂಕ್ಷಿ ಫಲಾನುಭವಿಗಳು. ಸರ್ಕಾರವು ಈ ಅರ್ಜಿ ಸಲ್ಲಿಕೆಯನ್ನು ಸ್ವಯಂಚಾಲಿತಗೊಳಿಸಬೇಕು ಎಂದು ಹೇಳಿದೆ.
ಇನ್ನು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಮಧ್ಯಸ್ಥರಿಂದ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೂಡಾ ಕೇಳಿಬಂದಿದೆ. ಅರ್ಜಿ ಸಲ್ಲಿಸುವವರು ನಮಗೆ ಹಣ ನೀಡಿದರೆ ಮಾತ್ರ ನಾವು ನಿಮ್ಮ ಅರ್ಜಿ ಅಪ್‌ಲೋಡ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂಬ ಆರೋಪವಿದೆ.
ಯೋಜನೆ ಬಗ್ಗೆ ಮಾಹಿತಿ
ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಿಂದ ಆರಂಭವಾಗಿದೆ. ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.
ಯಾರು ಯೋಜನೆಗೆ ಅರ್ಹರಲ್ಲ
ಒಂದು ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಅನ್ನು ಸಲ್ಲಿಕೆ ಮಾಡುತ್ತಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. ಇನ್ನು ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರು ಆಗಿದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.


Click it and Unblock the Notifications