ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಜಾರಿ ಮಾಡಲು ಆರಂಭ ಮಾಡಿದೆ. ಈ ಐದು ಯೋಜನೆಗಳಲ್ಲಿ 3 ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖವಾಗಿ ಒತ್ತು ನೀಡುವ, ಮಹಿಳೆಯರಿಗೆ ಸಹಾಯ ಮಾಡುವ ಯೋಜನೆಯಾಗಿದೆ. ಇನ್ನು ಅನ್ನಭಾಗ್ಯ ಯೋಜನೆಯು ಇಡೀ ಕುಟುಂಬಕ್ಕೆ ಆಸರೆಯಾದ ಯೋಜನೆಯಾಗಿದೆ. ಈ ಪೈಕಿ ಗೃಹಲಕ್ಷ್ಮೀ ಯೋಜನೆಯು ಮುಂದಿನ ತಿಂಗಳಿನಿಂದ ಆರಂಭವಾಗಲಿದೆ.
ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಅಷ್ಟಕ್ಕೂ ಈ ಹಣವನ್ನು ಎಲ್ಲರಿಗೂ ನೀಡಲಾಗುವುದಿಲ್ಲ. ಈ ಯೋಜನೆಯಲ್ಲಿ ಹಲವಾರು ಷರತ್ತುಗಳು ಕೂಡಾ ಇದೆ. ಆ ಷರತ್ತುಗಳೇನು, ಮಹಿಳೆಯರಿಗೆ ಈ ಯೋಜನೆ ಎಷ್ಟು ಸಹಾಯವಾಗಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

ಏನಿದು ಗೃಹಲಕ್ಷ್ಮೀ ಯೋಜನೆ, ಉದ್ದೇಶವೇನು?
ಒಂದು ಕುಟುಂಬವೆಂದಾಗ ಅದರಲ್ಲಿ ಮನೆಯ ಯಜಮಾನಿಯ ಪಾತ್ರ ಅತೀ ಮುಖ್ಯವಾಗಿದೆ. ಈ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಮನೆಯ ಯಜಮಾನಿಯು ಆರ್ಥಿಕವಾಗಿ ಸಬಲೀಕರಣ ಹೊಂದಿದ್ದರೆ ಮಾತ್ರ ಆ ಕುಟುಂಬವನ್ನು ಉತ್ತಮವಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಈ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಎರಡು ಸಾವಿರ ರೂಪಾಯಿಯನ್ನು ನೀಡಲಾಗುತ್ತದೆ.
ಈ ಯೋಜನೆಯ ಮಾರ್ಗಸೂಚಿ, ಮಾನದಂಡಗಳು
* ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 16 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. * ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದರ, ಬಿಪಿಎಲ್, ಎಪಿಎಲ್ ಪಡಿತ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿದ್ದಾರೆ.
* ಒಂದು ಕುಟುಂಬದಲ್ಲಿ ಒಂದಕ್ಕಿಂತ ಅಧಿಕ ಮಹಿಳೆಯರು ಇದ್ದರೆ ಎಲ್ಲರಿಗೂ ಈ ಯೋಜನೆಯ ಲಾಭ ಲಭ್ಯವಾಗುವುದಿಲ್ಲ. ಮನೆಯ ಯಜಮಾನಿ ಎಂದು ಗುರುತಿಸಲ್ಪಟ್ಟ ಒಬ್ಬರಿಗೆ ಮಾತ್ರ ಈ ಯೋಜನೆಯ ಮೂಲಕ ಎರಡು ಸಾವಿರ ರೂಪಾಯಿ ಲಭ್ಯವಾಗುತ್ತದೆ.
* ಆನ್‌ಲೈನ್ ಆಪ್, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸ್ಥಳೀಯವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ಅರ್ಜಿ ಸಲ್ಲಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಸಹಾಯ ಪಡೆಯಬಹುದಾಗಿದೆ.
* ಯೋಜನೆಯ ಲಾಭ ಪಡೆಯಬೇಕಾದರೆ ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕಾಗುತ್ತದೆ.
* ನೀವು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಅನುಮೋದನೆಯಾಗಿ ನಿಮಗೆ ಆಗಸ್ಟ್‌ನಲ್ಲಿ ಹಣ ಲಭ್ಯವಾಗಬಹುದು. ಆದರೆ ಬಳಿಕ ನೀವು ಸಲ್ಲಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ ನೀವು ನಕಲಿ ದಾಖಲೆ ಸಲ್ಲಿಸಿರುವುದು ಖಚಿತವಾದರೆ, ಅಥವಾ ನೀವು ತಪ್ಪು ಮಾಹಿತಿ ನೀಡಿದ್ದರೆ, ನಿಮಗೆ ನೀಡಿದ ಹಣವನ್ನು ಹಿಂಪಡೆಯಲಾಗುತ್ತದೆ. ಹಾಗೆಯೇ ನಿಮ್ಮ ವಿರುದ್ಧ ಸೂಕ್ತವಾದ ಕ್ರಮವನ್ನು ಕೈಗೊಳ್ಳಲಾಗುತ್ತದೆ.
ಯಾರು ಯೋಜನೆಗೆ ಅರ್ಹರಲ್ಲ
ಒಂದು ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಅನ್ನು ಸಲ್ಲಿಕೆ ಮಾಡುತ್ತಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. ಇನ್ನು ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರು ಆಗಿದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ಮಹಿಳೆಯರಿಗೆ ಹೇಗೆ ಈ ಯೋಜನೆ ಸಹಾಯಕ
ಆರಂಭದಲ್ಲಿ ಈ ಯೋಜನೆಯಿಂದ ಎಲ್ಲ ಮಹಿಳೆಯರಿಗೂ ಹಣ ಲಭಿಸುತ್ತದೆ, ಅದರಿಂದ ಅಗತ್ಯವಿಲ್ಲದವರಿಗೂ ಹಣ ನೀಡಿದಂತಾಗುತ್ತದೆ ಎಂಬ ವಾದವಿತ್ತು. ಆದರೆ ಈ ಯೋಜನೆಯ ಸಂಪೂರ್ಣ ರೂಪವನ್ನು ನಾವು ನೋಡಿದಾಗ ಇದು ಪ್ರಮುಖವಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಮಾತ್ರ ಲಭ್ಯವಾಗುತ್ತದೆ ಎಂಬುವುದು ಖಚಿತವಾಗುತ್ತದೆ. ಅದು ಕೂಡಾ ಆಕೆ ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಗುರುತಿಸಿರಬೇಕಾಗುತ್ತದೆ.
ಈ ಯೋಜನೆಯು ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ನೀಡುವುದು ಮಾತ್ರವಲ್ಲದೆ, ಪುರುಷಪ್ರಧಾನ ಸಮಾಜದಲ್ಲಿನ ಒಂದು ವ್ಯವಸ್ಥೆಯ ಬದಲಾವಣೆಗೂ ಕಾರಣವಾಗುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಪತಿ ಮರಣ ಹೊಂದಿರುವ ಅಥವಾ ಪತಿ ಇಲ್ಲದೆ ಒಬ್ಬರೇ ಮಕ್ಕಳನ್ನು ನೋಡಿಕೊಳ್ಳುವ ಒಂದು ಕುಟುಂಬದಲ್ಲಿ ಮಹಿಳೆಯು ಪಡಿತರದಲ್ಲಿ ಯಜಮಾನಿ ಎಂದು ಗುರುತಿಸಲ್ಪಡುತ್ತಾರೆ. ಉಳಿದಂತೆ ಪುರುಷರು ಮನೆಯ ಯಜಮಾನರು ಎಂದು ಗುರುತಿಸಲ್ಪಡುತ್ತಾರೆ.
ಈ ಯೋಜನೆಯು ಪ್ರಮುಖವಾಗಿ ಹಣಕಾಸು ಸಹಾಯದ ಅಗತ್ಯವಿರುವವರಿಗೆ ಸಹಾಯಕವಾಗಲಿದೆ. ಒಂದು ಮಹಿಳೆಗೆ ಲಭ್ಯವಾಗುವ 2 ಸಾವಿರ ರೂಪಾಯಿ ಆಕೆಗೆ ಅತೀ ಮುಖ್ಯವಾಗುತ್ತದೆ. ಆಕೆಯ ಔಷಧಿ, ತಮಗೆ ಬೇಕಾದ್ದನ್ನು ಪಡೆದುಕೊಳ್ಳಲು ಮಹಿಳೆಯರು ತಮ್ಮ ಮಕ್ಕಳ, ಪತಿಯ ಮೇಲೆ ಅವಲಂಭಿತವಾಗುವುದು ತಪ್ಪುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ನೋಡಿ
ಹಂತ 1: ಸೇವಾ ಸಿಂಧು ಪೋರ್ಟರ್ ಅಥವಾ ಆಪ್‌ಗೆ ಲಾಗಿನ್ ಆಗಿ
ಹಂತ 2: ಗೃಹಲಕ್ಷ್ಮೀ ಎಂದು ನಮೂದಿಸಲಾಗಿರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಗೃಹ ಲಕ್ಷ್ಮೀ ಯೋಜನೆಗೆ ಆನ್‌ಲೈನ್ ಅರ್ಜಿ ಲಭ್ಯವಾಗುತ್ತದೆ.
ಹಂತ 4: ಅರ್ಜಿಯನ್ನು ಭರ್ತಿ ಮಾಡಿ.
ಹಂತ 5: I agree ಎಂಬುವುದನ್ನು ಕ್ಲಿಕ್ ಮಾಡಿ
ಹಂತ 6: word verification ಎಂದು ಇರುವಲ್ಲಿ ಕಾಣುವ ಸಂಖ್ಯೆಗಳನ್ನು ಬಾಕ್ಸ್‌ನಲ್ಲಿ ನಮೂದಿಸಿ submit ಕ್ಲಿಕ್ ಮಾಡಿ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications