ನಮ್ಮಲ್ಲಿರುವ ಅಗತ್ಯ ದಾಖಲೆಗಳ ಪೈಕಿ ರೇಷನ್ ಕಾರ್ಡ್ ಕೂಡಾ ಒಂದಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.
ಅನ್ನಭಾಗ್ಯ ಯೋಜನೆಯಡಿಯಲ್ಲಿ ಹತ್ತು ಕೆಜಿ ಅಕ್ಕಿ ಒದಗಿಸುವ ಭರವಸೆಯನ್ನು ನೀಡಲಾಗಿತ್ತು, ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಐದು ಕೆಜಿ ಅಕ್ಕಿದೆ ಒಟ್ಟು 170 ರೂಪಾಯಿಗಳನ್ನು ಖಾತೆಗೆ ವರ್ಗಾಯಿಸುತ್ತದೆ. ಇದನ್ನು ಹೊರತುಪಡಿಸಿ ಗೃಹಲಕ್ಷ್ಮೀ ಯೋಜನೆಗೂ ಕೂಡಾ ರೇಷನ್ ಕಾರ್ಡ್ ಮುಖ್ಯವಾಗುತ್ತದೆ.

ನಿಮ್ಮ ಮೊಬೈಲ್ ಫೋನ್‌ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ನೀವು ಸುಲಭವಾಗಿ ಪರಿಶೀಲಿಸಬಹುದು. ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಗಾಗಿ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯನ್ನು ಪ್ರಾರಂಭಿಸಿದೆ. ಇದು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಒದಗಿಸುತ್ತದೆ. ಹಣವನ್ನು ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೇಗೆ ಪರಿಶೀಲಿಸುವುದು ನೋಡಿ...
ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ
- ಹಂತ 1: ಕರ್ನಾಟಕ ಸರ್ಕಾರದ ವೆಬ್‌ಸೈಟ್ https://www.karnataka.gov.in/ ಗೆ ಭೇಟಿ ನೀಡಿ
- ಹಂತ 2: E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಹಂತ 3: DBT status ಲಿಂಕ್ ಅನ್ನು ಕ್ಲಿಕ್ ಮಾಡಿಕೊಳ್ಳಿ
- ಹಂತ 4: ನಿಮ್ಮ ರೇಷನ್ ಕಾರ್ಡ್‌ನಲ್ಲಿ ಯಾವ ಸಮಯದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಎಂದು ಆಯ್ಕೆಮಾಡಿಕೊಳ್ಳಿ
- ಹಂತ 5: ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಿ. Continue ಮೇಲೆ ಕ್ಲಿಕ್ ಮಾಡಿ.
- ಹಂತ 6: ಅನ್ನಭಾಗ್ಯ ಯೋಜನೆಯಡಿಯಲ್ಲಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತದೆ.
ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.
ಆನ್‌ಲೈನ್‌ನಲ್ಲಿ ರೇಷನ್ ಕಾರ್ಡ್ ಬದಲಾಯಿಸುವುದು ಹೇಗೆ?
- ಹಂತ 1: https://ahara.kar.nic.in/ಗೆ ಲಾಗ್ ಇನ್ ಆಗಿ
- ಹಂತ 2: ಮೇನ್ ಪೇಜ್‌ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
- ಹಂತ 3: ಅದಾದ ಬಳಿಕ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕಾಣಿಸಲಿದೆ, ಅಲ್ಲಿ ಕ್ಲಿಕ್ ಮಾಡಿರಿ
- ಹಂತ 4: ಈಗ ಹೊಸ ಪೇಜ್ ತೆರೆಯಲಿದೆ.
- ಹಂತ 5: ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಹಂತ 6: ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
- ಹಂತ 7: ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ
- ಹಂತ 8: ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿರಿ
- ಹಂತ 9: ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ
- ಹಂತ 10: ಈ ನಂಬರ್ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗಲಿದೆ.
ಇನ್ನು ಅಕ್ಟೋಬರ್ ತಿಂಗಳಲ್ಲೇ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ನೀಡಲು ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಕೆಲವೆಡೆ ಬರ ಉಂಟಾಗುವ ಸಾಧ್ಯತೆಯಿದೆ. ಆದರೆ ಶೀಘ್ರವೇ ಮಳೆಯಾಗಬಹುದು. ಕೃಷಿಯು ಸುಧಾರಿಸುವ ನಿರೀಕ್ಷೆಯಿದೆ. ಈ ನಡುವೆ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು.
ಆರಂಭದಲ್ಲಿ ನಾವು ಹತ್ತು ಕೆಜಿ ಅಕ್ಕಿ ನೀಡುವ ಘೋಷಣೆ ಮಾಡಿದ್ದರೂ ಅಕ್ಕಿ ಕೊರತೆಯಿಂದಾಗಿ ಕೊಡಲು ಸಾಧ್ಯವಾಗಿಲ್ಲ. ಅಕ್ಕಿ ಬದಲಾಗಿ ಹಣ ನೀಡುವ ನಿರ್ಧಾರವನ್ನು ನಾವು ಮಾಡಿದೆವು. ಈಗ ಅಕ್ಕಿ ಕೊರತೆ ಸರಿಯಾಗುತ್ತಿದ್ದಂತೆ ಬರಪೀಡಿತ ಪ್ರದೇಶದಲ್ಲಿ ಜನರಿಗೆ ಹಣದ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.


Click it and Unblock the Notifications