ಸರ್ಕಾರದ ಬಹುತೇಕ ಎಲ್ಲ ಕಾರ್ಯಗಳಿಗೆ ಆಧಾರ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ. ಸರ್ಕಾರದ ಯಾವುದೇ ಒಂದು ಯೋಜನೆಗಳ ಪ್ರಯೋಜನವನ್ನು ಪಡೆಯಬೇಕಾದರೆ, ಆಧಾರ್ ಕಾರ್ಡ್ ಹೊಂದಿರುವುದು ಮುಖ್ಯವಾಗಿದೆ. ಹಾಗೆಯೇ ನಮ್ಮಲ್ಲಿರುವ ಪ್ರಮುಖ ದಾಖಲೆಗಳೊಂದಿಗೆ, ಖಾತೆಗಳೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕೂಡಾ ಮುಖ್ಯವಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ನೀವು ಆಧಾರ್ ಕಾರ್ಡ್ ಲಿಂಕ್ ಮಾಡಿದ್ದೀರಾ?
ಹೌದು ಸರ್ಕಾರದ ಎಲ್ಲ ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಇದರಿಂದಾಗಿ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಬ್ಯಾಂಕ್‌ಗೆ ಲಿಂಕ್ ಮಾಡಬೇಕು ಎಂದು ಕಂದಾಯ ಇಲಾಖೆ ಘೋಷಿಸಿದೆ. ನೀವು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ನಿಮ್ಮ ಬ್ಯಾಂಕ್ ಅನ್ನು ಆಧಾರ್‌ಗೆ ಲಿಂಕ್ ಮಾಡಬಹುದು. ನಿಮ್ಮ ಆಧಾರ್ ಅನ್ನು ನಿಮ್ಮ ಬ್ಯಾಂಕ್ ಖಾತೆಗೆ ನೀವು ಆನ್‌ಲೈನ್ ಮೂಲಕ ಲಿಂಕ್ ಮಾಡಲು ಬಯಸಿದರೆ, ಬ್ಯಾಂಕ್‌ನ ಇಂಟರ್‌ನೆಟ್ ಬ್ಯಾಂಕಿಂಗ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ನೋಡಿ?
ಹಂತ 1: ನಿಮ್ಮ ಮೊಬೈಲ್ ಆಪ್‌ಗೆ ಸೈನ್ ಇನ್ ಆಗಿ
ಹಂತ 2: My Accountನಲ್ಲಿನ Services ಪೇಜ್‌ನಲ್ಲಿ View/Update Aadhaar card details ಕ್ಲಿಕ್ ಮಾಡಿ
ಹಂತ 3: ನಿಮ್ಮ ಆಧಾರ್ ಸಂಖ್ಯೆಯನ್ನು ಎರಡು ಬಾರಿ ನಮೂದಿಸಿ, ಅದಾದ ಬಳಿಕ submit ಬಟನ್ ಅನ್ನು ಕ್ಲಿಕ್ ಮಾಡಿ
ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾದ ಬಳಿಕ ಈ ಬಗ್ಗೆ ನಿಮಗೆ ನೊಟೀಫಿಕೇಷನ್ ಲಭ್ಯವಾಗಲಿದೆ. ನೀವು ಮೊಬೈಲ್‌ನಲ್ಲಿ ಅಲ್ಲದೆ ಆಫ್‌ಲೈನ್ ಮೂಲಕವು ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬಹುದಾಗಿದೆ. ಸ್ಥಳೀಯ ಬ್ಯಾಂಕ್ ಬ್ರ್ಯಾಂಚ್‌ಗೆ ಭೇಟಿ ನೀಡುವ ಮೂಲಕ ನೀವು ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬಹುದಾಗಿದೆ.
ನೀವು ಬ್ಯಾಂಕ್‌ಗೆ ಭೇಟಿ ನೀಡಿ ಕೂಡಾ ನೀವು ಆಧಾರ್ ಕಾರ್ಡ್ ಅನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬಹುದಾಗಿದೆ. ಅದಕ್ಕಾಗಿ ಬ್ಯಾಂಕ್‌ನಿಂದ ಫಾರ್ಮ್ ಪಡೆದು ಫಾರ್ಮ್ ಅನ್ನು ಭರ್ತಿ ಮಾಡಿಕೊಳ್ಳಿ. ಫಾರ್ಮ್‌ನೊಂದಿಗೆ ನಿಮ್ಮ ಸಹಿ ಹಾಗೂ ದಿನಾಂಕವನ್ನು ನಮೂದಿ ಮಾಡಿದ ಆಧಾರ್ ಕಾರ್ಡ್ ಪ್ರತಿಯನ್ನು ಕೂಡಾ ಸೇರಿಸಿಕೊಳ್ಳಿ. ಇದನ್ನು ಕೌಂಟರ್‌ಗೆ ನೀಡಿ. ಇಲ್ಲಿ ನಿಮ್ಮ ಒರಿಜಿನಲ್ ಆಧಾರ್ ಕಾರ್ಡ್ ಅನ್ನು ತೋರಿಸುವಂತೆ ಹೇಳಲಾಗುತ್ತದೆ.
ನಿಮ್ಮ ಫಾರ್ಮ್ ಅನ್ನು ಸ್ವೀಕರಿಸಲಾಗುತ್ತದೆ, ಆದರೆ ನಿಮ್ಮ ಬ್ಯಾಂಕ್ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಲು ಕೆಲವು ದಿನಗಳನ್ನು ಬೇಕಾಗುತ್ತದೆ. ಆಧಾರ್ ಲಿಂಕ್ ಮಾಡಿದ ನಂತರ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮೆಸೇಜ್ ಬರಲಿದೆ. ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿರುವ ಬಗ್ಗೆ ಈ ಮೆಸೇಜ್‌ನಲ್ಲಿ ಉಲ್ಲೇಖ ಮಾಡಲಾಗುತ್ತದೆ.
ದಂಡ ಪಾವತಿ ಮಾಡಿ ಪ್ಯಾನ್ ಆಧಾರ್ ಲಿಂಕ್ ಮಾಡಿ
ಹಂತ 1: ಭಾರತದ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ (https://www.incometaxindiaefiling.gov.in/)
ಹಂತ 2: ಹೋಮ್ ಪೇಜ್‌ನಲ್ಲಿ 'Quick Links' ನಲ್ಲಿ ಇರುವ Link Aadhaar ಮೇಲೆ ಕ್ಲಿಕ್ ಮಾಡಿ,
ಹಂತ 3: ಹೊಸ ಪೇಜ್ ತೆರೆಯಲಿದೆ, ಇಲ್ಲಿ ನಿಮ್ಮ ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆ, ಆಧಾರ್‌ನಲ್ಲಿ ಇರುವಂತೆ ನಿಮ್ಮ ಹೆಸರನ್ನು ನಮೂದಿಸಿ, Validate ಮೇಲೆ ಕ್ಲಿಕ್ ಮಾಡಿ
ಹಂತ 4: ನಿಮ್ಮ ಪಾವತಿ ವಿಧಾನ ವೆರಿಫೈ ಆದ ಬಳಿಕ Your payment details are verified ಎಂದು ಬರಲಿದೆ. ಇಲ್ಲಿ Continue ಬಟನ್ ಅನ್ನು ಕ್ಲಿಕ್ ಮಾಡಿ
ಹಂತ 5: ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, Link Aadhaar ಕ್ಲಿಕ್ ಮಾಡಿ
ಹಂತ 6: ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ
ಹಂತ 7: ಪ್ಯಾನ್ ಆಧಾರ್ ಲಿಂಕ್ ಮಾಡಲು ಮನವಿ ಸಲ್ಲಿಕೆ ಪ್ರಕ್ರಿಯೆ ಇಲ್ಲಿಗೆ ಕೊನೆಯಾಗಲಿದೆ.


Click it and Unblock the Notifications