UIDAI update: ಆಧಾರ್ ಕಾರ್ಡ್ ಮಾಹಿತಿ ಅಪ್‌ಡೇಟ್ ಮಾಡುವುದು ಹೇಗೆ, ಗಡುವು, ಶುಲ್ಕ ವಿವರ

ನಮ್ಮ ಎಲ್ಲ ವಹಿವಾಟುಗಳಿಗೆ ಪ್ರಸ್ತುತ ಆಧಾರ್ ಕಾರ್ಡ್ ಅತೀ ಮುಖ್ಯವಾದ ದಾಖಲೆಯಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಮುಖ್ಯವಾಗಿದೆ. ಹತ್ತು ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಅನ್ನು ನೀವು ಅಪ್‌ಡೇಟ್ ಮಾಡಬೇಕಾದರೆ ನಿಗದಿತ ಪ್ರಮಾಣದ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವ ಶುಲ್ಕವನ್ನು ಪರಿಷ್ಕರಣೆ ಮಾಡಿದೆ. ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಮತ್ತು ಇತರೆ ಮಾಹಿತಿಯಲ್ಲಿ ಬದಲಾವಣೆಗಳಿದ್ದರೆ ಅದನ್ನು ಅಪ್‌ಡೇಟ್ ಮಾಡುವುದು ಅಥವಾ ಆ ಮಾಹಿತಿಯನ್ನು ಮತ್ತೆ ಅಪ್‌ಡೇಟ್ ಮಾಡುವುದೇ ಆಧಾರ್ ಅಪ್‌ಡೇಟ್ ಆಗಿದೆ.

 ಆಧಾರ್ ಕಾರ್ಡ್ ಮಾಹಿತಿ ಅಪ್‌ಡೇಟ್ ಮಾಡುವುದು ಹೇಗೆ, ಗಡುವು ವಿವರ

ಸಾಮಾನ್ಯವಾಗಿ ಒಂದು ಮಗುವಿಗೆ 5 ವರ್ಷವಾದಾಗ ಮತ್ತು 15 ವರ್ಷವಾದಾಗ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡಬೇಕಾಗುತ್ತದೆ. ಅದನ್ನು ಹೊರತುಪಡಿಸಿ ಪ್ರಸ್ತುತ ಯುಐಡಿಎಐ ಸೂಚನೆಯಂತೆ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಅನ್ನು ಮಾಡಿ, ಬಳಿಕ ಯಾವುದೇ ಅಪ್‌ಡೇಟ್ ಮಾಡಿಲ್ಲವೆಂದಾದರೆ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಮಾರ್ಚ್ 15ರಿಂದ ಜೂನ್ 14ರವರೆಗೆ ಗಡುವು ನೀಡಲಾಗಿದೆ. ಆದರೆ ಈ ಸೇವೆಯು ಶುಲ್ಕ ರಹಿತವಾಗಿದೆ.

12 ಡಿಜಿಟ್ ಸಂಖ್ಯೆಯ ಆಧಾರ್ ಕಾರ್ಡ್‌ನಲ್ಲಿ ಯಾವುದೇ ಬದಲಾವಣೆಯನ್ನು ನೀವು ಮಾಡಲು ಬಯಸಿದರೆ, ಯುಐಡಿಎಐ 50 ರೂಪಾಯಿ ಶುಲ್ಕವನ್ನು ವಿಧಿಸುತ್ತದೆ. ಪ್ರಮುಖವಾಗಿ 10 ವರ್ಷ ಅಥವಾ ಅದಕ್ಕೂ ಹಿಂದೆ ಬಳಕೆದಾರರು ಗುರುತಿನ ಪುರಾವೆ (ಪಿಒಐ) ಮತ್ತು ವಿಳಾಸದ ಪುರಾವೆಯಂತಹ (ಪಿಒಎ) ವಿವರಗಳನ್ನು ಪರಿಷ್ಕರಿಸುವುದಾದರೆ ಈ ದಂಡವನ್ನು ಪಾವತಿ ಮಾಡಬೇಕಾಗುತ್ತದೆ.

ಮೈಆಧಾರ್ ಪೋರ್ಟಲ್‌ನಲ್ಲಿ ಮಾತ್ರ ಈ ಈ ಯುಐಡಿಎಐ ಉಚಿತ ಸೇವೆಯು ಲಭ್ಯವಾಗುತ್ತದೆ ಎಂಬುವುದು ತಿಳಿದಿರಬೇಕಾಗುತ್ತದೆ. ನೀವು ಆಧಾರ್ ಸೆಂಟರ್‌ಗಳಲ್ಲಿ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡಬೇಕಾದರೆ 50 ರೂಪಾಯಿ ಪಾವತಿ ಮಾಡಬೇಕಾಗುತ್ತದೆ. ಆಧಾರ್ ಕಾರ್ಡ್ ಅನ್ನು ನೀವು ಅಪ್‌ಡೇಟ್ ಮಾಡುವುದು ಹೇಗೆ ಎಂದು ಈ ಕೆಳಗೆ ವಿವರಿಸಲಾಗಿದೆ ಮುಂದೆ ಓದಿ....

ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದು ಹೇಗೆ?

ಹಂತ 1: ಯುಐಡಿಎಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: 'My Aadhaar' ಮೇಲೆ ಕ್ಲಿಕ್ ಮಾಡಿ
ಹಂತ 3: 'Update Your Aadhaar' ಅನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: 'Update demographics data online' ಮೇಲೆ ಕ್ಲಿಕ್ ಮಾಡಿ
ಹಂತ 5: 'Proceed to update Aadhaar' ಅನ್ನು ಬಳಿಕ ಆಯ್ಕೆ ಮಾಡಿ
ಹಂತ 6: ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ
ಹಂತ 7: ಕ್ಯಾಪ್ಚಾ ವೆರಿಫಿಕೇಷನ್ ಅನ್ನು ಮಾಡಿ
ಹಂತ 8: Send OTP ಮೇಲೆ ಕ್ಲಿಕ್ ಮಾಡಿ
ಹಂತ 9: 'Update Demographics Data' ಮೇಲೆ ಕ್ಲಿಕ್ ಮಾಡಿ
ಹಂತ 10: ನವೀಕರಿಸಲು ವಿವರಗಳ ಆಯ್ಕೆಯನ್ನು ಆಯ್ಕೆಮಾಡಿ
ಹಂತ 11: ಹೊಸ ವಿವರಗಳನ್ನು ನಮೂದಿಸಿ
ಹಂತ 12: ದಾಖಲೆಗಳ ಪುರಾವೆಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಿ
ಹಂತ 13: ನಮೂದಿಸಿದ ಮಾಹಿತಿಯು ನಿಖರವಾಗಿದೆಯೇ ಎಂದು ಪರಿಶೀಲಿಸಿ, ಒಟಿಪಿ ಉಲ್ಲೇಖಿಸಿದರೆ ಪ್ರಕ್ರಿಯೆ ಪೂರ್ಣವಾಗಲಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+