ಪ್ರತಿ ವರ್ಷದಂತೆ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. 2023-24 ಹಣಕಾಸು ವರ್ಷದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ. ಆದರೆ ಈಗ 2023-24ನೇ ಸಾಲಿನ ಕರ್ನಾಟಕ ಬಜೆಟ್‌ಗಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಕರ್ನಾಟಕ ಬಜೆಟ್ 2023-24 ಮಂಡನೆ ಮಾಡಲಿದ್ದಾರೆ. 2024ರಲ್ಲಿ ಚುನಾವಣೆ ನಡೆಯಲಿದೆ, ಇದರಿಂದಾಗಿ ಬಜೆಟ್‌ನಲ್ಲಿ ಹಲವಾರು ಕೊಡುಗೆಯನ್ನು ಸರ್ಕಾರ ನೀಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರ ಶುಕ್ರವಾರ ಬೆಳಗ್ಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 9.45ಕ್ಕೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಇನ್ನು ಬಜೆಟ್ ಮಂಡನೆಗೂ ಮುನ್ನ ಸಾಮಾನ್ಯವಾಗಿ ನಡೆಯುವ ಸಭೆಗಳು ನಡೆಯಲಿದೆ.

ಬಜೆಟ್ ಮಂಡನೆಗೂ ಮುನ್ನ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪ್ರದಾಯದಂತೆ ಸಚಿವ ಸಂಪುಟದ ಒಪ್ಪಿಗೆಯನ್ನು ಪಡೆಯಲಿದ್ದಾರೆ. ಅದಾದ ಬಳಿಕ ವಿಧಾನಸಭೆ ಕಲಾಪ ಆರಂಭವಾಗಲಿದೆ, 10.15ಕ್ಕೆ ಕೇಂದ್ರ ಹಣಕಾಸು ಸಚಿವೆ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ಬರುವ ಬಜೆಟ್
2024ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ, ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಬರುವ ಬಜೆಟ್ ಇದಾಗಿದೆ. ಕರ್ನಾಟಕದಲ್ಲಿ 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಈ ಆಡಳಿತಾವಧಿಯ ಕೊನೆಯ ಬಜೆಟ್ ಇದಾಗಿದೆ. ಆದ್ದರಿಂದ ಜನರಿಗೆ ಬಜೆಟ್ ನಿರೀಕ್ಷೆ ಅಧಿಕವಾಗಿಯೇ ಇದೆ.
ಫೆಬ್ರವರಿ 10ರಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನವು ಫೆಬ್ರವರಿ 23ರ ತನಕ ನಡೆಯಲಿದೆ. ಬಜೆಟ್ ಮೇಲೆ ನಡೆಯುವ ಎಲ್ಲ ಚರ್ಚೆಗೆ ಮುಖ್ಯಮಂತ್ರಿಗಳು ಅಧಿವೇಶನದ ಕೊನೆಯಲ್ಲಿ ಉತ್ತರ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಮಾರು 1 ಗಂಟೆಗಳ ಕಾಲ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 20 ರಿಂದ 22ರ ತನಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯ ಅಂದರೆ 2023-24ನೇ ಸಾಲಿನ ಕರ್ನಾಟಕ ಬಜೆಟ್ 3 ಲಕ್ಷ ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ನಿರೀಕ್ಷೆಯಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications