ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಫ್ರೀಬಸ್ ಸಾರಿಗೆ ವ್ಯವಸ್ಥೆ ಜಾರಿಗೆ ಬಂದಿದೆ. ಆರಂಭಿಕ ದಿನಗಳಲ್ಲಿ ಇದಕ್ಕೆ ಉತ್ತಮ ಪ್ರತ್ರಿಕ್ರಿಯೆ ಸಿಕ್ಕಿದೆ ಮತ್ತು ವೀಕೆಂಡ್ ನಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಈ ಗ್ಯಾರಂಟಿ ಜಾರಿಗೆ ಬಂದ ನಂತರ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ವಿಭಾಗಗಳ ಗಳಿಕೆ ಹೆಚ್ಚಾಗುತ್ತಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೇಳಿಕೆಯನ್ನು ನೀಡಿದ್ದಾರೆ. ಈಗ ಖಾಲಿಯಿರುವ ಸುಮಾರು ಹದಿಮೂರು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

13,415 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಎಷ್ಟು ವಯಸ್ಸಾಗಿರಬೇಕು, ಶೈಕ್ಷಣಿಕ ಅರ್ಹತೆಗಳು, ಸಂಬಳದ ವಿವರ, ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದರ ಬಗ್ಗೆ ವಿವರ ಈ ರೀತಿಯಿದೆ:
ಇಲಾಖೆ ಹೆಸರು : ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC)
ಹುದ್ದೆಗಳ ಸಂಖ್ಯೆ : 13,415
ಹುದ್ದೆ : ಡ್ರೈವರ್, ಕಂಡಕ್ಟರ್ & ಟೆಕ್ನಿಷಿಯನ್
ಉದ್ಯೋಗ ಸ್ಥಳ : ಆಲ್ ಓವರ್ ಕರ್ನಾಟಕ
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲಿ ತಿಳಿಸಲಾಗುವುದು
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅತೀ ಶೀಘ್ರದಲ್ಲಿ ತಿಳಿಸಲಾಗುವುದು
ಶೈಕ್ಷಣಿಕ ಅರ್ಹತೆ: ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಅಧಿಸೂಚನೆ ಬಿಡುಗಡೆಯಾದ ನಂತರ ತಿಳಿಸಲಾಗುವುದು.
ಸಂಬಳದ ವಿವರ: ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC ) ಅಧಿಕೃತ ಅಧಿಸೂಚನೆ ಬಿಡುಗಡೆಯಾದ ಈ ಬಗ್ಗೆ ಮಾಹಿತಿಯನ್ನು ನೀಡಲಾಗುವುದು.
ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೀಗೆ: ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ, ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕಾಗುತ್ತದೆ. ಈ ಬಗ್ಗೆ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.


Click it and Unblock the Notifications