ಕರ್ನಾಟಕ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಈ ಪೈಕಿ ಅನ್ನಭಾಗ್ಯ ಯೋಜನೆ ಈ ಹಿಂದೆ ಕಾಂಗ್ರೆಸ್ ಪಕ್ಷವೇ ಆಡಳಿತದಲ್ಲಿದ್ದಾಗ ಜಾರಿಗೆ ತಂದ ಯೋಜನೆಯಾಗಿದ್ದು, ಉಳಿದವುಗಳು ಹೊಸ ಯೋಜನೆಯಾಗಿದೆ. ಇನ್ನು ರಾಜ್ಯದ ಮಹಿಳೆಯರಿಗಾಗಿ ಈ ಹಿಂದೆಯೂ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆ ಪೈಕಿ ಕರ್ನಾಟಕ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡಾ ಒಂದಾಗಿದೆ.
ನಿರುದ್ಯೋಗಿ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯೇ ಉದ್ಯೋಗಿನಿ ಯೋಜನೆಯಾಗಿದೆ. ಇದು 2015-16ರಲ್ಲಿ ಜಾರಿಗೆ ಬಂದಿದೆ. ಉದ್ಯೋಗಿನಿ ಯೋಜನೆಯ ಮೂಲಕ ಮಹಿಳೆಯರಿಗೆ ಸ್ವ ಉದ್ಯೋಗ ಸ್ಥಾಪನೆಗೆ ಸಾಲವನ್ನು ನೀಡಲಾಗುತ್ತದೆ. ಅಧಿಕ ಬಡ್ಡಿದರದ ಸುಳಿಗೆ ಮಹಿಳಾ ಉದ್ಯಮಿಗಳು ಸಿಲುಕುವುದನ್ನು ತಡೆಯುವುದು ಮತ್ತು ಮಹಿಳಾ ಸಬಲೀಕರಣ ಮಾಡುವ ಉದ್ದೇಶದಿಂದ ಕಡಿಮೆ ಬಡ್ಡಿದರದಲ್ಲಿ ಈ ಯೋಜನೆಯಡಿ ಸಾಲ ನೀಡಲಾಗುತ್ತದೆ. ಯೋಜನೆ ಅಧಿಕ ಮಾಹಿತಿ ಇಲ್ಲಿದೆ ಮುಂದೆ ಓದಿ...

ಯೋಜನೆಯಲ್ಲಿ ಎಷ್ಟು ಸಾಲ ನೀಡಲಾಗುತ್ತದೆ?
* ಗರಿಷ್ಠವಾಗಿ 3 ಲಕ್ಷ ರೂಪಾಯಿ ಸಾಲವನ್ನು ಮಹಿಳೆಯರು ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಬ್ಯಾಂಕ್‌ನಿಂದ ಪಡೆಯಲು ಸಾಧ್ಯವಾಗುತ್ತದೆ.
* ವಿಧವೆ, ಅಂಗವೈಕಲ್ಯ ಹೊಂದಿರುವ, ಧಮನಿತ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಅಥವಾ ಗರಿಷ್ಠ 90,000 ರೂಪಾಯಿ ಸಬ್ಸಿಡಿ ಪಡೆಯಬಹುದು.
* ಪರಿಶಿಷ್ಠ ಪಂಗಡ/ ಪರಿಶಿಷ್ಠ ಜಾತಿಯ ಮಹಿಳೆಯರಿಗೆ ಶೇಕಡ 50ರಷ್ಟು ಅಥವಾ ಗರಿಷ್ಠ 1,50,000 ರೂಪಾಯಿ ಸಬ್ಸಿಡಿ ಪಡೆಯಬಹುದು.
* ಸಾಲ ಮರುಪಾವತಿ ಅವಧಿಯು ವ್ಯತ್ಯಯವಾಗುತ್ತದೆ.
ಅರ್ಹತೆ ಏನು ತಿಳಿಯಿರಿ
* ಕರ್ನಾಟಕ ರಾಜ್ಯದ ಖಾಯಂ ನಾಗರಿಕ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಹರು
* 18 ವರ್ಷದಿಂದ 55 ವರ್ಷದೊಳಿಗಿನ ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಈ ಸಾಲ ಸೌಲಭ್ಯ ಲಭ್ಯ
* ಎಸ್‌ಸಿ/ ಎಸ್‌ಟಿ ವರ್ಗದವರು ಸಾಲ ಪಡೆಯಲು ವಾರ್ಷಿಕ ಆದಾಯವು 2 ಲಕ್ಷ ರೂಪಾಯಿಗಿಂತ ಕಡಿಮೆಯಾಗಿರಬೇಕು.
* ಸಾಮಾನ್ಯ ವರ್ಗದವರು ಸಾಲ ಪಡೆಯಬೇಕಾದರೆ ವಾರ್ಷಿಕ ಆದಾಯವು 1.5 ಲಕ್ಷ ರೂಪಾಯಿಗಿಂತ ಒಳಪಟ್ಟಿರಬೇಕು.
ಬೇಕಾದ ದಾಖಲೆಗಳು ಯಾವುದು?
* ಅರ್ಜಿದಾರರ ಆಧಾರ್ ಕಾರ್ಡ್
* ಅರ್ಜಿದಾರರ ಜನನ ಪ್ರಮಾಣ ಪತ್ರ
* ವಿಳಾಸ ಹಾಗೂ ಆದಾಯ ಪುರಾವೆ (ಆದಾಯ ಪ್ರಮಾಣಪತ್ರ)
* ಬಿಪಿಎಲ್ ಕಾರ್ಡ್ ಅಥವಾ ರೇಷನ್ ಕಾರ್ಡ್ (ಅರ್ಜಿದಾರರು ಬಿಪಿಎಲ್‌ಎಲ್ ಹೊಂದಿರಬೇಕಾಗುತ್ತದೆ)
* ಎಸ್‌ಟಿ/ ಎಸ್‌ಸಿ ಮಹಿಳೆಯರಾಗಿದ್ದರೆ ಜಾತಿ ಪ್ರಮಾಣಪತ್ರ ಕಡ್ಡಾಯ
* ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
* ಬ್ಯಾಂಕ್ ಅಥವಾ ಎನ್‌ಬಿಎಫ್‌ಸಿಯ ಇತರೆ ದಾಖಲೆಗಳು (ಅರ್ಜಿ ಸಲ್ಲಿಸುವಾಗ ಕೇಳಿದರೆ ಮಾತ್ರ)
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಅರ್ಹ ಮಹಿಳೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹಂತ 2: ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯಿರಿ
ಹಂತ 3: ಅಗತ್ಯ ಎಲ್ಲ ಮಾಹಿತಿಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ
ಹಂತ 4: ಎಲ್ಲ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಅಟೆಚ್ ಮಾಡಿಕೊಳ್ಳಿ
ಹಂತ 5: ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳ ಪ್ರತಿಯೊಂದಿಗೆ ಅರ್ಜಿಯನ್ನು ಕಚೇರಿಯಲ್ಲಿ ಸಲ್ಲಿಕೆ ಮಾಡಿ.
ಹಂತ 6: ಸಂಬಂಧಪಟ್ಟ ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡುತ್ತಾರೆ.
ಹಂತ 7: ಅರ್ಜಿ ಅನುಮೋದನೆಯಾದ ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಸಾಲದ ಮೊತ್ತವು ಜಮೆಯಾಗುತ್ತದೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications