ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನವೇ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿತ್ತು. ಈಗ ಚುನಾವಣೆಯಲ್ಲಿ ಗೆದ್ದು ಗದ್ದುಗೆಯನ್ನು ಪಡೆದ ಬಳಿಕ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ.
ಆದರೆ ಈ ಪೈಕಿ ಯುವ ನಿಧಿ ಗ್ಯಾರಂಟಿ ಯೋಜನೆಯು ಇನ್ನೂ ಕೂಡಾ ಜಾರಿಗೆ ಬಂದಿಲ್ಲ. ಬಜೆಟ್‌ನಲ್ಲಿ ನಾಲ್ಕು ಯೋಜನೆಗಳಿಗೆ ಅನುದಾನವನ್ನು ಸರ್ಕಾರ ಘೋಷಣೆ ಮಾಡಿದ್ದರೂ ಯುವನಿಧಿಗೆ ಅನುದಾನವನ್ನು ಸರ್ಕಾರವು ಘೋಷಣೆ ಮಾಡಿಲ್ಲ. ಇತರೆ ಯೋಜನೆಗಳಿಗೆ ಹಂಚಲಾದ ಬಜೆಟ್‌ನಲ್ಲಿಯೇ ಈ ಯೋಜನೆಯನ್ನು ಜಾರಿ ಮಾಡಲಾಗುತ್ತದೆಯೇ ಎಂಬ ಸುದ್ದಿಗಳಿದೆ. ಈ ಯೋಜನೆಯ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ ಮುಂದೆ ಓದಿ...

ಯುವನಿಧಿ ಯೋಜನೆ ಮಾಹಿತಿ
ಕರ್ನಾಟಕ ಯುವ ನಿಧಿ ಯೋಜನೆಯು ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆಯಾಗಿದ್ದು, ಕರ್ನಾಟಕದಲ್ಲಿ ಸರ್ಕಾರ ರಚಿಸಿದರೆ ಅದನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಯೋಜನೆ ಇದಾಗಿದೆ. ಯೋಜನೆಯಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.
ಈ ಮಾಸಿಕ ಹಣಕಾಸಿನ ನೆರವನ್ನು ಯುವಕರು ಉದ್ಯೋಗ ಹುಡುಕುವ ಸಮಯದಲ್ಲಿ ಖರ್ಚಿನ ನಿರ್ವಹಣೆಗೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕದ ಖಾಯಂ ನಿವಾಸಿಗಳು ಮತ್ತು ವಿದ್ಯಾವಂತರಾಗಿದ್ದರೂ ನಿರುದ್ಯೋಗಿಗಳಾಗಿದ್ದರೆ, ಕರ್ನಾಟಕ ಯುವ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹರಾಗಿದ್ದಾರೆ.
ಈ ಯೋಜನೆಯ ಅರ್ಹತೆ
* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಅರ್ಜಿದಾರರು ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರುವವರಾಗಿರಬೇಕು.
* ಅರ್ಜಿದಾರರು 2022-2023 ರಲ್ಲಿ ಅವನ / ಅವಳ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
* ಅರ್ಜಿದಾರರು ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.
ಯಾರು ಈ ಯೋಜನೆಗೆ ಅನರ್ಹರು?
* ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣವನ್ನು ಮುಂದುವರಿಸುವ ಯುವಕರು.
* ಅಪ್ರೆಂಟಿಸ್ ವೇತನದ ಫಲಾನುಭವಿ.
* ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಯುವಕರು.
* ಸ್ವಯಂ ಉದ್ಯೋಗಿಗಳಾಗಿರುವ ಯುವಕರು.
* ಸರ್ಕಾರದ ಇತರೆ ಆರ್ಥಿಕ ನೆರವು ಯೋಜನೆಯ ಫಲಾನುಭವಿ.
ಯೋಜನೆಯ ಪ್ರಯೋಜನಗಳು
ಕರ್ನಾಟಕ ಯುವ ನಿಧಿ ಯೋಜನೆಯಡಿ ಕರ್ನಾಟಕದ ಅರ್ಹ ನಿರುದ್ಯೋಗಿ ಯುವಕರಿಗೆ ಕೆಳಗೆ ತಿಳಿಸಿದ ಪ್ರಯೋಜನಗಳನ್ನು ಒದಗಿಸಲಾಗುವುದು:-
ನಿರುದ್ಯೋಗಿ ಪದವೀಧರ ಯುವಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ, ನಿರುದ್ಯೋಗಿ ಡಿಪ್ಲೊಮಾ ಹೊಂದಿರುವ ಯುವಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಯೋಜನೆಗೆ ಬೇಕಾದ ದಾಖಲೆಗಳು
* ಕರ್ನಾಟಕದ ನಿವಾಸಿ ಎಂಬ ಪುರಾವೆ
* ಆಧಾರ್ ಕಾರ್ಡ್
* 10 ನೇ ತರಗತಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
* 12 ನೇ (ದ್ವಿತೀಯ ಪಿಯುಸಿ) ಅಂಕಪಟ್ಟಿ ಮತ್ತು ಪ್ರಮಾಣಪತ್ರ.
* ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
* ಡಿಪ್ಲೊಮಾ ಪ್ರಮಾಣಪತ್ರ. (ಡಿಪ್ಲೊಮಾ ಹೊಂದಿರುವವರಿಗೆ).
* ಜಾತಿ ಪ್ರಮಾಣ ಪತ್ರ. (ಅನ್ವಯವಾದಲ್ಲಿ)
* ಆದಾಯ ಪ್ರಮಾಣಪತ್ರ.
* ಮೊಬೈಲ್ ನಂಬರ್
* ಬ್ಯಾಂಕ್ ಖಾತೆ ವಿವರಗಳು.
* ಸೆಲ್ಫ್ ಡಿಕ್ಲೆರೇಷನ್ ಪ್ರತಿ
ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್‌ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications