ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 10 ಕೋಟಿ ರೈತರಿಗೆ ಸುಮಾರು 21,000 ಕೋಟಿ ರೂಪಾಯಿಗಳನ್ನು ವರ್ಗಾಯಿಸುವ ಮೂಲಕ 11 ನೇ ಕಂತಿನ ಪ್ರಯೋಜನವನ್ನು ಬಿಡುಗಡೆ ಮಾಡಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಜಮೀನು ಹೊಂದಿರುವ ರೈತ ಕುಟುಂಬಕ್ಕೆ ವಾರ್ಷಿಕ 6,000 ರೂ.ಗಳನ್ನು ತಲಾ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಪಿಎಂ ಕಿಸಾನ್ ಯೋಜನೆ ಅಥವಾ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಣ್ಣ ಜಮೀನು ಹೊಂದಿರುವ ರೈತರಿಗೆ ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಮೊದಲು, ಈ ಯೋಜನೆಯು 2 ಹೆಕ್ಟೇರ್‌ಗಿಂತ ಕಡಿಮೆ ಜಮೀನು ಹೊಂದಿರುವ ಜನರಿಗೆ ಸೀಮಿತವಾಗಿತ್ತು. ಆದರೆ ನಂತರ, ಪಿಎಂ ಕಿಸಾನ್ ಯೋಜನೆಯನ್ನು ಎಲ್ಲಾ ಸಣ್ಣ ಭೂಹಿಡುವಳಿ ಕುಟುಂಬಗಳಿಗೆ ವಿಸ್ತರಿಸಲಾಯಿತು.
ಕೇಂದ್ರ ಸರ್ಕಾರವು ಹನ್ನೊಂದನೇ ಕಂತನ್ನು ಬಿಡುಗಡೆ ಮಾಡಿದೆ. ಆದರೆ ನಿಮಗೆ ಹಣ ಬಂದಿದೆಯೇ ಇಲ್ಲವೇ ನೋಡಿಕೊಳ್ಳಿ, ಒಂದು ವೇಳೆ ನಿಮ್ಮ ಖಾತೆಗೆ ಹಣ ಜಮೆ ಆಗದಿದ್ದರೆ ನೀವು ಏನು ಮಾಡುವುದು, ಹೇಗೆ ದೂರು ಸಲ್ಲಿಸುವುದು ಎಂಬುವುದು ಇಲ್ಲಿದೆ ಮುಂದೆ ಓದಿ..
ಹಣ ಬಂದಿದೆಯೇ ಎಂದು ಹೀಗೆ ಪರಿಶೀಲಿಸಿ
* ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
* ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
* ನಂತರ Beneficiary Status ಮೇಲೆ ಕ್ಲಿಕ್ ಮಾಡಿ
* ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
* ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?
ಒಂದು ವೇಳೆ ನಿಮಗೆ ಹನ್ನೊಂದನೇ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಬಹುದು. ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. PMkisan-ict@gov.in ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು.
ಇ-ಕೆವೈಸಿ ಮಾಡಿದ್ದೀರಾ?
ನಿಮಗೆ ಕಿಸಾನ್ ನಿಧಿ ಹಣ ಬಂದಿಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ಇ-ಕೆವೈಸಿ ಮಾಡದೆ ಇರುವುದು ಕೂಡಾ ಆಗಿರಬಹುದು. ಮೇ 31, 2022 ರ ಮೊದಲು ಎಲ್ಲಾ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ನೀವು ಒಂದು ವೇಳೆ ಇ-ಕೆವೈಸಿ ಮಾಡದಿದ್ದರೆ ನಿಮಗೆ ಹಣ ಜಮೆ ಆಗುವುದಿಲ್ಲ. ಮಾರ್ಗಸೂಚಿ ಪ್ರಕಾರ "ಯೋಜನೆಯಡಿಯಲ್ಲಿ ನೋಂದಾಯಿಸಲಾದ ರೈತರು ಯಾವುದೇ ಕಾರಣಕ್ಕಾಗಿ ಯಾವುದೇ 4-ಮಾಸಿಕ ಅವಧಿಯಲ್ಲಿ ಯಾವುದೇ ಕಂತುಗಳನ್ನು ಸ್ವೀಕರಿಸದಿದ್ದರೆ, ಅವನು / ಅವಳು ನಂತರ ಅದನ್ನು ಸ್ವೀಕರಿಸಲು ಸಾಧ್ಯವಾಗುತ್ತದೆ."
ಇಕೆವೈಸಿ ಮಾಡುವುದು ಹೇಗೆ?
* ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
* ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿದರೆ ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್ ಕ್ಲಿಕ್ ಮಾಡಬೇಕು
* ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್ ಮಾಡಿ, ಬಂದ ಒಟಿಪಿ ನಮೂದಿಸಿ Submit ಮಾಡಿ
* ಇಲ್ಲಿಗೆ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ


Click it and Unblock the Notifications