PM Kisan 13th Installment : ಫೆ.24ರಂದು 13ನೇ ಕಂತು ಬಿಡುಗಡೆ ಸಾಧ್ಯತೆ, ಕೆವೈಸಿ ಸ್ಟೇಟಸ್ ಚೆಕ್ ಮಾಡಿ

ರೈತರಿಗೆ ಕೊಂಚ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಆರಂಭ ಮಾಡಿದ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡಾ ಒಂದಾಗಿದೆ. ಪ್ರಸ್ತುತ ರೈತರು ಪಿಎಂ ಕಿಸಾನ್ ಎಂದೂ ಕರೆಯಲಾಗುವ ಈ ಯೋಜನೆಯಡಿಯಲ್ಲಿ ಲಭ್ಯವಾಗುವ 13ನೇ ಕಂತಿನ ಮೊತ್ತಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಈ ಯೋಜನೆಯ 13ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. ಅಂದರೆ ಫೆಬ್ರವರಿ 24ರಂದು ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯವಾಗಿ ಈ ಅವಧಿಯಲ್ಲಿ ಪಿಎಂ ಕಿಸಾನ್‌ನ ಕಂತು ಬಿಡುಗಡೆಯಾಗುವುದು.

ಈ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರು ವಾರ್ಷಿಕವಾಗಿ 6000 ರೂಪಾಯಿಯನ್ನು ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ಪಡೆಯುತ್ತಾರೆ. ಪ್ರತಿ ಕಂತಿನಲ್ಲೂ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗುವ ಯೋಜನೆಯಾಗಿದೆ. ಆದರೆ ಈ ಯೋಜನೆಯಲ್ಲಿಯೂ ಹಲವಾರು ಮಾನದಂಡಗಳು ಇದೆ. ಈ ಯೋಜನೆಯನ್ನು ಪಡೆಯಬೇಕಾದರೆ ಸದ್ಯ ರೈತರು ಕೆವೈಸಿ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ. ಇಲ್ಲವಾದರೆ ಮೊತ್ತ ಜಮೆಯಾಗದಿರಬಹುದು, ಈ ಕೆಳಗಿದೆ, ವಿವರ ಮುಂದೆ ಓದಿ..

 ಕೆವೈಸಿ ಮಾಡಿಕೊಳ್ಳುವುದು ಹೇಗೆ?

ಕೆವೈಸಿ ಮಾಡಿಕೊಳ್ಳುವುದು ಹೇಗೆ?

ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್‌ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್‌ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್‌ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ.

 ಹಣ ಬಂದಿದೆಯೇ ಹೀಗೆ ಪರಿಶೀಲಿಸಿ

ಹಣ ಬಂದಿದೆಯೇ ಹೀಗೆ ಪರಿಶೀಲಿಸಿ

ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್‌ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ

 ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?

ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?

ಒಂದು ವೇಳೆ ನಿಮಗೆ ಹನ್ನೊಂದನೇ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಬಹುದು. ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. PMkisan-ict@gov.in ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು.

ಇಮೇಲ್ ಐಡಿ: pmkisan-ict@gov.in. ಮತ್ತು pmkisan-funds@gov.in
ಸಹಾಯವಾಣಿ ಸಂಖ್ಯೆ: 011-24300606,155261
ಟೋಲ್-ಫ್ರೀ ಸಂಖ್ಯೆ: 1800-115-526

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+