ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಜುಲೈ 27) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ಡಿಬಿಟಿ ಮೂಲಕ ಪಿಎಂ-ಕಿಸಾನ್ ಯೋಜನೆಯಡಿ ಸುಮಾರು 8.5 ಕೋಟಿ ರೈತ ಫಲಾನುಭವಿಗಳಿಗೆ 14 ನೇ ಕಂತಿನಲ್ಲಿ 17,000 ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲೇ ಮೋದಿ 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರವನ್ನು ಉದ್ಘಾಟಿಸಿದ್ದಾರೆ.
ಸರ್ಕಾರವು ದೇಶದ ಚಿಲ್ಲರೆ ರಸಗೊಬ್ಬರ ಒದಗಿಸುವ ಕೇಂದ್ರಗಳನ್ನು ಹಂತ ಹಂತವಾಗಿ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರವನ್ನಾಗಿ ಪರಿವರ್ತಿಸುತ್ತಿದೆ. ಈ ಕೇಂದ್ರಗಳು ರೈತರಿಗೆ ಕೃಷಿ-ಕಚ್ಚಾ ಸಾಮಗ್ರಿಗಳು, ಬೀಜಗಳು ಮತ್ತು ರಸಗೊಬ್ಬರಗಳನ್ನು ಒದಗಿಸುತ್ತವೆ. ಹಾಗೆಯೇ ಇಲ್ಲಿಯೇ ಮಣ್ಣು ಪರೀಕ್ಷೆಯನ್ನು ಕೂಡಾ ಮಾಡಬಹುದಾಗಿದೆ. ಇನ್ನು ಕೇಂದ್ರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್‌ನ ಮೊತ್ತ ನಿಮ್ಮ ಖಾತೆಗೆ ಜಮೆಯಾಗಿದೆಯೇ ಎಂದು ನೀವು ಹೀಗೆ ಚೆಕ್ ಮಾಡಿಕೊಳ್ಳಿ.

ಹಣ ಬಂದಿದೆಯೇ ಹೀಗೆ ಪರಿಶೀಲಿಸಿ
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?
ಒಂದು ವೇಳೆ ನಿಮಗೆ ಹನ್ನೊಂದನೇ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಬಹುದು. ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. [email protected] ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು.
ಇಮೇಲ್ ಐಡಿ: [email protected]. ಮತ್ತು [email protected]
ಸಹಾಯವಾಣಿ ಸಂಖ್ಯೆ: 011-24300606,155261
ಟೋಲ್-ಫ್ರೀ ಸಂಖ್ಯೆ: 1800-115-526
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿಯಲ್ಲಿ ಅರ್ಹ ರೈತರುಗಳು ವಾರ್ಷಿಕವಾಗಿ 6 ಸಾವಿರ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ. ರೈತರು ಮೂರು ಕಂತುಗಳಲ್ಲಿ ಎರಡು ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ಪಡೆಯಲಿದ್ದಾರೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗಲಿದೆ. ಫೆಬ್ರವರಿ 2019ರಂದು ಈ ಯೋಜನೆಯನ್ನು ಆರಂಭ ಮಾಡಲಾಗಿದೆ. ಆದರೆ ಡಿಸೆಂಬರ್ 2018ರಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಪಿಎಂ ಕಿಸಾನ್ ನಿಧಿಯ ಮೊತ್ತ ಲಭ್ಯವಾಗಬೇಕಾದರೆ ನೀವು ಕೆವೈಸಿ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ. ನೀವು ಆನ್‌ಲೈನ್ ಮೂಲಕ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೆವೈಸಿ ಮಾಡುವ ವಿಧಾನ ಈ ಕೆಳಗಿದೆ.
ಕೆವೈಸಿ ಮಾಡಿಕೊಳ್ಳುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ


Click it and Unblock the Notifications