ಹೋಳಿ ಹಬ್ಬಕ್ಕೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಫೆಬ್ರವರಿ 27) 13ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಧಾನಿ ಮೋದಿ ರೈತರ ಖಾತೆಗೆ ಬರೋಬ್ಬರಿ 16,800 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ನಿಧಿಯ 13ನೇ ಕಂತು ಬಿಡುಗಡೆ ಮಾಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿಯಲ್ಲಿ ಅರ್ಹ ರೈತರುಗಳು ವಾರ್ಷಿಕವಾಗಿ 6 ಸಾವಿರ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ. ರೈತರು ಮೂರು ಕಂತುಗಳಲ್ಲಿ ಎರಡು ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ಪಡೆಯಲಿದ್ದಾರೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗಲಿದೆ. ಫೆಬ್ರವರಿ 2019ರಂದು ಈ ಯೋಜನೆಯನ್ನು ಆರಂಭ ಮಾಡಲಾಗಿದೆ. ಆದರೆ ಡಿಸೆಂಬರ್ 2018ರಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇನ್ನು ಪಿಎಂ ಕಿಸಾನ್ ನಿಧಿಯ ಮೊತ್ತ ಲಭ್ಯವಾಗಬೇಕಾದರೆ ನೀವು ಕೆವೈಸಿ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ. ನೀವು ಆನ್‌ಲೈನ್ ಮೂಲಕ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೆವೈಸಿ ಮಾಡುವ ವಿಧಾನ ಮತ್ತು ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬುವುದನ್ನು ನಾವಿಲ್ಲಿ ವಿವರಿಸಿದ್ದೇವೆ. ಹಾಗೆಯೇ ನೀವು ಕೆವೈಸಿ ಮಾಡಿಸಿಕೊಂಡಿದ್ದರೂ ನಿಮಗೆ ಪಿಎಂ ಕಿಸಾನ್ ನಿಧಿಯ ಮೊತ್ತ ಲಭ್ಯವಾಗದಿದ್ದರೆ, ದೂರು ನೀಡುವುದು ಹೇಗೆಂದು ಕೂಡಾ ವಿವರಣೆ ನೀಡಿದ್ದೇವೆ.
ಹಣ ಬಂದಿದೆಯೇ ಹೀಗೆ ಪರಿಶೀಲಿಸಿ
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?
ಒಂದು ವೇಳೆ ನಿಮಗೆ ಹನ್ನೊಂದನೇ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಬಹುದು. ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. [email protected] ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು.
ಇಮೇಲ್ ಐಡಿ: [email protected]. ಮತ್ತು [email protected]
ಸಹಾಯವಾಣಿ ಸಂಖ್ಯೆ: 011-24300606,155261
ಟೋಲ್-ಫ್ರೀ ಸಂಖ್ಯೆ: 1800-115-526
ಕೆವೈಸಿ ಮಾಡಿಕೊಳ್ಳುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications