ಪಿಎಂ ಕಿಸಾನ್ ಯೋಜನೆ: ಫಲಾನುಭವಿಗಳ ಪಟ್ಟಿಗೆ ನಿಮ್ಮ ಹೆಸರು ಹೀಗೆ ಸೇರಿಸಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 1, 2022 ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತನ್ನು ಬಿಡುಗಡೆ ಮಾಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಜಮೀನು ಹೊಂದಿರುವ ರೈತ ಕುಟುಂಬಕ್ಕೆ ವಾರ್ಷಿಕ 6,000 ರೂ.ಗಳನ್ನು ತಲಾ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ.
ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಹಾಗೂ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬಹುದು. ಪಿಎಂ ಕಿಸಾನ್ ಯೋಜನೆ ಅಥವಾ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಣ್ಣ ಜಮೀನು ಹೊಂದಿರುವ ರೈತರಿಗೆ ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಮೊದಲು, ಈ ಯೋಜನೆಯು 2 ಹೆಕ್ಟೇರ್ಗಿಂತ ಕಡಿಮೆ ಜಮೀನು ಹೊಂದಿರುವ ಜನರಿಗೆ ಸೀಮಿತವಾಗಿತ್ತು. ಆದರೆ ನಂತರ, ಪಿಎಂ ಕಿಸಾನ್ ಯೋಜನೆಯನ್ನು ಎಲ್ಲಾ ಸಣ್ಣ ಭೂಹಿಡುವಳಿ ಕುಟುಂಬಗಳಿಗೆ ವಿಸ್ತರಿಸಲಾಯಿತು.
ಅಂತರಿಕ್ಷ್-ದೇವಾಸ್ ಒಪ್ಪಂದ: ವಿತ್ತ ಸಚಿವರು ಬಿಚ್ಚಿಟ್ಟ ಪ್ರಮುಖ ಅಂಶಗಳು
ಜನವರಿ 1, 2022 ರಂದು, 351 ರೈತ ಉತ್ಪಾದಕ ಸಂಸ್ಥೆಗಳಿಗೆ 14 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ 1.24 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಇನ್ನು ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಮ್ಮ ಸ್ಥಿತಿಯನ್ನು ಪರಿಶೀಲನೆ ಮಾಡಬಹುದು. ಅದಕ್ಕಾಗಿ ಅಧಿಕೃತ ಪೋರ್ಟಲ್ www.pmkisan.gov.in ಗೆ ಭೇಟಿ ನೀಡಬೇಕಾಗಿದೆ. ಹಾಗಾದರೆ ಈ ಪೋರ್ಟಲ್ನಲ್ಲಿ ಹೇಗೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸುವುದು, ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೇಗೆ ಸೇರ್ಪಡೆ ಮಾಡುವುದು ಎಂದು ತಿಳಿಯಲು ಮುಂದೆ ಓದಿ..
ಜನವರಿ 18ರ ಪೇಟೆ ಧಾರಣೆ: ರಬ್ಬರ್, ರಸಗೊಬ್ಬರ, ಮೀನು ಹಾಗೂ ತರಕಾರಿ ಮಾರುಕಟ್ಟೆ ಬೆಲೆ

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಗೆ ನಿಮ್ಮ ಹೆಸರನ್ನು ಸೇರಿಸುವುದು ಹೇಗೆ?
ಅರ್ಹ ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.
* www.pmkisan.gov.in ವೆಬ್ಸೈಟ್ಗೆ ಭೇಟಿ ನೀಡಿ
* ಈಗ, ಮುಖಪುಟದಲ್ಲಿ, ನೀವು Farmers Corner ಅನ್ನು ಕಾಣಬಹುದು. ಅದರ ಮೇಲೆ ಕ್ಲಿಕ್ ಮಾಡಿ.
* ನಂತರ New farmer registration ಮೇಲೆ ಕ್ಲಿಕ್ ಮಾಡಿ
* ನೋಂದಣಿ ನಮೂನೆಯು ಇದೀಗ ನಿಮಗೆ ಕಾಣಲಿದೆ
* ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
* ಭರ್ತಿ ಮಾಡಿದ ಬಳಿಕ ಪರಿಶೀಲನೆ ಮಾಡಿಮ Submit ಮೇಲೆ ಕ್ಲಿಕ್ ಮಾಡಿದರೆ ಪ್ರಕ್ರಿಯೆ ಪೂರ್ಣವಾಗಲಿದೆ. ನೀವು ಹಾರ್ಡ್ ಕಾಪಿಯನ್ನು ಕೂಡಾ ಇಟ್ಟುಕೊಳ್ಳುವುದು ಒಳ್ಳೆಯದು.

ಪಿಎಂ ಸಾನ್ ಅಪ್ಲಿಕೇಶನ್ಗೆ ಅಗತ್ಯವಿರುವ ಪ್ರಮುಖ ದಾಖಲೆಗಳು
* ಭೂಮಿಯ ಮೂಲ ದಾಖಲೆಗಳು
* ಅರ್ಜಿದಾರರ ಬ್ಯಾಂಕ್ ಪಾಸ್ಬುಕ್
* ಮತದಾರರ ಗುರುತಿನ ಚೀಟಿ
* ಪಾಸ್ಪೋರ್ಟ್ ಗಾತ್ರದ ಫೋಟೋ
* ಗುರುತಿನ ಚೀಟಿ
* ಚಾಲನಾ ಪರವಾನಗಿ ಪ್ರಮಾಣಪತ್ರ
* ನಿಮ್ಮ ಮಾಲೀಕತ್ವದಲ್ಲಿರುವ ಭೂಮಿಯ ಸಂಪೂರ್ಣ ವಿವರಗಳು
* ನಿವಾಸ ಪ್ರಮಾಣಪತ್ರ

ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸುವುದು ಹೇಗೆ?
* ಅಧಿಕೃತ ವೆಬ್ಸೈಟ್ https://pmkisan.gov.in ಗೆ ಭೇಟಿ ನೀಡಿ
* ಮುಖಪುಟದಲ್ಲಿ Farmers Corner ಆಯ್ಕೆ ಕಾಣಲಿದೆ
* Farmers Corner ವಿಭಾಗದಲ್ಲಿ, Beneficiaries List ಆಯ್ಕೆಯ ಮೇಲೆ ಕ್ಲಿಕ್ ಮಾಡಿ
* ಡ್ರಾಪ್ ಡೌನ್ ಪಟ್ಟಿಯಿಂದ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
* ಬಳಿಕ 'Get Report' ಮೇಲೆ ಕ್ಲಿಕ್ ಮಾಡಿ.
* ನಂತರ ಫಲಾನುಭವಿಗಳ ಸಂಪೂರ್ಣ ಪಟ್ಟಿ ಕಾಣಿಸಿಕೊಳ್ಳುತ್ತದೆ, ಅದರಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ನಿಮ್ಮ ಕಂತಿನ ಸ್ಥಿತಿಯನ್ನು ಹೀಗೆ ಪರಿಶೀಲನೆ ಮಾಡಿ
* ಮೊದಲು PM ಕಿಸಾನ್ ವೆಬ್ಸೈಟ್ www.pmkisan.gov.in ಗೆ ಭೇಟಿ ನೀಡಿ
* ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ.
* ನಂತರ Beneficiary Status ಮೇಲೆ ಕ್ಲಿಕ್ ಮಾಡಿ.
* ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
* ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ