ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತಹ ಒಂದು ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಆಗಿದೆ.
ಈ ಯೋಜನೆಯಡಿ ದೇಶದ ಕೋಟ್ಯಂತರ ರೈತರಿಗೆ ಪ್ರತಿ ವರ್ಷ 6,000 ರೂ. 2-2 ಸಾವಿರ ಕಂತುಗಳ ರೂಪದಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಕಳುಹಿಸಲಾಗುತ್ತದೆ. ಮತ್ತು ಈಗ, ಎಲ್ಲರೂ 11 ನೇ ಕಂತುಗಾಗಿ ಕಾಯುತ್ತಿದ್ದಾರೆ.
ಆದರೆ ಅದಕ್ಕೂ ಮೊದಲು, ನೀವು ಇಲ್ಲಿಯವರೆಗೆ ಇ-ಕೆವೈಸಿ ಮಾಡದಿದ್ದರೆ, ನೀವು 11 ನೇ ಕಂತಿನಿಂದ ವಂಚಿತರಾಗುತ್ತೀರಿ ಎಂದು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಆದ್ದರಿಂದ, ಶೀಘ್ರವೇ ಇಕೆವೈಸಿ ಮಾಡಿ ಮುಗಿಸಿಕೊಳ್ಳಿ.

ಪೋರ್ಟಲ್‌ನಲ್ಲಿ ಇ-ಕೆವೈಸಿ ಪುನರಾರಂಭ
ಈ ಹಿಂದೆ ಕಿಸಾನ್ ಪೋರ್ಟಲ್‌ನಲ್ಲಿ ಇ-ಕೆವೈಸಿ ಸೇವೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಗಿತ್ತು ಮತ್ತು ಪ್ರತಿಯೊಬ್ಬರೂ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಕೆವೈಸಿ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಈಗ, ಈ ಸೌಲಭ್ಯವನ್ನು ವೆಬ್‌ಸೈಟ್‌ನಲ್ಲಿ ಮತ್ತೆ ಪ್ರಾರಂಭಿಸಲಾಗಿದೆ ಅಂದರೆ ನೀವು ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಬಹುದು. ಇ-ಕೆವೈಸಿ ಮಾಡಲು ಮೇ 31 ಕೊನೆಯ ದಿನಾಂಕವಾಗಿದೆ. ನೀವು ಮನೆಯಲ್ಲಿಯೇ ಕುಳಿತು ಕೆವೈಸಿ ಮಾಡಿಸಿಕೊಳ್ಳುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ...
ಆನ್‌ಲೈನ್‌ನಲ್ಲಿ ಇಕೆವೈಸಿ ಮಾಡುವುದು ಹೇಗೆ?
* ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
* ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
* ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ
* ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್ ಕ್ಲಿಕ್ ಮಾಡಬೇಕು
* ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್ ಮಾಡಿ
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
* ಒಟಿಪಿಯನ್ನು ನಮೂದಿಸಿ, Submit ಮಾಡಿ
* ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ


Click it and Unblock the Notifications