ಹೋಳಿ ಹಬ್ಬಕ್ಕೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 27ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ಮೋದಿ ರೈತರ ಖಾತೆಗೆ ಬರೋಬ್ಬರಿ 16,800 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ನಿಧಿಯ 13ನೇ ಕಂತು ಬಿಡುಗಡೆ ಮಾಡಿದ್ದಾರೆ. ಆದರೆ ಕಂತಿನ ಮೊತ್ತ ಲಭ್ಯವಾಗಿಲ್ಲವೇ?
ಇನ್ನು ಪಿಎಂ ಕಿಸಾನ್ ನಿಧಿಯ ಮೊತ್ತ ಲಭ್ಯವಾಗಬೇಕಾದರೆ ನೀವು ಕೆವೈಸಿ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ. ನೀವು ಆನ್‌ಲೈನ್ ಮೂಲಕ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಇಲ್ಲವಾದರೆ ನಿಮಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಮೊತ್ತವು ಲಭ್ಯವಾಗದು. ಆದರೆ ನೀವು ಕೆವೈಸಿ ಮಾಡಿದ್ದರೂ ಕೂಡಾ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಮೊತ್ತ ಲಭ್ಯವಾಗಿಲ್ಲವೇ?, ಹಾಗಿದ್ದರೆ ನೀವು ಆನ್‌ಲೈನ್ ಮೂಲಕ ಹೀಗೆ ದೂರು ನೀಡಿ..

ಹಣ ಬಂದಿದೆಯೇ ಹೀಗೆ ಪರಿಶೀಲಿಸಿ
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಹಣ ಬಂದಿಲ್ಲದಿದ್ದರೆ ದೂರು ನೀಡುವುದು ಹೇಗೆ?
ಒಂದು ವೇಳೆ ನಿಮಗೆ ಹನ್ನೊಂದನೇ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಬಹುದು. ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. [email protected] ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು.
ಇಮೇಲ್ ಐಡಿ: [email protected]. ಮತ್ತು [email protected]
ಸಹಾಯವಾಣಿ ಸಂಖ್ಯೆ: 011-24300606,155261
ಟೋಲ್-ಫ್ರೀ ಸಂಖ್ಯೆ: 1800-115-526
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿಯಲ್ಲಿ ಅರ್ಹ ರೈತರುಗಳು ವಾರ್ಷಿಕವಾಗಿ 6 ಸಾವಿರ ರೂಪಾಯಿ ಪಡೆಯಬಹುದಾಗಿದೆ. ರೈತರು ಮೂರು ಕಂತುಗಳಲ್ಲಿ ಎರಡು ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ಪಡೆಯಲಿದ್ದಾರೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗಲಿದೆ. ಫೆಬ್ರವರಿ 2019ರಂದು ಈ ಯೋಜನೆಯನ್ನು ಆರಂಭ ಮಾಡಲಾಗಿದೆ. ಆದರೆ ಡಿಸೆಂಬರ್ 2018ರಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.


Click it and Unblock the Notifications