ಕಳೆದ ತಿಂಗಳು (ಫೆಬ್ರವರಿ 27) ಅಂತ್ಯದಲ್ಲಿ ಅರ್ಹ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಮೊತ್ತವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದ್ದಾರೆ. ಈಗ 14ನೇ ಕಂತಿನ ಮೊತ್ತ ಯಾವಾಗ ಜಮೆಯಾಗುತ್ತದೆ ಎಂಬ ಕಾತುರ ರೈತರಲ್ಲಿದೆ. ಪಿಎಂ ಕಿಸಾನ್ ನಿಧಿಯ 14ನೇ ಕಂತಿನ ಮೊತ್ತವು ಲಕ್ಷಾಂತರ ರೈತರಿಗೆ ಲಭ್ಯವಾಗಲಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದಿನ ಕಂತು ಅಂದರೆ 14ನೇ ಕಂತು ಮುಂದಿನ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆದರೆ ನಿರ್ದಿಷ್ಟವಾಗಿ ಯಾವ ದಿನ ಬಿಡುಗಡೆ ಮಾಡಲಾಗುತ್ತದೆ ಎಂಬ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ, ಈ ಬಗ್ಗೆ ಅಧಿಕೃತ ಘೋಷಣೆಯನ್ನು ಕೂಡಾ ಮಾಡಲಾಗಿಲ್ಲ. ಆದರೆ ಏಪ್ರಿಲ್ 2023ರಿಂದ ಜುಲೈ 2023ರ ನಡುವೆ ಮುಂದಿನ ಕಂತು ಬಿಡುಗೆಯಾಗುವ ಸಾಧ್ಯತೆಯಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿಯಲ್ಲಿ ಅರ್ಹ ರೈತರುಗಳು ವಾರ್ಷಿಕವಾಗಿ 6 ಸಾವಿರ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ. ರೈತರು ಮೂರು ಕಂತುಗಳಲ್ಲಿ ಎರಡು ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ಪಡೆಯಲಿದ್ದಾರೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗಲಿದೆ. ಫೆಬ್ರವರಿ 2019ರಂದು ಈ ಯೋಜನೆಯನ್ನು ಆರಂಭ ಮಾಡಲಾಗಿದೆ. ಆದರೆ ಡಿಸೆಂಬರ್ 2018ರಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಆದರೆ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ರೈತರಿಗೆ ಮೊತ್ತ ಜಮೆಯಾಗದೆ ಇರಬಹುದು. ನೀವು ಆನ್‌ಲೈನ್ ಮೂಲಕ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೆವೈಸಿ ಮಾಡುವ ವಿಧಾನ ಮತ್ತು ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂಬುವುದನ್ನು ನಾವಿಲ್ಲಿ ವಿವರಿಸಿದ್ದೇವೆ. ಮುಂದೆ ಓದಿ...
ಕೆವೈಸಿ ಮಾಡಿಕೊಳ್ಳುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
ಸ್ಟೇಟಸ್ ಪರಿಶೀಲನೆ ಮಾಡಿ
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ


Click it and Unblock the Notifications