ಕೇಂದ್ರ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರಧಾನ ಮಂತ್ರಿ ಕೃಷಿ ಸಂಚಯೀ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಸರ್ಕಾರವು ಹೊಂದಿದೆ. ಇದನ್ನು ಹೊರತುಪಡಿಸಿ ಇನ್ನು ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಸರ್ಕಾರವು ಹೊಂದಿದೆ. ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ (ಪಿಎಂಕೆಎಂವೈ) ಅನ್ನು ಕೂಡಾ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಜಾರಿ ಮಾಡಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಭೂ ರಿಜಿಸ್ಟಾರ್‌ನಲ್ಲಿ ರೈತರ ಹೆಸರು ಉಲ್ಲೇಖವಾಗಿದ್ದರೆ ಮಾತ್ರ ಎಲ್ಲ ಸಣ್ಣ ಮತ್ತು ಮಧ್ಯಮ ರೈತರು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಆದರೆ ಇದರಲ್ಲಿ ಇನ್ನು ಕೆಲವು ಮಾನದಂಡಗಳು ಇದೆ. 2 ಹೆಕ್ಟರ್‌ಗಿಂತ ಭೂಮಿಯನ್ನು ಹೊಂದಿದ್ದರೆ, ಯಾರು 18 ಮತ್ತು 40 ವರ್ಷದ ವಯಸ್ಸಿನವರು ಆಗಿರುತ್ತಾರೋ ಅವರು ಪಿಂಚಣಿಯನ್ನು ಪಡೆಯಲು ಸಾಧ್ಯವಾಗುತ್ತದೆ.
ಇದೊಂದು ಪಿಂಚಣಿ ಯೋಜನೆ
ಹೌದು, ಇದು ಪಿಂಚಣಿ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಮಾಸಿಕವಾಗಿ 3000 ರೂಪಾಯಿ ಪಿಂಚಣಿಯನ್ನು ಪಡೆಯಬಹುದಾಗಿದೆ. ಅಂದರೆ ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ ಅಡಿಯಲ್ಲಿ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ಅರ್ಹ ರೈತರು ನಿಗದಿತ ಪಿಂಚಣಿ 3000 ರೂಪಾಯಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದು ರೈತರಿಗಾಗಿ ಇರುವ ನಿವೃತ್ತಿ ಯೋಜನೆಯಾಗಿದೆ. ಅಂದರೆ 60 ವರ್ಷ ಕಳೆದ ಬಳಿಕ ಯೋಜನೆಯ ಲಾಭವನ್ನು ಪಡೆಯ ಬಹುದಾಗಿದೆ.
ಕಿಸಾನ್ ಮಂದನ್ ಯೋಜನೆಯ ಮಾಹಿತಿ
ಕಿಸಾನ್ ಮಂದನ್ ಯೋಜನೆಯಂತೆಯೇ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ಅರ್ಹ ರೈತರು ವಾರ್ಷಿಕವಾಗಿ 6 ಸಾವಿರ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ. ಆದರೆ ಕಿಸಾನ್ ಮಂದನ್ ಯೋಜನೆಯಲ್ಲಿ ಮಾಸಿಕವಾಗಿ 3 ಸಾವಿರ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ರೈತರು ಸಾವನ್ನಪ್ಪಿದರೆ, ರೈತರ ಪತಿ/ಪತ್ನಿಗೆ ಶೇಕಡ 50ರಷ್ಟು ಪಿಂಚಣಿ ಲಭ್ಯವಾಗಲಿದೆ. ಮಕ್ಕಳಿಗೆ ಪಿಂಚಣಿ ಲಭ್ಯವಾಗದು. ಸಂಗಾತಿ ಮಾತ್ರ ಪಡೆಯಲು ಸಾಧ್ಯ.
ಎಷ್ಟು ಹೂಡಿಕೆ ಮಾಡಬೇಕಾಗುತ್ತದೆ?
ಕಿಸಾನ್ ಮಂದನ್ ಯೋಜನೆಯಲ್ಲಿ ರೈತರು ಮಾಸಿಕ ಪಿಂಚಣಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಯೋಜನೆಯಲ್ಲಿ ನೀವು ಹೂಡಿಕೆ ಮಾಡಬೇಕಾಗುತ್ತದೆ. ಹೂಡಿಕೆ ಮಾಡಿದರೆ ಮಾತ್ರ ಮಾಸಿಕ ಪಿಂಚಣಿಯನ್ನು ಪಡೆಯಲು ಸಾಧ್ಯವಾಗುತ್ತದೆ. 55 ರೂಪಾಯಿಯಿಂದ 200 ರೂಪಾಯಿವರೆಗೆ ಹೂಡಿಕೆ ಮಾಡಬಹುದು. ರೈತರಿಗೆ 60 ವರ್ಷವಾದಾಗ ಪಿಂಚಣಿಯನ್ನು ಕ್ಲೈಮ್ ಮಾಡಿಕೊಳ್ಳಬಹುದು. ಎಷ್ಟು ಮೊತ್ತವನ್ನು ಹೂಡಿಕೆ ಮಾಡುತ್ತಾರೋ ಅದರ ಆಧಾರದಲ್ಲಿ ಪಿಂಚಣಿ ನಿಗದಿಯಾಗಲಿದೆ. ಮಾಸಿಕವಾಗಿ ಹೂಡಿಕೆ ಮಾಡಬಹುದಾಗಿದೆ.
ಈ ಮಾಹಿತಿ ತಿಳಿದಿರಲಿ
ಕಿಸಾನ್ ಮಂದನ್ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಸಣ್ಣ ರೈತರು ಬೇರೆ ಯಾವುದೇ ಯೋಜನೆಯಲ್ಲಿ ಹೂಡಿಕೆ ಮಾಡುವಂತಿಲ್ಲ. ನ್ಯಾಷನಲ್ ಪಿಂಚಣಿ ಯೋಜನೆ (ಎನ್‌ಪಿಎಸ್), ಉದ್ಯೋಗಿಗಳ ರಾಜ್ಯ ವಿಮಾ ಕಾಪೋರೇಷನ್ ಯೋಜನೆ, ಉದ್ಯೋಗಿಗಳ ಫಂಡ್ ಯೋಜನೆಯಂತಹ ಯೋಜನೆಯಲ್ಲಿ ಹೂಡಿಕೆ ಮಾಡುವಂತಿಲ್ಲ. ಇನ್ನು ಕಾರ್ಮಿಕ ಮತ್ತು ಉದ್ಯೋಗಿಗಳ ಸಚಿವಾಲಯವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಂದನ್ ಯೋಜನೆ ಅಥವಾ ಪ್ರಧಾನ ಮಂತ್ರಿ ವ್ಯಾಪಾರಿ ಮಂದನ್ ಯೋಜನೆ ಫಲಾನುಭವಿಗಳು, ಪಿಎಂಕೆಎಂವೈ ಯೋಜನೆಯಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಚಿನ್ನದ ಬೆಲೆ ಇಂದು ಏರಿಕೆ? ಖರೀದಿಸುವ ಮುನ್ನ ಇದನ್ನು ನೋಡಿ



Click it and Unblock the Notifications