ಬಹು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ನಾಳೆ (ಆಗಸ್ಟ್ 30) ಚಾಲನೆ ನೀಡಲಾಗಿದೆ. ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯೋಜನೆಗೆ ಚಾಲನೆ ನೀಡಿದ್ದಾರೆ. ಮಹಿಳೆಯರಿಗೆ ಮಾಸಿಕವಾಗಿ 2,000 ರೂಪಾಯಿ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದ್ದು, ಆಗಸ್ಟ್ 30 ರ ಬುಧವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಪ್ರಾರಂಭಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಸರ್ಕಾರವು 1.9 ಕೋಟಿ ಮಹಿಳೆಯರ ಖಾತೆಗೆ ಹಣವನ್ನು ಜಮೆ ಮಾಡಲಾಗಿದೆ. ಕರ್ನಾಟಕದಾದ್ಯಂತ 10,400 ಕೇಂದ್ರಗಳಲ್ಲಿ ಏಕಕಾಲದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಚಾಲನೆ ನೀಡಿದರು.

ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.
ಏನಿದು ಗೃಹ ಲಕ್ಷ್ಮೀ ಯೋಜನೆ ತಿಳಿಯಿರಿ
ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.
ಖಾತೆಗೆ ಹಣ ಬಂದಿದೆಯಾ ಚೆಕ್ ಮಾಡಿ?
ಈ ಯೋಜನೆಯಡಿಯಲ್ಲಿ ನಿಮ್ಮ ಖಾತೆಗೆ ಹಣ ಜಮೆ ಮಾಡಲಾಗಿದೆಯೇ ಎಂದು ನೀವು ಆನ್‌ಲೈನ್ ಮೂಲಕವೇ ಚೆಕ್ ಮಾಡಬಹುದಾಗಿದೆ. ನಿಮ್ಮ ಬ್ಯಾಂಕ್‌ನ ಆಪ್ ಮೂಲಕ ನಿಮ್ಮ ಖಾತೆಗೆ ಹಣ ಜಮೆಯಾದ ಮಾಹಿತಿ ತಿಳಿಯಬಹುದು. ಇದನ್ನು ಹೊರತುಪಡಿಸಿ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ನಿಮಗೆ ಲಭ್ಯವಾಗಲಿದೆ.


Click it and Unblock the Notifications