ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ. ಈ ನಡುವೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ.
ಹೌದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪಿಎಂ ಕಿಸಾನ್ ಯೋಜನೆಯ 13ನೇ ತಿಂಗಳ ಮೊತ್ತವನ್ನು ಇನ್ನು ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಆದರೆ ಈ ನಡುವೆ ನಿಯಮವನ್ನು ಬಿಗಿಗೊಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2018ರಲ್ಲಿ ಪ್ರಧಾನಿ ಮೋದಿಯವರು ಪ್ರಾರಂಭಿಸಿದರು.
ಯೋಜನೆಯಡಿಯಲ್ಲಿ, ಪ್ರತಿ ವರ್ಷಕ್ಕೆ ರೂ 6000 ಮೊತ್ತವನ್ನು ಮೂರು ನಾಲ್ಕು ಮಾಸಿಕ ಕಂತುಗಳಲ್ಲಿ ತಲಾ ರೂ 2000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ಕಂತು ಮೂರು ಬಾರಿ ಲಭಿಸುತ್ತದೆ. ಆದರೆ ಈಗ ಯಾವ ನಿಯಮವನ್ನು ಸರ್ಕಾರ ಕಟ್ಟುನಿಟ್ಟಾಗಿಸಿದೆ, ಏನು ಬದಲಾವಣೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ..
ಇ-ಕೆವೈಸಿ ಕಡ್ಡಾಯ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯುತ್ತಿರುವ ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿದೆ. ಇಲ್ಲವಾದರೆ 13ನೇ ಕಂತಿನ ಹಣವು ಫಲಾನುಭವಿಗಳ ಖಾತೆಗೆ ಜಮೆ ಆಗುವುದಿಲ್ಲ. ಈ ಹಿಂದೆ ಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಅನ್ನು ಪೂರ್ಣಗೊಳಿಸುವ ಗಡುವನ್ನು ಜುಲೈ 31, 2022ರವರೆಗೆ ವಿಸ್ತರಣೆ ಮಾಡಲಾಗಿತ್ತು. ಅದಕ್ಕೂ ಮೊದಲು ಗಡುವನ್ನು ಮೇ 31, 2022 ಕ್ಕೆ ನಿಗದಿಪಡಿಸಲಾಗಿತ್ತು. ಬಳಿಕ ಆಗಸ್ಟ್ ಕೊನೆಯವರೆಗೆ ವಿಸ್ತರಣೆ ಮಾಡಲಾಗಿದೆ. ಆದರೆ ಈಗಲೂ ಹಲವಾರು ಮಂದಿ ಇಕೆವೈಸಿ ಮಾಡಿಸಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಇಕೆವೈಸಿ ಮಾಡದಿರುವವರ ಖಾತೆಗೆ ಕಂತಿನ ಹಣ ಜಮೆ ಮಾಡದಿರಲು ನಿರ್ಧಾರ ಮಾಡಿದೆ.
ರೇಷನ್ ಕಾರ್ಡ್ ಅನ್ನು ನೀಡಿ!
ಪ್ರಸ್ತುತ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ರೇಷನ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಪಿಎಂ ಕಿಸಾನ್ ವೆಬ್‌ಸೈಟ್‌ನಲ್ಲಿ ರೇಷನ್ ಕಾರ್ಡ್‌ನ ಪಿಡಿಎಫ್ ಪ್ರತಿಯನ್ನು ಈ ಯೋಜನೆಯ ಫಲಾನುಭವಿಗಳು ಅಪ್‌ಲೋಡ್ ಮಾಡಬೇಕಾಗಿದೆ. ರೇಷನ್ ಕಾರ್ಡ್ ಪ್ರತಿಯನ್ನು ರೈತರು ಅಪ್‌ಲೋಡ್ ಮಾಡದಿದ್ದರೆ ಪಿಎಂ ಕಿಸಾನ್ ನಿಧಿಯ ಮೊತ್ತ ಜಮೆ ಆಗುವುದಿಲ್ಲ.
ಇಕೆವೈಸಿ ಹೀಗೆ ಮಾಡಿಕೊಳ್ಳಿ
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಭೇಟಿ ನೀಡಿ, ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 2: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ, ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ
ಹಂತ 3: ಆಧಾರ್ Ekyc ಯ ಪುಟ ತೆರೆಯಲಿದೆ, ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 4: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ, ಬಳಿಕ search ಬಟನ್ ಕ್ಲಿಕ್ ಮಾಡಿ
ಹಂತ 5: ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಿ
ಹಂತ 6: Get OTP ಅನ್ನು ಕ್ಲಿಕ್ ಮಾಡಿ, ನೋಂದಾಯಿತ ಮೊಬೈಲ್ ಸಂಖ್ಯೆಗೆ ಬಂದ ಒಟಿಪಿ ನಮೂದಿಸಿ
ಹಂತ 7: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
ಇಕೆವೈಸಿ ಮಾಡಿದರೂ ಹಣ ಜಮೆಯಾಗದಿದ್ದರೆ?
ಒಂದು ವೇಳೆ ನೀವು ಇಕೆವೈಸಿ ಮಾಡಿದ್ದರೂ ಕೂಡಾ ನಿಮಗೆ ಯೋಜನೆಯ ಹಣ ಲಭ್ಯವಾಗಿಲ್ಲವಾದರೆ, ನೀವು ಅದಕ್ಕೆ ದೂರು ಸಲ್ಲಿಸುವ ಆಯ್ಕೆಯಿದೆ. ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ - 011-24300606 ಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಹಾಗೆಯೇ ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು. ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. PMkisan-ict@gov.in ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ಯಾಕೆ ಜಮೆಯಾಗಿಲ್ಲ ಎಂದು ಪ್ರಶ್ನಿಸಬಹುದು.
ಇಮೇಲ್ ಐಡಿ: pmkisan-ict@gov.in. ಮತ್ತು pmkisan-funds@gov.in
ಸಹಾಯವಾಣಿ ಸಂಖ್ಯೆ: 011-24300606,155261, 011-23381092
ಟೋಲ್-ಫ್ರೀ ಸಂಖ್ಯೆ: 1800-115-526
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications