ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಾವಣಿ ಪ್ರಕ್ರಿಯೆಯು ಡಿಸೆಂಬರ್ 26ರಿಂದ ಆರಂಭವಾಗಲಿದೆ. ಕಾಂಗ್ರೆಸ್ ಚುನಾವಣೆಗೂ ಮುನ್ನ ನೀಡಿದ ಐದು ಖಾತರಿ ಯೋಜನೆಗಳಲ್ಲಿ ಇದು ಕೂಡಾ ಒಂದಾಗಿದೆ. ಈ ಯೋಜನೆಯು ಜನವರಿ 1, 2024 ರಿಂದ ಜಾರಿಗೆ ಬರಲಿದೆ.
ಈ ಯೋಜನೆಯಲ್ಲಿ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿಗಳಿಗೆ ಭತ್ಯೆಯನ್ನು ನೀಡಲಾಗುತ್ತದೆ. ಈ ಯೋಜನೆಗೆ ಬೇಕಾದ ಅರ್ಹತೆ, ಅಗತ್ಯವಾದ ದಾಖಲೆಗಳು, ಯೋಜನೆಯ ಪ್ರಯೋಜನ, ನೋಂದಾಯಿಸುವುದು ಅಥವಾ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ ಮುಂದೆ ಓದಿ......

ಯೋಜನೆಯ ಪ್ರಮುಖ ಮಾಹಿತಿ
ಉತ್ತಮ ಶಿಕ್ಷಣವಿದ್ದರೂ ಉದ್ಯೋಗವಿಲ್ಲದ ನಿರುದ್ಯೋಗಿಗಳಿಗೆ ಈ ಯೋಜನೆಯಡಿಯಲ್ಲಿ ಭತ್ಯೆಯನ್ನು ನೀಡಲಾಗುತ್ತದೆ. ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಲಾಗುತ್ತದೆ. ನಿರುದ್ಯೋಗಿಗಳು ಮಾಸಿಕವಾಗಿ 1500 ರೂಪಾಯಿಯಿಂದ 3000 ರೂಪಾಯಿವರೆಗೆ ಪಡೆಯಬಹುದಾಗಿದೆ. ನಿರುದ್ಯೋಗಿ ಪದವಿದರರಿಗೆ ತಿಂಗಳಿಗೆ 3000 ರೂಪಾಯಿ ಮತ್ತು ಡಿಪ್ಲೋಮಾ ಪಾಸ್ ಆದ ನಿರುದ್ಯೋಗಿಗಳಿಗೆ 1500 ರೂಪಾಯಿ ಮಾಸಿಕ ಭತ್ಯೆಯನ್ನು ನೀಡಲಾಗುತ್ತದೆ.
ಯುವ ನಿಧಿ ಯೋಜನೆ ಪ್ರಯೋಜನ
* ನಿರುದ್ಯೋಗಿ ಯುವಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭ ಮಾಡಲಾಗಿದೆ.
* ಡಿಪ್ಲೋಮಾ ಮತ್ತು ಡಿಗ್ರಿ ಮಾಡಿದ ವಿದ್ಯಾರ್ಥಿಗಳಿಗೆ ಈ ಯೋಜನೆ ಸಹಾಯವಾಗಲಿದೆ.
* ಯುವನಿಧಿ ಯೋಜನೆಯಲ್ಲಿ ಪ್ರತಿ ತಿಂಗಳು ಭತ್ಯೆ ಪಡೆಯಬಹುದು.
* ಯುವಕರಿಗೆ ಉದ್ಯೋಗ ಲಭ್ಯವಾಗುವವರೆಗೆ ಮಾಸಿಕ ಭತ್ಯೆ ಸಿಗುತ್ತದೆ.
* ಹಣಕಾಸು ಸಹಾಯವು ನೇರವಾಗಿಯೇ ಖಾತೆಗೆ ಜಮೆಯಾಗಲಿದೆ.
* ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.
ಯೋಜನೆಯ ಅರ್ಹತೆ ತಿಳಿಯಿರಿ
* ಅರ್ಜಿದಾರರು ಕರ್ನಾಟಕದ ನಿವಾಸಿಗಳು ಆಗಿರಬೇಕು.
* ಡಿಪ್ಲೋಮಾ ಅಥವಾ ಪದವಿ ಪಡೆದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಯಲ್ಲಿ ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡಿಕೊಳ್ಳಬೇಕು.
* ಇಂತಹ ಇತರೆ ಯೋಜನೆಗಳ ಪ್ರಯೋಜನ ಪಡೆಯುತ್ತಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಬೇಕಾದ ದಾಖಲೆಗಳು
* ಪಾಸ್‌ಪೋರ್ಟ್ ಗಾತ್ರದ ಫೋಟೋ
* ಆಧಾರ್ ಕಾರ್ಡ್
* ಪರ್ಮನೆಂಟ್ ಸರ್ಟಿಫಿಕೇಟ್
* ಆದಾಯ ಪ್ರಮಾಣಪತ್ರ
* ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆ
* ಬ್ಯಾಂಕ್ ಖಾತೆ ವಿವರ
* ಮೊಬೈಲ್ ಸಂಖ್ಯೆ
ಯುವನಿಧಿಗೆ ನೋಂದಣಿ ಹೀಗೆ ಮಾಡಿಕೊಳ್ಳಿ
ಹಂತ 1: ಅಧಿಕೃತ ವೆಬ್‌ಸೈಟ್ ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಹಂತ 2: ಹೋಮ್‌ಪೇಜ್‌ನಲ್ಲಿ (https://sevasindhu.karnataka.gov.in/Sevasindhu/English) ವೆಬ್‌ಸೈಟ್ ಕಾಣಿಸಿಕೊಳ್ಳಲಿದೆ.
ಹಂತ 3: ಹೋಮ್‌ಪೇಜ್‌ನಲ್ಲಿ new user register here ಆಯ್ಕೆಯನ್ನು ಕ್ಲಿಕ್ ಮಾಡಿಕೊಳ್ಳಿ.
ಹಂತ 4: ಸ್ಕ್ರೀನ್‌ನಲ್ಲಿ ಹೊಸ ಪೇಜ್ ಕಾಣಿಸಿಕೊಳ್ಳಲಿದೆ.
ಹಂತ 5: ನೀಡಿದ ಬಾಕ್ಸ್‌ನಲ್ಲಿ ಆಧಾರ್ ಸಂಖ್ಯೆಯನ್ನು ಉಲ್ಲೇಖಿಸಿ
ಹಂತ 6: ಕ್ಯಾಪ್ಚಾ ಕೋಡ್ ನಮೂದಿಸಿ, next ಮೇಲೆ ಕ್ಲಿಕ್ ಮಾಡಿ
ಹಂತ 7: ಅರ್ಜಿ ಫಾರ್ಮ್ ಜೊತೆ ಹೊಸ ಪೇಜ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದೆ.
ಹಂತ 8: ಹೆಸರು, ವಿಳಾಸ, ವ್ಯಕ್ತಿಯ ವಿವರ ಮೊದಲಾದ ಮಾಹಿತಿಯನ್ನು ಅರ್ಜಿಯಲ್ಲಿ ನಮೂದಿಸಿ.
ಹಂತ 9: ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿಕೊಳ್ಳಿ.
ಹಂತ 10: ನೀಡಲಾದ ಮಾಹಿತಿಯನ್ನು ಸರಿಯಾಗಿ ಪರಿಶೀಲನೆ ಮಾಡಿಕೊಳ್ಳಿ.
ಹಂತ 11: ಕೊನೆಯಲ್ಲಿ ರಿಜಿಸ್ಟಾರ್ ಆಯ್ಕೆಯನ್ನು ಕ್ಲಿಕ್ ಮಾಡಿ, ಪೋರ್ಟಲ್‌ನಲ್ಲಿ ಯಶಸ್ವಿಯಾಗಿ ರಿಜಿಸ್ಟಾರ್ ಆಗಲಿದೆ.
ಹಂತ 12: ಈಗ ನೀವು ಸುಲಭವಾಗಿ ಲಾಗಿನ್ ಆಗಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications