ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ (Iran-Israel War), ಜಾಗತಿಕ ಮಾರುಕಟ್ಟೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಅತ್ತ ಷೇರು ಮಾರುಕಟ್ಟೆಯ (Stock Market) ಮೇಲೂ ಪ್ರಭಾವ ಬೀರಿದ್ದು, ಗುರುವಾರ ತೀವ್ರ ಕುಸಿತ ಕಂಡಿದೆ. ಹೌದು, ಗುರುವಾರ ಬರುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿದೆ. ಸೆನ್ಸೆಕ್ಸ್ ಸುಮಾರು 1000 ಅಂಕಗಳೊಂದಿಗೆ ಕುಸಿತ ಕಂಡರೆ ಮತ್ತು ನಿಫ್ಟಿ 50, 23,600 ಅಂಕಗಳಿಗಿಂತಲೂ ಕೆಳಕ್ಕೆ ಕುಸಿದಿದೆ.

ಆರಂಭಿಕ ವಹಿವಾಟಿನ ನಂತರ ಸೆನ್ಸೆಕ್ಸ್ 860 ಪಾಯಿಂಟ್‌ಗಳ ಕುಸಿತದೊಂದಿಗೆ 76,031 ಕ್ಕೆ ತಲುಪಿದರೆ, ನಿಫ್ಟಿ 50, 257 ಪಾಯಿಂಟ್‌ಗಳ ಇಳಿಕೆಯೊಂದಿಗೆ 23,609 ರಲ್ಲಿ ವಹಿವಾಟು ನಡೆಸುತ್ತಿದೆ. ಸತತ ಎರಡನೇ ವಾರವೂ ಷೇರು ಮಾರುಕಟ್ಟೆ ಕುಸಿತದಲ್ಲಿದ್ದು, ಈ ವಹಿವಾಟಿನಿಂದ ಬಿಎಸ್‌ಇಯಲ್ಲಿ ಹೂಡಿಕೆ ಮಾಡಲಾದ ಎಲ್ಲಾ ಕಂಪನಿಗಳ ಸುಮಾರು 5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಮಾಡಿದೆ.
ಆರಂಭಿಕ ವಹಿವಾಟಿನಲ್ಲಿ ನಿಫ್ಟಿ 50 ಇಂಡೆಕ್ಸ್ 1.26% ರಷ್ಟು ಕುಸಿತ ಕಂಡಿದ್ದು, 23,565.70 ಕ್ಕೆ ತಲುಪಿತ್ತು. ಆದ್ರೆ ಹಿಂದಿನ ವಹಿವಾಟಿನಲ್ಲಿ ಸ್ವಲ್ಪ ಏರಿಕೆಯಲ್ಲಿ ಅಂದರೆ, 23,866.85 ಪಾಯಿಂಟ್‌ಗಳಿಗೆ ಮುಕ್ತಾಯಗೊಂಡಿತ್ತು. ಇನ್ನು ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಸುಮಾರು 1,000 ಪಾಯಿಂಟ್‌ಗಳ ಕುಸಿತದೊಂದಿಗೆ 75,890.57 ಪಾಯಿಂಟ್ಸ್‌ಗಳಿಗೆ ತಲುಪಿತ್ತು.
ಷೇರು ಮಾರುಕಟ್ಟೆಯ ಕುಸಿತಕ್ಕೆ ಕಾರಣಗಳೇನು?
ಹೆಚ್ಚಾಗುತ್ತಿರುವ ಇಸ್ರೇಲ್-ಇರಾನ್ ಯುದ್ಧದ ಭೀತಿ:
ಇಸ್ರೇಲ್-ಅಮೆರಿಕಾ ಮತ್ತು ಇರಾನ್ ನಡುವೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿದೆ. ಈ ಯುದ್ಧ ಜಾಗತಿಕ ಮಾರುಕಟ್ಟೆಗಳ ಮೇಲೂ ಭಾರೀ ಪರಿಣಾಮ ಬೀರಿದೆಎ. ಇದೀಗ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ನಡೆಸಲು ಆರಂಭಿಸಿದ್ದು, ಭೌಗೋಳಿಕವಾಗಿ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾವಾಗಿದೆ. ಈ ಭೌಗೋಳಿಕ ರಾಜಕೀಯ ಒತ್ತಡದಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಅಲ್ಲದೇ ಭಾರತದ ಮೇಲೂ ಪರಿಣಾಮ ಬೀರಿದ್ದು, ಷೇರು ಮಾರುಕಟ್ಟೆಯಲ್ಲೂ ನಷ್ಟ ಕಾಣುತ್ತಿದೆ.
ಕಚ್ಚಾ ತೈಲ ಬೆಲೆಯಲ್ಲಾದ ಏರಿಕೆ:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಇತ್ತ ಕಚ್ಚಾ ತೈಲ ಬೆಲೆ ಕೂಡಾ ಭಾರೀ ಏರಿಕೆ ಕಂಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ತೈಲ ಸರಬರಾಜಿನ ಮೇಲೂ ಭಾರೀ ಅಡ್ಡಿಯಾಗಿದ್ದು, ಇದು ಹಲವು ದೇಶಗಳ ಮೇಲೆ ಪ್ರಭಾವ ಬೀರಿದೆ. ಇನ್ನು ತೈಲ ಆಮದುದಾರ ದೇಶಗಳಲ್ಲಿ ಭಾರತ ಕೂಡಾ ಒಂದು. ಆದ್ರೆ ಸದ್ಯದ ಪರಿಸ್ಥಿತಿಯಿಂದಾಗಿ ಹಣದುಬ್ಬರದ ಸ್ಥಿತಿ ನಿರ್ಮಾಣವಾಗಿದೆ.
ಷೇರುಗಳ ಮಾರಾಟ:
ವಿದೇಶಿ ಹೂಡಿಕೆದಾರರು ತಾವು ಹೂಡಿಕೆ ಮಾಡಿಟ್ಟ ಷೇರುಗಳನ್ನು ನಿರಂತರವಾಗಿ ಮಾರಾಟ ಮಾಡುತ್ತಿರುವುದರಿಂದ, ಭಾರತೀಯ ಷೇರು ಮಾರುಕಟ್ಟೆ ಮೇಲೆ ಒತ್ತಡ ಬೀರುತ್ತಿದೆ. ಅಲ್ಲದೇ ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳ ಷೇರುಗಳ ಬೆಲೆ ಏರಿಕೆ ಕಂಡಿದ್ದು, ಹೂಡಿಕೆದಾರರು ಲಾಭ ಪಡೆಯುವ ಉದ್ದೇಶದಿಂದ ಮಾರಾಟ ಮಾಡುತ್ತಿದ್ದಾರೆ. ಇದು ಸೆನ್ಸೆಕ್ಸ್ ಮತ್ತು ನಿಫ್ಟಿ ಮೇಲೆ ಅವಲಂಬಿತವಾಗಿರುವುದರಿಂದ, ಇವುಗಳ ಕುಸಿತದಿಂದಾಗಿ ಇಂಡೆಕ್ಸ್‌ಗಳು ಕೂಡಾ ಭಾರೀ ಪ್ರಮಾಣದಲ್ಲಿ ಕುಸಿತ ಕಾಣುತ್ತಿದೆ ಎನ್ನಲಾಗಿದೆ.
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).


Click it and Unblock the Notifications