ಧಾರವಾಡ, ಜು.19: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಪ್ರಸಕ್ತ 2021-22ನೇ ಸಾಲಿನಲ್ಲಿ ತೆರಿಗೆ ಪೂರ್ವ 107.33 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. 66.61 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ವಿವಿಧ ಸಾಲ ಯೋಜನೆಗಳ ಮೂಲಕ 493.25 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಏಕರೂಪ್ ಕೌರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಲ ಯೋಜನೆಗಳಲ್ಲಿ 432.72 ಕೋಟಿ ರೂ.ಗಳನ್ನು ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಘಟಕಗಳಿಗೆ ಮಂಜೂರು ಮಾಡಲಾಗಿದೆ. 2022ರ ಮಾರ್ಚ್ ಅಂತ್ಯದವರೆಗೆ 1,75,123 ಉದ್ಯಮಗಳಿಗೆ 18,779.63 ಕೋಟಿ ರೂ.ಗಳ ಸಂಚಿತ ಸಾಲ ಮಂಜೂರಾತಿ ಮಾಡಲಾಗಿದೆ. ಕಳೆದ ವರ್ಷದಲ್ಲಿ 386.46 ಕೋಟಿ ರೂ.ಗಳ ಸಾಲ ವಿತರಿಸಿದ್ದು, 2022ರ ಮಾರ್ಚ್ ಅಂತ್ಯದವರೆಗೆ 14,776.29 ಕೋಟಿ ರೂ.ಗಳಷ್ಟು ಸಂಚಿತ ವಿತರಣೆ ಮಾಡಲಾಗಿದೆ. ಒಟ್ಟು 741.89 ಕೋಟಿ ರೂ.ಗಳ ವಸೂಲಾತಿ ಮಾಡಲಾಗಿದೆ. ಇದರಲ್ಲಿ 317.64 ಕೋಟಿ ರೂ.ಗಳಷ್ಟು ಮೊತ್ತವು ಬಡ್ಡಿಯಿಂದ ಸಂಗ್ರಹವಾಗಿದೆ. ಸಂಚಿತ ವಸೂಲಾತಿಯ ಮೊತ್ತವು 19,259.93 ಕೋಟಿ ರೂ.ಗಳಷ್ಟಾಗಿರುತ್ತದೆ. 2020-21 ರ ಹಣಕಾಸು ವರ್ಷದಲ್ಲಿ ಶೇ.5.09 ರಷ್ಟಿದ್ದ ನಿವ್ವಳ ಅನುತ್ಪಾದಕ ಆಸ್ತಿಯು ಪ್ರಸಕ್ತ ವರ್ಷದಲ್ಲಿ ಶೇ.4.74ಕ್ಕೆ ಇಳಿದಿದೆ.
ಸಂಸ್ಥೆಯು ಸ್ಥಾಪಿತ ದಿನದಿಂದ ಇಲ್ಲಿಯವರೆಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 22,072 ಉದ್ಯಮಿಗಳಿಗೆ 2,432.62 ಕೋಟಿ ರೂ.ಗಳಿಗೂ ಅಧಿಕ ಸಾಲಗಳ ಮಂಜೂರಾತಿ ನೆರವನ್ನು ನೀಡಿದೆ. ಸಂಸ್ಥೆಯು ಆರಂಭದಿಂದ ಇಲ್ಲಿಯವರೆಗೂ 31,202 ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿದಾರರಿಗೆ 4,511.44 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಿದೆ. ಹಿಂದುಳಿದ ಮತ್ತು ಅಲ್ಪ ಸಂಖ್ಯಾತ 41,199 ಉದ್ಯಮಿಗಳಿಗೆ ಇಲ್ಲಿಯವರೆಗೆ 1,834.60 ಕೋಟಿ ರೂ.ಗಳ ಸಾಲ ಮಂಜೂರಾತಿ ನೆರವು ಒದಗಿಸಿದೆ.

ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಆಕರ್ಷಕ ಸಹಾಯಧನ ಯೋಜನೆಯಡಿ ನೆರವಿನ ವಿವರ: 2021-22 ನೇ ವರ್ಷದಲ್ಲಿ ಸಂಸ್ಥೆಯು, ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಬಡ್ಡಿ ಸಹಾಯಧನ ಯೋಜನೆಗಳಲ್ಲಿ, 37 ಮಹಿಳಾ ಉದ್ಯಮಿಗಳಿಗೆ 42.76 ಕೋಟಿ ರೂ.ಗಳ ಮಂಜೂರಾತಿ ಮಾಡಿದೆ. ಮಾರ್ಚ್ 2022 ರ ಅಂತ್ಯದವರೆಗೆ 917.34 ಕೋಟಿ ರೂ.ಗಳ ಸಂಚಿತ ನೆರವನ್ನು 1,252 ಮಹಿಳಾ ಉದ್ಯಮಿಗಳಿಗೆ ಒದಗಿಸಲಾಗಿದೆ. ಹಾಗೆಯೇ ಸದರಿ ವರ್ಷದಲ್ಲಿ 177 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 164.61 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿದೆ. ಸದರಿ ಹಣಕಾಸು ವರ್ಷದ ಅಂತ್ಯದವರೆಗೆ 1,942.19 ಕೋಟಿ ರೂ.ಗಳ ಸಂಚಿತ ನೆರವನ್ನು 3,456 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ನೀಡಲಾಗಿದೆ.

ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಬಡ್ಡಿ ಸಹಾಯಧನ ಯೋಜನೆಯಡಿಯಲ್ಲಿ 213 ಘಟಕಗಳಿಗೆ 243.02 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಹಣಕಾಸು ವರ್ಷದ ಅಂತ್ಯದವರೆಗೆ, 912 ಉದ್ಯಮಗಳಿಗೆ 995.20 ಕೋಟಿ ರೂ.ಗಳ ಸಂಚಿತ ನೆರವನ್ನು ನೀಡಲಾಗಿದೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ರಾಜ್ಯ ಸರ್ಕಾರದ ನೆರವು:
2021-22ರ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರವು ಸಂಸ್ಥೆಗೆ 50 ಕೋಟಿ ರೂ.ಗಳ ಇಕ್ವಿಟಿ ಬಂಡವಾಳವನ್ನು ಹಾಗೂ 171.85 ಕೋಟಿ ರೂ.ಗಳ ಬಡ್ಡಿ ಸಹಾಯಧನ ಯೋಜನೆಗಳಿಗೆ ಪೂರಕ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಘಟಕಗಳಿಗೆ ವಿಶೇಷ ಹಣಕಾಸು ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 25.51 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ.
ಸಂಸ್ಥೆಯಿಂದ ಕೋವಿಡ್-19ರ ಸಾಂಕ್ರಾಮಿಕ ಸೋಂಕು ಅವಧಿಯಲ್ಲಿ ಸಾಲಗಾರರಿಗೆ ಒದಗಿಸಿರುವ ಸೌಲಭ್ಯಗಳು:
ಭಾರತೀಯ ರಿಸರ್ವ್ ಬ್ಯಾಂಕ್ ಅಧಿಸೂಚನೆ ರೆಸಲ್ಯೂಷನ್ ಫ್ರೇಮ್ ವರ್ಕ್ 2.0 ಗೆ ಅನುಗುಣವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಘಟಕಗಳಿಗೆ ಕೋವಿಡ್-19ರ ಸಾಂಕ್ರಾಮಿಕ ರೋಗದ ಪರಿಣಾಮದ ಸಮಸ್ಯೆಗಳಿಗೆ ಸಾಲ ಮರುಪಾವತಿಯ ಪುನರ್ ರಚನೆ ಸೌಲಭ್ಯ ನೀಡಲಾಯಿತು.
2022-23ನೇ ಹಣಕಾಸು ವರ್ಷದ ಕಾರ್ಯಾಚರಣೆಯ ಗುರಿಗಳು :
ಸಂಸ್ಥೆಯು 2022-23ರಲ್ಲಿ 1010.00 ಕೋಟಿ ರೂ.ಗಳ ಸಾಧಾರಣ ಮಂಜೂರಾತಿ ಗುರಿಯನ್ನು ಇಟ್ಟುಕೊಂಡು ಗುಣಮಟ್ಟದ ಉದ್ಯಮಗಳಿಗೆ ಹಣಕಾಸು ನೆರವು ನೀಡಿ ಆರ್ಥಿಕ ಅಭಿವೃದ್ದಿಯ ಯೋಜನೆ ಹಾಕಿಕೊಂಡಿದೆ. 2022-23ರಲ್ಲಿ ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತ್ತು ಮಹಿಳಾ ಉದ್ಯಮಿಗಳಿಗೆ ಹಾಗೂ ಅತಿ ಸಣ್ಣ ಮತ್ತು ಸಣ್ಣ ಗಾತ್ರದ ಘಟಕಗಳಿಗೆ ಲಭ್ಯವಿರುವ ಬಡ್ಡಿ ಸಹಾಯಧನ ಯೋಜನೆಯಿಂದ ಮುಂಬರುವ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಮಂಜೂರಾತಿ ಹಾಗೂ ವಿತರಣೆಯ ಗುರಿ ಸಾಧಿಸಲು ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದೆ. ಅಲ್ಲದೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಡಾ.ಏಕರೂಪ್ ಕೌರ್ ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications