ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಳದಲ್ಲಿ ವಾರ್ಷಿಕವಾಗಿ ನಡೆಯುವ ಎರಡು ತಿಂಗಳ ತೀರ್ಥಯಾತ್ರೆ ಕಾರ್ಯಕ್ರಮದ ಮೊದಲ 28 ದಿನದಲ್ಲಿ ಈ ಬಾರಿ 104 ಕೋಟಿ ರುಪಾಯಿಗಿಂತ ಹೆಚ್ಚು ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 64 ಕೋಟಿ ರುಪಾಯಿ ಸಂಗ್ರಹವಾಗಿತ್ತು ಎಂದು ತಿರುವಾಂಕೂರ್ ದೇವಸ್ವಂ ಮಂಡಳಿಯಿಂದ ಮಾಹಿತಿ ನೀಡಲಾಗಿದೆ.
ಶಬರಿಮಲೆ ಅಯ್ಯಪ್ಪ ದೇವಳವನ್ನು ತಿರುವಾಂಕೂರ್ ದೇವಸ್ವಂ ಮಂಡಳಿಯಿಂದಲೇ ನಿರ್ವಹಣೆ ಮಾಡಲಾಗುತ್ತಿದೆ. ಮಂಡಳಿ ನೀಡಿರುವ ಮಾಹಿತಿ ಪ್ರಕಾರ, ವಾರ್ಷಿಕ ಮಂಡಳಂ ಮಕರವಿಳಕ್ಕು ತೀರ್ಥ ಯಾತ್ರೆಯು ಆರಂಭವಾದ ಮೇಲೆ 104.72 ಕೋಟಿ ರುಪಾಯಿ ಆದಾಯ ಬಂದಿದೆ ಎಂದು ತಿಳಿಸಿದ್ದು, ನವೆಂಬರ್ 17ನೇ ತಾರೀಕಿನಿಂದ ಈ ವಾರ್ಷಿಕ ಯಾತ್ರೆಯು ಶುರುವಾಗಿದೆ.
ಐದು ಕೋಟಿ ರುಪಾಯಿ ಮೊತ್ತದ ನಾಣ್ಯಗಳ ಎಣಿಕೆಯನ್ನು ಇನ್ನೂ ಮಾಡಬೇಕಿದೆ. ಕೋರ್ಟ್ ನ ಅನುಮತಿ ಪಡೆದು, ನಾಣ್ಯಗಳನ್ನು ತೂಕ ಹಾಕುವ ಮೂಲಕ ಲೆಕ್ಕ ಹಾಕುತ್ತೇವೆ ಎಂದು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್. ವಾಸು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಅನ್ನದಾನ ಆಯೋಜಿಸಲು ಸಂಗ್ರಹವಾದ ದೇಣಿಗೆ, ಪ್ರಸಾದದ ಮಾರಾಟದ ಮೂಲಕ ಸಂಗ್ರಹಿಸಿದ ಹಣ, ನಾಣ್ಯ- ನೋಟುಗಳ ರೂಪದಲ್ಲಿ ಭಕ್ತರು ನೀಡಿದ್ದು ಎಲ್ಲವೂ ಸೇರಿ ಆದಾಯ ಲೆಕ್ಕ ಹಾಕಲಾಗುತ್ತದೆ. ಕಳೆದ ವರ್ಷ ಎಲ್ಲ ವಯಸ್ಸಿನ ಮಹಿಳೆಯರೂ ದೇವಳ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಮೇಲೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿತ್ತು. ಆದಾಯದಲ್ಲಿ ಭಾರೀ ಇಳಿಕೆಯಾಗಿತ್ತು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications