ಸರ್ಕಾರಿ ರೈಲ್ವೆ ಪೊಲೀಸ್ (GRP)ರಿಂದ ಶನಿವಾರ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. 18 ಕೇಜಿಗೂ ಹೆಚ್ಚು ತೂಕದ ಚಿನ್ನ ಮತ್ತು 2.30 ಲಕ್ಷ ನಗದನ್ನು ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಪರಿಶೀಲನೆ ಮಾಡುವ ವೇಳೆ, ಶಾಲಿಮಾರ್ ಎಕ್ಸ್ ಪ್ರೆಸ್ ನಲ್ಲಿ ಬಂದ ವ್ಯಕ್ತಿಯೊಬ್ಬನ ಬಳಿ 18.39 ಕೇಜಿ ಚಿನ್ನ ಹಾಗೂ 2.30 ಲಕ್ಷ ರುಪಾಯಿ ನಗದು ಬ್ಯಾಗ್ ನಲ್ಲಿ ಪತ್ತೆಯಾಯಿತು ಎಂದು ಹೇಳಿದ್ದಾರೆ.
ಆದಾಯ ತೆರಿಗೆ, ಮಾರಾಟ ತೆರಿಗೆ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ಮತ್ತಷ್ಟು ವಿಚಾರಣೆ ನಡೆಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಜಿಆರ್ ಪಿಯ ಡಿಎಸ್ ಪಿ ಮನೋಜ್ ಕುಮಾರ್ ಅವರು ಮಾತನಾಡಿ, ಮತ್ತೊಂದು ಘಟನೆಯಲ್ಲಿ ಪ್ರಯಾಣಿಕನೊಬ್ಬನಿಂದ 24 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

"ಒಟ್ಟು 24.8 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ," ಎಂದು ತಿಳಿಸಿದ್ದಾರೆ. ಕೊರೊನಾ ಲಾಕ್ ಡೌನ್ ನಂತರ ಭಾರತದಲ್ಲಿ ವಿಮಾನದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಪ್ರಮಾಣ ಬಹಳ ಕಡಿಮೆ ಆಗಿದೆ. ಆದರೆ ಅದಕ್ಕೆ ಪರ್ಯಾಯ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಈಚೆಗೆ ತಿಳಿಸಲಾಗಿತ್ತು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications