ಕಳೆದ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತ 26 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಚಿನ್ನವನ್ನು ಆಮದು ಮಾಡಿಕೊಂಡಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.
ರಾಜ್ಯ ಸಭೆಗೆ ಲಿಖಿತ ಹೇಳಿಕೆಯೊಂದನ್ನು ನೀಡಿರುವ ಹಣಕಾಸು ಖಾತೆ ರಾಜ್ಯ ಸಚಿವ ಜಯಂತ್ ಸಿನ್ಹಾ 664.29 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿದ್ದು ಅದರ ಒಟ್ಟು ಮೌಲ್ಯ 25.74 ಬಿಲಿಯನ್ ಡಾಲರ್ ಆಗುತ್ತದೆ ಎಂದು ತಿಳಿಸಿದರು.[ಕ್ರೆಡಿಟ್ ಕಾರ್ಡ್ ಅಂಕೆಗಳು ಏನನ್ನು ಸೂಚಿಸುತ್ತವೆ?]
ಆದರೆ ಕಳೆದ 9 ತಿಂಗಳ ಅವಧಿಯಲ್ಲಿ ದೇಶ ಕೇವಲ 38.11 ಟನ್ ಚಿನ್ನವನ್ನು ರಫ್ತಿ ಮಾಡಿದೆ. ಇದರ ಮೌಲ್ಯ 1.55 ಬಿಲಿಯನ್ ಡಾಲರ್ ಆಗುತ್ತದೆ ಎಂದು ತಿಳಿಸಿದ್ದಾರೆ.
ಚಿನ್ನದ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ ವಜ್ರದ ಇಂಡಸ್ಟ್ರಿಗೆ ಹಣಕಾಸು ನೆರವು ನೀಡುತ್ತಿರುವ ಎಬಿಎನ್ ಆಮ್ರೋ ಬ್ಯಾಂಕ್ ಗೆ ಅಧಿಕೃತ ಲೈಸನ್ಸ್ ನೀಡಿಕೆ ಬಗೆಗೂ ಚಿಂತಿಸಲಾಗಿದೆ ಎಂದು ಸಿನ್ಹಾ ತಿಳಿಸಿದ್ದಾರೆ.(ಗುಡ್ ರಿಟರ್ನ್ಸ್.ಇನ್)