10 ರೂ. ನಕಲಿ ನಾಣ್ಯ ಚಲಾವಣೆಯಲ್ಲಿದೆ ಎಂದು ಹರಡಿರುವ ವದಂತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯ ಅಲ್ಲಗಳೆದಿದೆ.
10 ರೂ. ನಕಲಿ ನಾಣ್ಯ ಚಲಾವಣೆಯಲ್ಲಿದೆ ಎಂದು ಹರಡಿರುವ ವದಂತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯ ಅಲ್ಲಗಳೆದಿದ್ದು, ಇಂತಹ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಅಲ್ಲದೇ ಯಾವುದೇ ಹಿಂಜರಿಕೆ ಇಲ್ಲದೆ 10 ರೂ. ನಾಣ್ಯವನ್ನು ವ್ಯವಹಾರಕ್ಕೆ ಬಳಸಬಹುದು ಎಂದು ತಿಳಿಸಿದೆ.
ಕೆಲ ಊಹಾಪೋಹಗಳಿಂದಾಗಿ ಸಾರ್ವಜನಿಕರು ನಾಣ್ಯಗಳ ನಿಖರತೆಯ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು, ವ್ಯಾಪಾರಿಗಳು, ಅಂಗಡಿ ಮಾಲಿಕರು, ಚಿಲ್ಲರೆ ವ್ಯವಹಾರಸ್ಥರು ಹಾಗೂ ಜನಸಾಮಾನ್ಯರು ಗೊಂದಲ ಪಡುವಂತಾಗಿದೆ. ಹೀಗಾಗಿ ಅನಗತ್ಯವಾದ ಸಂಶಯಗಳಿಗೆ ಜನರು ಒಳಗಾಗುತ್ತಿದ್ದಾರೆ ಎಂದು ಆರ್ಬಿಐ ಹೇಳಿದೆ.
ಆರ್ಬಿಐ ಸ್ಪಷ್ಟನೆ:
10 ರೂ. ನಾಣ್ಯ ರದ್ದಾಗಿಲ್ಲ ಹಾಗೂ ನಕಲಿಯಲ್ಲ. ದಿನಿತ್ಯದ ವ್ಯವಹಾರದ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಗೊಂದಲ, ಹಿಂಜರಿಕೆ ಇಲ್ಲದೇ ಬಳಸಬಹುದಾಗಿದೆ. ಹಳೆ ನಾಣ್ಯಗಳು ದೀರ್ಘಾವಧಿಯವರೆಗೆ ಚಲಾವಣೆಯಲ್ಲಿರುವುದರಿಂದ ವಿವಿಧ ವಿನ್ಯಾಸ ಮತ್ತು ಆಕಾರದ ನಾಣ್ಯಗಳು ಚಲಾವಣೆಗೆ ಬರುವ ನಿರೀಕ್ಷೆಯಿದೆ ಎಂದು ಆರ್ಬಿಐ ಸ್ಪಷ್ಟಪಡಿಸಿದೆ.
ದೇಶದ ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕ ಲಕ್ಷಣಗಳನ್ನು ಪ್ರತಿಬಿಂಬಿಸುವ ಹೊಸ ಮುಖಬೆಲೆಯ ನಾಣ್ಯಗಳನ್ನು ಆರ್ಬಿಐ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತ ಬಂದಿದೆ ಎಂದು ತಿಳಿಸಿದೆ.

More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications