ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹಳೆ ನೋಟು ನಿಷೇಧದ ಕುರಿತು ಮೌನ ಮುರಿದಿದ್ದು, ಜನಸಾಮಾನ್ಯರ ನಿಜವಾದ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹಳೆ ನೋಟು ನಿಷೇಧದ ಕುರಿತು ಮೌನ ಮುರಿದಿದ್ದು, ಜನಸಾಮಾನ್ಯರ ನಿಜವಾದ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲಿಯೇ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಗುವುದು ಎಂದು ಹೇಳಿದರು.
ನಗದು ಮೀಸಲು ಅನುಪಾತ ಏರಿಕೆ
ರಿಸರ್ವ್ ಬ್ಯಾಂಕ್ ನಾಗರಿಕರ ಸದ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಳೆ ನೋಟುಗಳ ಚಲಾವಣೆ ರದ್ದತಿ ನಂತರ ಬ್ಯಾಂಕು/ಅಂಚೆ ಕಚೇರಿಗಳಲ್ಲಿ ಠೇವಣಿ ಹೂಡಿಕೆ ಹೆಚ್ಚಾಗಿರುವುದರಿಂದ ನಗದು ಮೀಸಲು ಅನುಪಾತ ಶೇ. 100 ಏರಿಕೆಯಾಗಿದೆ.
ಡಿಜಿಟಲ್ ಪೇಮೆಂಟ್ಸ್ ಗೆ ಪ್ರೋತ್ಸಾಹ
100 ಮತ್ತು 500 ಮುಖಬೆಲೆಯ ನೋಟುಗಳನ್ನು ಮುದ್ರಿಸಿ ನೋಟುಗಳ ಕೊರತೆಯನ್ನು ಸರಿದೂಗಿಸಲು ಪ್ರಯತ್ನಿಸಲಾಗುತ್ತಿದೆ. ಜನರು ಹೆಚ್ಚೆಚ್ಚು ಡೆಬಿಟ್ ಕಾರ್ಡುಗಳು, ಡಿಜಿಟಲ್ ಪೇಮೆಂಟ್ಸ್ ಗಳನ್ನು ಬಳಸುವಂತಾಗಬೇಕು. ದೀರ್ಘಾವಧಿಯಲ್ಲಿ ನಗದಿಗಿಂತ ಕಾರ್ಡುಗಳನ್ನು ಬಳಸುವ ಮೂಲಕ ವ್ಯವಹಾರಗಳನ್ನು ಮಾಡಬೇಕು ಎಂದು ಹೇಳಿದರು.
ಬ್ಯಾಂಕುಗಳೊಂದಿಗೆ ಸಂವಾದ
ರಿಸರ್ವ್ ಬ್ಯಾಂಕು ದೇಶದ ಬ್ಯಾಂಕುಗಳೊಂದಿಗೆ ಪ್ರತಿನಿತ್ಯ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸುತ್ತಿದ್ದು, ಪರಿಸ್ಥಿತಿ ನಿಧಾನವಾಗಿ ಸಮತೋಲನಕ್ಕೆ ಬರುತ್ತಿದೆ. ಜನಸಾಮಾನ್ಯರ ದಿನನಿತ್ಯದ ಸರಕುಗಳ ಬಳಕೆಗೆ ಯಾವುದೇ ಕೊರತೆಯಿಲ್ಲ. ಆರ್ ಬಿಐ ಮತ್ತು ಕೇಂದ್ರ ಸರ್ಕಾರ ನೋಟುಗಳ ಮುದ್ರಣ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಜನರ ಬೇಡಿಕೆಯನ್ನು ಪೂರೈಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications