ನಿಯೋಜಿತ ಅಧ್ಯಕ್ಷರು ಎಂದು ಬಿಂಬಿತವಾಗಿರುವ ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷ ಗಾದಿ ಮೇಲೆ ಕೂತರೆ ಭಾರತದ ಐಟಿ ರಂಗದ ಮೇಲೆ ಪರಿಣಾಮ ಬೀರುವುದರಲ್ಲಿ ಸಂಶಯವಿಲ್ಲ ಎನ್ನುವುದು ತಜ್ಞರ ಅಭಿಮತ.
ಅಮೆರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ವೈಖರಿಯಿಂದ ಉಂಟಾಗಬಹುದಾದ ಪರಿಣಾಮಗಳನ್ನು ಮನಗಂಡು ಅಮೆರಿಕನ್ನರು ಟ್ರಂಪ್ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಅಲ್ಲದೇ ಟ್ರಂಪ್ ಅವರ ಆಡಳಿತ ವೈಖರಿ ಭಾರತೀಯ ಐಟಿ ಕ್ಷೇತ್ರದ ಮೇಲೆ ದುಷ್ಪರಿಣಾಮಗಳು ಬೀರುವ ಸಾಧ್ಯತೆಗಳೂ ಇವೆ.
ಈಗಾಗಲೇ ಟ್ರಂಪ್ ಕೈಗೊಳ್ಳಬಹುದಾದ ನೀತಿಗಳಿಂದಾಗಿ ಷೇರುಪೇಟೆ, ಹಣದುಬ್ಬರದ ಮೇಲೆ ಭಾರಿ ಪರಿಣಾಮಗಳೇ ಉಂಟಾಗಿವೆ. ಡೊನಾಲ್ಡ್ ಟ್ರಂಪ್ ಗೆದ್ದರೆ ಭಾರತದ ಐಟಿ ಇಂಡಸ್ಟ್ರಿ ನಾಶವಾಗುವುದೆ?
ನಿಯೋಜಿತ ಅಧ್ಯಕ್ಷರು ಎಂದು ಬಿಂಬಿತವಾಗಿರುವ ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷ ಗಾದಿ ಮೇಲೆ ಕೂತರೆ ಭಾರತದ ಐಟಿ ರಂಗದ ಮೇಲೆ ಪರಿಣಾಮ ಬೀರುವುದರಲ್ಲಿ ಸಂಶಯವಿಲ್ಲ ಎನ್ನುವುದು ತಜ್ಞರ ಅಭಿಮತ. ಹಾಗಿದ್ದರೆ ಆ ಪರಿಣಾಮಗಳು ಯಾವವು ಎಂಬುದನ್ನು ನೋಡೋಣ...
1. ವೀಸಾ ನೀತಿ
H1-B ವೀಸಾದ ಅಡಿಯಲ್ಲಿ ಪ್ರತಿ ವರ್ಷ ಭಾರತದ ಐಟಿ ಇಂಡಸ್ಟ್ರಿ ಲಕ್ಷ ಲಕ್ಷ ಉದ್ಯೋಗಿಗಳನ್ನು ಯುಎಸ್ ಗೆ ಕಳುಹಿಸಿಕೊಡುತ್ತದೆ. ಇದರಿಂದಾಗಿ ಅಮೆರಿಕನ್ನರ ಉದ್ಯೋಗದ ಅವಕಾಶಗಳಿಗೆ ಹಾನಿ ಮಾಡಿದಂತಾಗುತ್ತದೆ ಎನ್ನುವುದು ಡೊನಾಲ್ಡ್ ಟ್ರಂಪ್ ಅಭಿಪ್ರಾಯ. H1-B ವೀಸಾ ಅಮೆರಿಕಾದ ಕಂಪನಿಗಳಲ್ಲಿ ಕೆಲಸ ಮಾಡಲು ವಿದೇಶದಿಂದ ತಜ್ಞ ನೌಕರರನ್ನು ನೇಮಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ಅಮೆರಿಕಾದ ಕೆಲಸಗಾರರಿಗೆ ಉದ್ಯೋಗ ಸಿಗುತ್ತಿಲ್ಲ ಎನ್ನುವುದು ಟ್ರಂಪ್ ವಾದ.
2. ಐಟಿ ಕಂಪನಿಗಳಿಗೆ ಭಾರಿ ಹೊಡೆತ
ವೀಸಾ ನೀತಿಯ ಹಿನ್ನೆಲೆಯಲ್ಲಿ ಅಮೆರಿಕಾದ ಸ್ಥಳೀಯರಿಗೆ ಮಾತ್ರ ಉದ್ಯೋಗ ಯೋಜನೆಗಳನ್ನು ಜಾರಿಗೊಳಿಸಿದರೆ ಟಿಸಿಎಸ್, ಇನ್ಫೋಸಿಸ್ ಹಾಗೂ ವಿಪ್ರೋಗೆ ಸೇರಿದಂತೆ ದೇಶದ ಐಟಿ ಕಂಪನಿಗಳ ಮೇಲೆ ಭಾರಿ ಹೊಡೆತ ಬೀಳಲಿದೆ. ಅಮೆರಿಕಕ್ಕೆ ಹೋಗಲು ವರವಾಗಿದ್ದ ಎಚ್1- ಬಿ ವೀಸಾವನ್ನು ತೆಗೆದು ಹಾಕಿದಲ್ಲಿ ಸುಮಾರು 150 ಬಿಲಿಯನ್ ಡಾಲರ್ ಐಟಿ ಸೇವಾ ಕ್ಷೇತ್ರ ಆತಂಕ ಎದುರಿಸಲಿದೆ.
3. ಕ್ಯಾಂಪಸ್ ಸಂದರ್ಶನ
ಭಾರತದಲ್ಲಿ ಕ್ಯಾಂಪಸ್ ಸಂದರ್ಶನ ಕೈಗೊಳ್ಳುವಂತೆ ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅಮೆರಿಕದಲ್ಲೇ ಕ್ಯಾಂಪಸ್ ಸಂದರ್ಶನ ನಡೆಸಲು ಸೂಚನೆ ನೀಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಅಲ್ಲಿನ ಕಾಲೇಜುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಂಪಸ್ ಇಂಟರ್ ವ್ಯೂ ನಡೆಸಲು ಮುಂದಾಗಿವೆ.
4. ಯುಎಸ್ ಗೆ 86 ಸಾವಿರ ಉದ್ಯೋಗಿಗಳು
2014-15ರ ಅವಧಿಯಲ್ಲಿ ಟಿಸಿಎಸ್, ವಿಪ್ರೋ, ಇನ್ಫೋಸಿಸ್ ಕಂಪೆನಿಗಳು ಎಚ್1-ಬಿ ವೀಸಾದ ಅಡಿಯಲ್ಲಿ ಒಟ್ಟು 86 ಸಾವಿರದಷ್ಟು ಸಾಪ್ಟ್ವೇರ್ ಉದ್ಯೋಗಿಗಳನ್ನು ಅಮೆರಿಕಕ್ಕೆ ಕಳುಹಿಸಿತ್ತು. ಆದರೆ, ಈಗ ನಿಪುಣ ಕೆಲಸಗಾರರ(Skilled worker) ವೀಸಾ ಸಂಪೂರ್ಣ ಸ್ಥಗಿತಗೊಂಡರೆ ಏನು ಗತಿ ಎಂಬ ಆತಂಕ ಮೂಡಿದೆ.
5. ಬ್ರಿಟನ್ ನಿರ್ಧಾರ ಐಟಿ ವಲಯಕ್ಕೆ ಹೊಡೆತ
ಟ್ರಂಪ್ ಗೆಲುವಿನ ನಂತರ ಯೂರೋಪಿಯನ್ ಒಕ್ಕೂಟದಿಂದ ಹೊರ ಹೋಗುವ ಬ್ರಿಟನ್ ನಿರ್ಧಾರದಿಂದ ಭಾರತದ ಐಟಿ ವಲಯಕ್ಕೆ ಭಾರಿ ಹೊಡೆತ ಉಂಟಾಗಿದೆ. ಅಮೆರಿಕ ಹಾಗೂ ಬ್ರಿಟನ್ನಿನ ಬ್ಯಾಂಕ್ ಹಾಗೂ ವಿಮಾದಾರರು ಭಾರತದ ಪ್ರಮುಖ ಗ್ರಾಹಕರಾಗಿರುವುದರಿಂದ ಈ ಅಂಶವು ಕೂಡ ಮುಖ್ಯವಾಗುತ್ತದೆ.
6. ಇನ್ಫೋಸಿಸ್ ಪ್ರತಿಕ್ರಿಯೆ
ವಿದೇಶಕ್ಕೆ ಪ್ರತಿಭಾವಂತ ಉದ್ಯೋಗಿಗಳನ್ನು ಕಳುಹಿಸುವುದು ಸಹಜ ಪ್ರಕ್ರಿಯೆ. ಆದರೆ, ಈಗ ಗೊಂದಲ ಉಂಟಾಗಿರುವುದರಿಂದ ಈ ಬಗ್ಗೆ ಇನ್ನೂ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ವಿಶ್ವವಿದ್ಯಾಲಯಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ನಿಲ್ಲಿಸಲಾಗುವುದಿಲ್ಲ ಎಂದು ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಇನ್ಫೋಸಿಸ್ ನ ಸಿಒಒ ಪ್ರವೀಣ್ ರಾವ್ ಪ್ರತಿಕ್ರಿಯೆ ನಿಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications