ಚೆಕ್ ಬೌನ್ಸ್ ಮಾಡಿದವರಿಗೆ ಕಾದಿದೆ ಕಠಿಣ ಶಿಕ್ಷೆ

ನೋಟು ನಿಷೇಧದ ನಂತರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರ ಚೆಕ್ ಬೌನ್ಸ್ ಕಾನೂನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ.

ನೋಟು ನಿಷೇಧದ ನಂತರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರ ಚೆಕ್ ಬೌನ್ಸ್ ಕಾನೂನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ.

ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥ ಕುರಿತಂತೆ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಕೇಂದ್ರ ಚಿಂತನೆ ನಡೆಸಿದ್ದು, ಕಾನೂನು ತಿದ್ದುಪಡಿಗೆ ನಿರ್ಧರಿಸಿದೆ.
ಇನ್ನು ಮುಂದೆ ಚೆಕ್ ಬೌನ್ಸ್ ಪ್ರಕರಣಗಳನ್ನು ಜಾಮೀನು ರಹಿತ ಅಪರಾಧಗಳ ಪಟ್ಟಿಗೆ ಸೇರಿಸುವ ಮೂಲಕ ಚೆಕ್ ಬೌನ್ಸ್ ಪ್ರಕರಣಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಈಗಾಗಲೇ ದೇಶಾದ್ಯಂತ ಸಾವಿರಾರು ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ನ್ಯಾಯಾಲಯದ ಸಮಯ ಈ ಪ್ರಕರಣಗಳ ವಿಚಾರಣೆಯಲ್ಲೇ ವ್ಯರ್ಥವಾಗುತ್ತಿದೆ. ಹೀಗಾಗಿ ಚೆಕ್ ಬೌನ್ಸ್ ಪ್ರಕರಣಗಳನ್ನು ನಿಯಂತ್ರಣ ತರಲು ಕಠಿಣ ಕಾನೂನು ಜಾರಿಗೆ ಅಗತ್ಯವಾಗಿದೆ ಎಂದು ತಿಳಿಸಿದೆ.

ಚೆಕ್ ಬೌನ್ಸ್ ಒಂದು ಪ್ರಮುಖ ಸಮಸ್ಯೆಯಾಗಿ ಕಾಡುತ್ತಿದ್ದು, ಗ್ರಾಹಕರಿಂದ ಚೆಕ್ ಗಳನ್ನು ಸ್ವೀಕರಿಸಲು ವ್ಯಾಪಾರಿಗಳು ಹಿಂಜರಿಯುವಂತಾಗಿದೆ. ಹೀಗಾಗಿ ಗ್ರಾಹಕರು ನೀಡುವ ಚೆಕ್ ಗಳು ಬೌನ್ಸ್ ಆದರೆ ಅಂತವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎನ್ನುವುದು ನಿಯೋಗದ ಮನವಿ.

ಚೆಕ್ ಬೌನ್ಸ್ ಮಾಡಿದವರಿಗೆ ಕಾದಿದೆ ಕಠಿಣ ಶಿಕ್ಷೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+