ಆರ್ಥಿಕ ಬೆಳವಣಿಗೆ ಹಾಗೂ ದೇಶದ ಚಿನ್ನದ ಮಾರುಕಟ್ಟೆಯಲ್ಲಿನ ಪಾರದರ್ಶಕತೆ ಚಿನ್ನದ ಬೇಡಿಕೆಯನ್ನು 2020ರ ವೇಳೆಗೆ 950 ಟನ್ ಗೆ ಹೆಚ್ಚಿಸಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿ ಮಾಡಿದೆ.
ಆರ್ಥಿಕ ಬೆಳವಣಿಗೆ ಹಾಗೂ ದೇಶದ ಚಿನ್ನದ ಮಾರುಕಟ್ಟೆಯಲ್ಲಿನ ಪಾರದರ್ಶಕತೆ ಚಿನ್ನದ ಬೇಡಿಕೆಯನ್ನು 2020ರ ವೇಳೆಗೆ 950 ಟನ್ ಗೆ ಹೆಚ್ಚಿಸಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿ ಮಾಡಿದೆ.

ಕಳೆದ ಕೆಲ ತಿಂಗಳಿಂದ ಚಿನ್ನದ ಬೇಡಿಕೆಯಲ್ಲಿ ಇಳಿಕೆಯಾದರೂ ತರುವಾಯ ಮತ್ತೆ ಚೇತರಿಕೆ ಕಂಡಿದೆ. ಚಿನ್ನದ ಬೇಡಿಕೆ ಮೇಲೆ ಹಿಡಿತ ತರಬೇಕೆಂಬ ಪ್ರಯತ್ನ ಕೂಡ ಸಫಲವಾಗಲಿಲ್ಲ. ಏಕೆಂದರೆ ಭಾರತೀಯರಿಗೆ ಚಿನ್ನದ ಮೇಲಿರುವ ಮೋಹ ಕಡಿಮೆ ಮಾಡುವುದು ಅಷ್ಟು ಸುಲಭದ ವಿಚಾರವಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
2017ರ ಸಾಲಿನಲ್ಲಿ ಗ್ರಾಹಕರು 650 ರಿಂದ 750 ಟನ್ ಚಿನ್ನ ಖರೀದಿಸುವ ಸಾಧ್ಯತೆ ಇದೆ. ಆರ್ಥಿಕ ಬೆಳವಣಿಗೆ ಹಾಗೂ ಪಾರದರ್ಶಕತೆಯಿಂದಾಗಿ ಚಿನ್ನದ ಬೇಡಿಕೆ ಹೆಚ್ಚಾಗಲಿದೆ. ಇದರಿಂದಾಗಿ 2020ರ ವೇಳೆಗೆ 850 ರಿಂದ 950 ಟನ್ ಚಿನ್ನ ಖರೀದಿಸುವ ಸಾಧ್ಯತೆ ಇದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿ ಮಾಡಿದೆ.
ನೋಟು ರದ್ದತಿ ನಂತರ ಜನರು ಚಿನ್ನದ ಮೇಲಿನ ಹೂಡಿಕೆ ಕಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎನ್ನಲಾಗಿದೆ. ಗ್ರಾಹಕರು ನಗದು ವ್ಯವಹಾರದಿಂದ ಡಿಜಿಟಲ್ ವ್ಯವಹಾರದ ಕಡೆಗೆ ಮುಂದಾಗುತ್ತಿದ್ದು, ಸಂಘಟಿತ ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಲಿದೆ. ಇದು ಪಾರದರ್ಶಕತೆ ಹೆಚ್ಚಿಸುವಲ್ಲಿ ಸಹಾಯಕವಾಗಲಿದೆ. ಅಲ್ಲದೆ ಚಿನ್ನದ ಗುಣಮಟ್ಟದಲ್ಲಿ ವಂಚನೆ ಮಾಡುವುದು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications