ಬಿ.ಎಸ್. ಯಡಿಯೂರಪ್ಪರಿಂದ ರೈತರ ಸಾಲ ಮನ್ನಾ ಘೋಷಣೆ!

Posted By: Siddu
Subscribe to GoodReturns Kannada

ಕರ್ನಾಟಕದ 24ನೇ ಮುಖ್ಯಮಂತ್ರಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಕೇಲವೆ ತಾಸಿನಲ್ಲೇ ರೈತರ ಸಾಲ ಮನ್ನಾ ಮಾಡಲಿದ್ದಾರೆ.
ಬಿಜೆಪಿ ಸರ್ಕಾರ ರೂ. 1 ಲಕ್ಷದವರೆಗಿನ ರೈತರ ಸಾಲಗಳನ್ನು ಮನ್ನಾ ಮಾಡಲಿದ್ದು, ಸಂಪುಟ ಸಭೆ ಬಳಿಕ ಯಡಿಯೂರಪ್ಪ ಸಾಲಮನ್ನಾ ದಾಖಲೆಗಳಿಗೆ ಸಹಿ ಹಾಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಾರ್ಷಿಕ ವೇತನ ಎಷ್ಟು? ಕೇಳಿದ್ರೆ ಶಾಕ್ ಆಗ್ತಿರಾ!

ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ

ಕಳೆದ ತಿಂಗಳು ಬೆಂಗಳೂರಿನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಸಾಲ ಮನ್ನಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಸಾಲ ಮನ್ನಾ ಮಾಡಲಿದ್ದಾರೆ.

ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್

ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ರೂ. 1 ಲಕ್ಷವರೆಗಿನ ಸಾಲವನ್ನು ಬಿಎಸ್ವೈ ಮನ್ನಾ ಮಾಡಿದ್ದಾರೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದರು. ಮಾತಿನಂತೆ ಸಾಲ ಮನ್ನಾ ಮಾಡಿ ಭರವಸೆ ಈಡೇರಿಸಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ

ಏತನ್ಮಧ್ಯೆ, ಕರ್ನಾಟಕದ 24 ನೇ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಪ್ರಮಾಣವಚನ ಸ್ವೀಕಾರದ ವಿರುದ್ಧ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್ ಮತ್ತು ಸಿದ್ದರಾಮಯ್ಯ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ವಿಧಾನ ಸೌಧದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜತೆಗೆ ಜೆಡಿಎಸ್ ಮುಖಂಡರುಗಳು ಸೇರಿದ್ದಾರೆ.

ಅಧಿಕೃತ ಘೋಷಣೆ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಇದರ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

English summary

B S Yeddyurappa announce farm loan waiver of Rs 1 lakh soon

chief minister B S Yeddyurappa holds cabinet meeting and is likely to announce farm loan waiver of Rs 1 lakh soon.
Story first published: Thursday, May 17, 2018, 11:55 [IST]
Company Search
Enter the first few characters of the company's name or the NSE symbol or BSE code and click 'Go'
Thousands of Goodreturn readers receive our evening newsletter.
Have you subscribed?

Find IFSC

ಕರ್ನಾಟಕ ವಿಧಾನಸಭೆ ಚುನಾವಣೆ 2018

Get Latest News alerts from Kannada Goodreturns