30, 31ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ

ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮೇ 30 ಮತ್ತು 31ರಂದು ಎರಡು ದಿನಗಳ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮೇ 30 ಮತ್ತು 31ರಂದು ಎರಡು ದಿನಗಳ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

30, 31ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ

ಕಳೆದ ಒಂದು ವರ್ಷದದಿಂದ ಭಾರತೀಯ ಬ್ಯಾಂಕ್‌ಗಳ ಸಂಘದೊಂದಿಗೆ (ಐಬಿಎ) ಹಲವು ಬಾರಿ ಮಾತುಕತೆಗಳು ನಡೆದಿದ್ದರೂ ವೇತನ ಪರಿಷ್ಕರಣೆ ಫಲಪ್ರದವಾಗುವಂತೆ ಕಾಣಲಿಲ್ಲ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘಟನೆ ತಿಳಿಸಿದೆ.

ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ, ಯುಎಫ್‌ಬಿಯು, ರಾಷ್ಟ್ರೀಯ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಒಳಗೊಂಡಂತೆ ದೇಶದ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಎರಡು ದಿನ ಬ್ಯಾಂಕ್ ವ್ಯವಹಾರಗಳು ಸಂಪೂರ್ಣ ಬಂದ್ ಇರಲಿವೆ.

1ರ ವೇತನ ಶ್ರೇಣಿಯಿಂದ 7ರವರೆಗೆ ಬರುವ ಅಧಿಕಾರಿಗಳಿಗೆ ವೇತನ ಪರಿಷ್ಕರಣೆ ಮಾಡಬೇಕು ಎಂಬುದು ಬ್ಯಾಂಕ್ ಉದ್ಯೋಗಿಗಳ ಬೇಡಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+