ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊಬೈಲ್ ಬ್ಯಾಂಕಿಂಗ್ ವಹಿವಾಟು ರೂ. 3,360 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ದೇಶದ ಅತಿ ದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿರೀಕ್ಷಿಸಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊಬೈಲ್ ಬ್ಯಾಂಕಿಂಗ್ ವಹಿವಾಟು ರೂ. 3,360 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ದೇಶದ ಅತಿ ದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿರೀಕ್ಷಿಸಿದೆ.

ಒಟ್ಟಾರೆ ವಹಿವಾಟು ರೂ. 7,56,000 ಕೋಟಿಗೆ ತಲುಪಲಿದೆ ಎಂದು ಎಸ್‌ಬಿಐ ಅಂದಾಜಿಸಿದೆ. ಬ್ಯಾಂಕುಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯಕ್ಕಾಗಿ ನೋಂದಾಯಿಸಿಕೊಂಡಿರುವ ಗ್ರಾಹಕರ ಸಂಖ್ಯೆ ಮಾರ್ಚ್ 31ರ ಅಂತ್ಯದ ವೇಳೆಗೆ 305 ಲಕ್ಷ ತಲುಪಿದೆ ಎಂದು ಎಸ್ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರಾ ತಿಳಿಸಿದ್ದಾರೆ.
ಟೆಲಿಕಾಂ ಕ್ಷೇತ್ರದಲ್ಲಿನ ಸ್ಪರ್ಧೆ, ಡಿಜಿಟಲೀಕರಣದಿಂದಾಗಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾಗುತ್ತಿದೆ. ಡೇಟಾ ಸೌಲಭ್ಯ ಹೆಚ್ಚೆಚ್ಚು ಸಿಗುತ್ತಿದ್ದು, ವೈ-ಫೈ, 3ಜಿ, 4ಜಿ ಲಭ್ಯತೆಯಿಂದ ಬ್ಯಾಂಕಿಂಗ್ ವಹಿವಾಟು ಹೆಚ್ಚು ಸುಲಭಗೊಂಡಿದೆ. ಕಳೆದ ಸಾಲಿನಲ್ಲಿ ರೂ. 6 ಲಕ್ಷ ಕೋಟಿ ಮೊತ್ತದ 2,706 ಲಕ್ಷದಷ್ಟು ಮೊಬೈಲ್ ಬ್ಯಾಂಕಿಂಗ್ ವಹಿವಾಟುಗಳು ನಡೆದಿದ್ದವು.
ಇಂಟರ್‌ನೆಟ್ ಬ್ಯಾಂಕಿಂಗ್, ಪಾಯಿಂಟ್ ಆಫ್ ಸೇಲ್, ಮೊಬೈಲ್ ಬ್ಯಾಂಕಿಂಗ್ ಮತ್ತು ಎಟಿಎಂಗಳ ಮೂಲಕ ಶೇ. 80ರಷ್ಟು ವಹಿವಾಟು ನಡೆಯುತ್ತಿರುವುದರಿಂದ ಬ್ಯಾಂಕ್ ಶಾಖೆಗಳಲ್ಲಿನ ವಹಿವಾಟು ಶೇ. 20ರಷ್ಟಕ್ಕೆ ಇಳಿದಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ರಜನೀಶ್ ಕುಮಾರ್ ಇತ್ತೀಚೆಗೆ ಹೇಳಿದ್ದರು.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications