For Quick Alerts
ALLOW NOTIFICATIONS  
For Daily Alerts

5 ಲಕ್ಷ ಮನೆ ನಿರ್ಮಾಣ ಹಾಗು ರೈತರ ಸಾಲ ಮನ್ನಾ: ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ವಹಿಸಿದ ಕೆಲವೇ ದಿನಗಳಲ್ಲಿ ಜನತೆಗೆ ಸಿಹಿಸುದ್ದಿ ನೀಡಿದ್ದಾರೆ! ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು ಐದು ಲಕ್ಷ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದಾರೆ.

By Siddu Thoravat
|

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ವಹಿಸಿದ ಕೆಲವೇ ದಿನಗಳಲ್ಲಿ ಜನತೆಗೆ ಸಿಹಿಸುದ್ದಿ ನೀಡಿದ್ದಾರೆ! ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು ಐದು ಲಕ್ಷ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದಾರೆ. ಇದರಲ್ಲಿ 2 ಲಕ್ಷ ಮನೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ನೀಲನಕ್ಷೆ ತಯಾರಿಸುವಂತೆ ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

 

ಭೂಮಿ ಖರೀದಿಗೆ ಸೂಚನೆ

ಭೂಮಿ ಖರೀದಿಗೆ ಸೂಚನೆ

ಐದು ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ತಲುಪಲು ಗ್ರಾಮ, ಹೋಬಳಿ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಯ ಮಾಹಿತಿಯನ್ನು ಕಲೆ ಹಾಕಲು ಸೂಚಿಸಿದ್ದು, ಸರ್ಕಾರಿ ಭೂಮಿ ಇಲ್ಲದಿರುವ ಕಡೆಗೆ ಖಾಸಗಿ ಭೂಮಿಯನ್ನು ಖರೀದಿಸಲು ಮುಖ್ಯಮಂತ್ರಿ ತಿಳಿಸಿದ್ದಾರೆ.

ಉದ್ಯೋಗ ಮೇಳ

ಉದ್ಯೋಗ ಮೇಳ

ರಾಜ್ಯ, ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ಅನುದಾನ ಮೀಸಲು ಇಡಲಿದ್ದು, ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ, ಜಿಲ್ಲಾ ಮಟ್ಟದ ಉದ್ಯೋಗ ಮೇಳಗಳಿಂದ ಎಷ್ಟು ಜನರಿಗೆ ಅನುಕೂಲ ಆಗಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು ಎಂದು ಕುಮಾರಸ್ವಾಮಿಯವರು ಹೇಳಿದ್ದಾರೆ.

ರೈತರ ಸಾಲ ಮನ್ನಾ
 

ರೈತರ ಸಾಲ ಮನ್ನಾ

ಎಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ರೈತರ ಸಾಲಮನ್ನಾ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಮೈತ್ರಿ ಸಕಾ್ರದ ಮೊದಲ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಒಟ್ಟು ರೂ. ೩೦ ಕೋಟಿ ಕೃಷಿ ಸಾಲಮನ್ನಾ ಮಾಡುವ ಬಗ್ಗೆ ರೂಪುರೇಷೆ ಸಿದ್ದವಾಗಿದೆ ಎಂದಿದ್ದಾರೆ. ರೈತರು ರಾಜ್ಯದ ವಿವಿಧ ಬ್ಯಾಂಕ್ ಗಳಿಂದ ಪಡೆದಿರುವ ಸಾಲದ ವಿವರನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪಡೆದಿದ್ದೇನೆ. ಬಜೆಟ್ ಮಂಡಿಸುವ ವೇಳೆ ಈ ಕುರಿತು ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

English summary

5 lakh house construction and farmers' loan waiver: Kumaraswamy

5 lakh house construction and farmers' loan waiver: Kumaraswamy
Story first published: Friday, June 15, 2018, 11:29 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X