ಶೂನ್ಯ ಬಂಡವಾಳ ಕೃಷಿ ಯೋಜನೆಯನ್ನು ನನಸು ಮಾಡಲು ಅಜೀಂ ಪ್ರೇಮ್‌ಜೀ ಫೌಂಡೇಶನ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಾಥ್ ನೀಡಲಿದೆ.
ಕೃಷಿ ಯಂತ್ರೋಪಕರಣಗಳ ಬೆಲೆ, ಅನಿಶ್ಚಿತ ಮಳೆಯಿಂದಾಗಿ ರೈತರ ಸಾಲ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯಿಂದ ರೈತರನ್ನು ಹೊರ ತರಲು ಶೂನ್ಯ ಬಂಡವಾಳ ಕೃಷಿ ಪದ್ದತಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಸಂದರ್ಭದಲ್ಲಿ ಹೇಳಿದ್ದರು.

ಶೂನ್ಯ ಬಂಡವಾಳ ಕೃಷಿ ಯೋಜನೆಯನ್ನು ನನಸು ಮಾಡಲು ಅಜೀಂ ಪ್ರೇಮ್‌ಜೀ ಫೌಂಡೇಶನ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಾಥ್ ನೀಡಲಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಅಜೀಂ ಪ್ರೇಮ್‌ಜೀ ಭೇಟಿಯಾಗಿ ಚರ್ಚೆ ನಡೆಸಿದ್ದು, ''ಶಿಕ್ಷಣ, ಮಾಲಿನ್ಯ ನಿಯಂತ್ರಣ ಕ್ಷೇತ್ರದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸುವುದರ ಜತೆಗೆ ಶೂನ್ಯ ಬಂಡವಾಳ ಕೃಷಿಗೂ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.
ಶೂನ್ಯ ಬಂಡವಾಳ ಕೃಷಿಗೆ ಬಜೆಟ್‌ನಲ್ಲಿ ರೂ. 50 ಕೋಟಿ ಮೀಸಲು ಇಡಲಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ಉತ್ತೇಜನ ನೀಡಲಾಗುತ್ತದೆ ಎಂದು ಅಜೀಂ ಪ್ರೇಮ್‌ಜೀ ಜತೆಗಿನ ಸಭೆ ಬಳಿಕ ಕುಮಾರಸ್ವಾಮಿ ಹೇಳಿದರು.
ಈ ನಿಟ್ಟಿನಲ್ಲಿ ನಾನಾ ಸಂಘಟನೆಗಳ ಸಹಕಾರ ಅಗತ್ಯವಾಗಿದ್ದು, ಅಜೀಂ ಪ್ರೇಮ್‌ಜೀ ಅವರು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಇಸ್ರೇಲ್ ಮಾದರಿ ಹಾಗು ಶೂನ್ಯ ಬಂಡವಾಳ ಕೃಷಿ ಯೋಜನೆಗೆ ಹೆಚ್ಚು ಒತ್ತು ನೀಡಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಯವರು ಕಾರ್ಯಪ್ರವೃತ್ತರಾಗಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications