ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸದಿದ್ದರೆ ವಿವಿಧ ಯೋಜನೆಗಳ ಸೌಲಭ್ಯ ಸಿಗಲ್ಲ
ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ವ್ಯಾಪ್ತಿಗೆ ಒಳಪಡುವ ತೆರಿಗೆದಾರರು ಪ್ರತಿವರ್ಷ ಐಟಿಆರ್ ಪಾವತಿಸದಿದ್ದರೆ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತಿಸಿದೆ.
News
oi-Siddu
By Siddu Thoravat
ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ವ್ಯಾಪ್ತಿಗೆ ಒಳಪಡುವ ತೆರಿಗೆದಾರರು ಪ್ರತಿವರ್ಷ ಐಟಿಆರ್ ಪಾವತಿಸದಿದ್ದರೆ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತಿಸಿದೆ.
ಮುಂದಿನ ದಿನಗಳಲ್ಲಿ ಕಪ್ಪುಪಟ್ಟಿಗೆ ಸೇರಿಸುವ ಸರ್ಕಾರದ ಕ್ರಮ ಜಾರಿಯಾದರೆ ಅಂತಹ ತೆರಿಗೆದಾರರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ದೊರೆಯುವುದು ಕಷ್ಟಕರವಾಗಲಿದೆ.
ಆದಾಯ ತೆರಿಗೆ ಸಲ್ಲಿಕೆಗೆ ಇದೇ ಜುಲೈ 31 ಕೊನೆ ದಿನವಾಗಿತ್ತು. ಆದರೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಐಟಿಆರ್ ಸಲ್ಲಿಕೆಗೆ ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ಒಂದು ತಿಂಗಳ ಕಾಲ ಮುಂದೂಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.