For Quick Alerts
ALLOW NOTIFICATIONS  
For Daily Alerts

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಮೂಲಕ 10 ಲಕ್ಷ ಉದ್ಯೋಗ ಸೃಷ್ಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಆರೋಗ್ಯ ಯೋಜನೆಯು ಆರೋಗ್ಯ ಮತ್ತು ವಿಮಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಅಧಿಕೃತ ಮೂಲ ತಿಳಿಸಿದೆ.

|

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಆರೋಗ್ಯ ಯೋಜನೆಯು ಆರೋಗ್ಯ ಮತ್ತು ವಿಮಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಅಧಿಕೃತ ಮೂಲ ತಿಳಿಸಿದೆ.

 

ಈ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಸುಧಾರಿಸಲಿದೆ ಆರೋಗ್ಯ ಯೋಜನಾ ಸಿಇಒ ಇಂದು ಭೂಷಣ್ ಅಸ್ಸೋಚಾಮ್ ಆಯೋಜಿಸಿದ್ದ ಸಮಾರಂಭದಲ್ಲಿ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆ: 5 ಲಕ್ಷ ವಿಮಾ ಸೌಲಭ್ಯ ಪಡೆಯೋದು ಹೇಗೆ?

ಕಳಪೆ ಆರೋಗ್ಯ ಸೇವೆ

ಕಳಪೆ ಆರೋಗ್ಯ ಸೇವೆ

ನಮ್ಮ ದೇಶದಲ್ಲಿ ಸಾವಿರಾರು ಜನರು ಬಡತನದ ಕಾರಣದಿಂದಾಗಿ ಆರೋಗ್ಯಕ್ಕಾಗಿ ವೆಚ್ಚ ಮಾಡಲು ಸಾಧ್ಯವಾಗುತ್ತಿಲ್ಲ. ಬಡ ಜನರು ಕಳಪೆ ಆರೋಗ್ಯ ಸೇವೆಗಳನ್ನು ಬಳಸುತ್ತಿದ್ದಾರೆ ಎಂದು ಭೂಷಣ್ ತಿಳಿಸಿದರು. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮೋದಿಕೇರ್ ಎಂದು ಕೂಡ ಕರೆಯಲ್ಪಡುತ್ತದೆ.

ವಾರ್ಷಿಕ 5 ಲಕ್ಷ ವಿಮೆ

ವಾರ್ಷಿಕ 5 ಲಕ್ಷ ವಿಮೆ

ಒಂದು ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷವರೆಗೆ ಆರೋಗ್ಯ ವಿಮೆ ಕಲ್ಪಿಸಲಾಗುತ್ತದೆ. ಪ್ರಸ್ತುತ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಫಲಾನುಭವಿಗಳು ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

ಆಯಷ್ಮಾನ್ ಭಾರತ್ ಯೋಜನೆ ಯಾರಿಗೆ ಸಿಗಲಿದೆ?
 

ಆಯಷ್ಮಾನ್ ಭಾರತ್ ಯೋಜನೆ ಯಾರಿಗೆ ಸಿಗಲಿದೆ?

ಜಾತಿ ಗಣತಿ/ಪಡಿತರ ಚೀಟಿ ಮಾನದಂಡದ ಆಧಾರದ ಮೇಲೆ ವಿಮೆ ಸಗಲಿದೆ.
- ಪ.ಜಾತಿ/ಪ.ಪಂಗಡ ಬುಡಕಟ್ಟು ಸಮುದಾಯದವರು
- ನಿರ್ವಸಿತರು (ವಸತಿ ಸೌಲಭ್ಯ ಇಲ್ಲದವರು)
- ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
- ಕೂಲಿ ಕಾರ್ಮಿಕರು, ಜೀತ ವಿಮುಕ್ತರು
- ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು
- ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
- ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
- ಎಲೆಕ್ಟ್ರಿಷಿಯನ್, ಮೆಕಾನಿಕ್, ಸಹಾಯಕರು

ಕಾದು ನೋಡಿ..

ಕಾದು ನೋಡಿ..

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಸರ್ಕಾರ ಹೇಳಿರುವುದು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬುದನ್ನು ಕಾದುನೋಡಬೇಕಿದೆ.

English summary

PM healthcare scheme to create 10 lakh jobs

Prime Minister Narendra Modi's ambitious healthcare scheme will create 10 lakh jobs.
Story first published: Wednesday, October 17, 2018, 12:34 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X