For Quick Alerts
ALLOW NOTIFICATIONS  
For Daily Alerts

ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ

ನನ್ನ ವೈಯಕ್ತಿಕ ಕಾರಣಗಳಿಂದಾಗಿ ತತ್ ಕ್ಷಣದಿಂದಲೇ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.

|

ನನ್ನ ವೈಯಕ್ತಿಕ ಕಾರಣಗಳಿಂದಾಗಿ ತತ್ ಕ್ಷಣದಿಂದಲೇ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.

 
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ

ಕಳೆದ ಕೆಲ ವರ್ಷಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸಿರುವುದಕ್ಕೆ ನನಗೆ ಹೆಮ್ಮೆಯಿದೆ.
ಆರ್ಬಿಐ ಸಿಬ್ಬಂದಿ ವರ್ಗ, ಅಧಿಕಾರಿಗಳು ಮತ್ತು ಆಡಳಿತ ವರ್ಗದ ಬೆಂಬಲ ಮತ್ತು ಕಠಿಣ ಕಾರ್ಯವನ್ನು ನೆನೆದಿದ್ದಾರೆ. ಆರ್ಬಿಐ ಸೆಂಟ್ರಲ್ ಬೋರ್ಡ್ ನ ಸಹೋದ್ಯೋಗಿಗಳಿಗೆ ಮತ್ತು ನಿರ್ದೇಶಕರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದು, ಭವಿಷ್ಯದಲ್ಲಿ ಅವರಿಗೆ ಒಳಿತಾಗಲಿ ಎಂದು ಹಾರೈಸಿದ್ದಾರೆ.

 

ಹಣಕಾಸು ನೀತಿ ಮತ್ತು ಸಾಲ ನೀಡಿಕೆ ನಿಯಮಗಳ ಕುರಿತು ಕೇಂದ್ರ ಸರ್ಕಾರ ಮತ್ತು ಆರ್ಬಿಐ ಮಧ್ಯೆ ಗುದ್ದಾಟ ನಡೆಯುತ್ತಿದ್ದ ಬೆನ್ನಲ್ಲೇ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದ್ದು, ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದೆ.
ಈಗಾಗಲೇ ಆರ್ಬಿಐ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಹಲವು ಸುತ್ತಿನ ಸಂಧಾನ ಸಭೆ ನಡೆದು ಒಮ್ಮತಕೆ ಬರಲಾಗಿತ್ತು. ಈ ಸಂದರ್ಭದಲ್ಲಿ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿರುವುದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಆರ್ಬಿಐ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಎಲ್ಲವೂ ಸರಿಯಲ್ಲ ಎಂಬುದಕ್ಕೆ ಪುಷ್ಠಿ ಸಿಕ್ಕಂತಾಗಿದೆ.

Read more about: rbi urjit patel banking
English summary

RBI Governor Urjit Patel resigns

On account of personal reasons, I have decided to step down from my current position effective immediately.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X