For Quick Alerts
ALLOW NOTIFICATIONS  
For Daily Alerts

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಎಲ್ಲ ವರ್ಗದ ಬಡವರಿಗೆ ಉಚಿತ ಎಲ್ಪಿಜಿ ಸಂಪರ್ಕ

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಲ್ಲಾ ವರ್ಗದ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್​ಪಿಜಿ) ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

|

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಲ್ಲಾ ವರ್ಗದ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್​ಪಿಜಿ) ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಇದು 2016ರಲ್ಲಿ ಬಿಡುಗಡೆಯಾದ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಕೇವಲ ಬಿಪಿಎಲ್​ ಕಾರ್ಡ್​ ಇರುವವರಿಗೆ ಮಾತ್ರವಲ್ಲದೆ ಎಲ್ಲ ವರ್ಗದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೂ ವಿಸ್ತರಿಸುವ ಕುರಿತು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಎಲ್ಪಿಜಿ(LPG) ಕನೆಕ್ಷನ್ ಪಡೆಯುವುದು ಹೇಗೆ?

100% ಬಡ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕ

100% ಬಡ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕ

ನಡೆಯಿಂದಾಗಿ ಶೇ. 100 ರಷ್ಟು ಬಡ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕ ಸಾಧಿಸುವ ಗುರಿ ಹೊಂದಲಾಗಿದೆ. 2011 ರ ಸಮಾಜೋ ಆರ್ಥಿಕ ಜಾತಿ ಜನಗಣತಿ (SECC) ಆಧಾರದ ಮೇಲೆ ಸಂಪರ್ಕಗಳನ್ನು ನೀಡಲಾಗುತ್ತಿತ್ತು. ನಂತರ ಪ್ರಧಾನ ಮಂತ್ರಿ ಆವಾಸ ಯೋಜನೆ ಮತ್ತು ಅಂತ್ಯೋದಯ ಯೋಜನೆಯ ಫಲಾನುಭವಿಗಳಾದ ಎಸ್‌ಸಿ, ಎಸ್‌ಟಿ, ಅರಣ್ಯ ನಿವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳು, ದ್ವೀಪ ನಿವಾಸಿಗಳು, ಅಲೆಮಾರಿ ಬುಡಕಟ್ಟು ಜನಾಂಗ, ಚಹಾ ಎಸ್ಟೇಟ್‌ಗಳ ಬಡವರಿಗೆ ಯೋಜನೆಯನ್ನು ವಿಸ್ತರಿಸಲಾಗಿತ್ತು. ಈಗ ಎಲ್ಲ ವರ್ಗದ ಕಡು ಬಡವರಿಗೂ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಎಲ್‌ಪಿಜಿ ಸಂಪರ್ಕ ಲಭ್ಯವಾಗಲಿದೆ.

ರೂ. 1,600 ಸಬ್ಸಿಡಿ

ರೂ. 1,600 ಸಬ್ಸಿಡಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಉಚಿತ ಎಲ್​ಪಿಜಿ ಸಂಪರ್ಕ ಒದಗಿಸುವ ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳಿಗೆ ಸರ್ಕಾರವು ರೂ. 1,600 ಸಬ್ಸಿಡಿ ನೀಡಲಿದೆ. ಈ ಸಬ್ಸಿಡಿಯು ಸಿಲಿಂಡರ್‌ ಭದ್ರತೆ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಒಳಗೊಂಡಿರುತ್ತದೆ.

ಉಜ್ವಲ ಯೋಜನೆ ಉದ್ದೇಶ

ಉಜ್ವಲ ಯೋಜನೆ ಉದ್ದೇಶ

2016ರ ಮೇ 1ರಂದು ಉಜ್ವಲ ಯೋಜನೆ ಜಾರಿಗೆ ತರಲಾಗಿದ್ದು, ಹೊಗೆ ರಹಿತ ಅಡುಗೆ ಮನೆ ಪರಿಕಲ್ಪನೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳಾ ಸದಸ್ಯರಿಗೆ ಎಲ್​ಪಿಜಿ ಸಂಪರ್ಕ ಕಲ್ಪಿಸುವ ಮೂಲಭೂತ ಗುರಿ ಹೊಂದಲಾಗಿದೆ.

ಬೇಕಾಗುವ ದಾಖಲಾತಿಗಳು

ಬೇಕಾಗುವ ದಾಖಲಾತಿಗಳು

ಪ್ರಧಾನಮಂತ್ರಿ ಉಜ್ವಲ ಯೋಜನೆಯ ನೋಂದಾಯಿಸಲು ಮತ್ತು ಸೌಲಭ್ಯ ಪ್ರಯೋಜನಗಳನ್ನು ಪಡೆಯಲು ಈ ಕೆಳಗಿನ ದಾಖಲಾತಿಗಳನ್ನು ಒದಗಿಸಬೇಕಾಗುತ್ತದೆ.
1. ಬಿಪಿಎಲ್ ಪ್ರಮಾಣ ಪತ್ರ (ಬಡತನ ರೇಖೆಗಿಂತ ಕೆಳಗಿರುವ)
2. ಬಿಪಿಲ್ ಪಡಿತರ ಚೀಟಿ (ಬಡತನ ರೇಖೆಗಿಂತ ಕೆಳಗಿರುವ ರೇಷನ್ ಕಾರ್ಡ್) ಈಕೆಳಗಿ
3. ಆಧಾರ್ ಕಾರ್ಡ್, ಚುನಾವಣಾ ಚೀಟಿ, ಡ್ರೈವಿಂಗ್ ಕಾರ್ಡ್, ಪಾಸ್ಪೋರ್ಟ್ ಇವುಗಳಲ್ಲಿ ಯಾವುದಾದರೊಂದು ದಾಖಲಾತಿ
4. ವಿಳಾಸ ದಾಖಲಾತಿಯಾಗಿ ಆಧಾರ್ ಕಾರ್ಡ್, ಚುನಾವಣಾ ಚೀಟಿ, ಡ್ರೈವಿಂಗ್ ಕಾರ್ಡ್, ಪಾಸ್ಪೋರ್ಟ್, ಗೃಹ ನೋಂದಣಿ ಡಾಕ್ಯುಮೆಂಟ್ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
5. ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಎಲ್ಪಿಜಿ ಹಂಚಿದಾರರ ಕೇಂದ್ರದಲ್ಲಿ ಸಿಗುವ ಅರ್ಜಿಯನ್ನು ತಪ್ಪದೆ ತುಂಬಿ ನೀಡಬೇಕು.

ಪ್ರಧಾನಮಂತ್ರಿ ಉಜ್ವಲ ಯೋಜನೆ ಅರ್ಜಿ ಎಲ್ಲಿ ಲಭ್ಯ

ಪ್ರಧಾನಮಂತ್ರಿ ಉಜ್ವಲ ಯೋಜನೆ ಅರ್ಜಿ ಎಲ್ಲಿ ಲಭ್ಯ

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.

ರಾಜ್ಯದ ಅನಿಲಭಾಗ್ಯ ಯೋಜನೆ

ರಾಜ್ಯದ ಅನಿಲಭಾಗ್ಯ ಯೋಜನೆ

ಕೇಂದ್ರದ ಉಜ್ವಯ ಯೋಜನೆಯಂತೆ ರಾಜ್ಯದಲ್ಲಿ ಅನಿಲಭಾಗ್ಯ ಯೋಜನೆ ಅನುಷ್ಠಾನವಾಗಿದೆ.
ಕೇಂದ್ರ ಸರ್ಕಾರ ತಯಾರಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಶೇ. 60ರಷ್ಟು ಕುಟುಂಬಗಳು ಬರುತ್ತಿರಲಿಲ್ಲ. ಹೀಗಾಗಿ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ ಅವರೆಲ್ಲರಿಗೂ ಅಡುಗೆ ಅನಿಲ (ಗ್ಯಾಸ್) ನೀಡುವ ಉದ್ದೇಶ ಹೊಂದಿದೆ. ರಾಜ್ಯವನ್ನು ಸೀಮೆಎಣ್ಣೆ ಮುಕ್ತ ಮಾಡುವ ನಿಟ್ಟಿನಲ್ಲಿ ಹಂತಹಂತವಾಗಿ ಬಿಪಿಎಲ್ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕವನ್ನು ಪೂರೈಸಲಿದೆ. 'ಅನಿಲಭಾಗ್ಯ ಯೋಜನೆ' ಅಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮರೆಯದಿರಿ

English summary

Pradhan Mantri Ujjwala Yojana: Free LPG Connection For All Poor

The government Monday extended Ujjwala Yojana of providing free cooking gas (LPG) connections to all poor households.
Story first published: Thursday, December 20, 2018, 13:29 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X