For Quick Alerts
ALLOW NOTIFICATIONS  
For Daily Alerts

ಮೇಲ್ವರ್ಗದವರಿಗೆ ಶೇ. 10 ರಷ್ಟು ಮೀಸಲಾತಿ ನೀಡಿದಂತೆ ಮಧ್ಯಮವರ್ಗದವರನ್ನು ಸೆಳೆಯಲು ತಂತ್ರ

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆಯರಿಗೆ ಶೇ. 10 ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರದ ಬಗ್ಗೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಮಧ್ಯಮ ವರ್ಗದವರನ್ನು ಸೆಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

|

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆಯರಿಗೆ ಶೇ. 10 ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರದ ಬಗ್ಗೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಮಧ್ಯಮ ವರ್ಗದವರನ್ನು ಸೆಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಧ್ಯಮವರ್ಗದವರನ್ನು ಸೆಳೆಯಲು ತಂತ್ರ

ಹಣಕಾಸು ಸಚಿವಾಲಯ ಮಧ್ಯಂತರ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆಯಲ್ಲಿ ವಿನಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಯ ತೆರಿಗೆಯ ಉಳಿತಾಯ ಮಿತಿ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಜೊತೆಗೆ ಮಧ್ಯಮ ವರ್ಗ ಹಾಗೂ ನಿವೃತ್ತರಿಗೆ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ. ಇದಲ್ಲದೆ ಗೃಹ ಸಾಲದ ಬಡ್ಡಿ ದರವನ್ನು ಇಳಿಕೆ ಮಾಡುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ನಲ್ಲಿ ಕಸ್ಟಮ್ಸ್ ತೆರಿಗೆಯಲ್ಲಿ ಕೆಲವೊಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಿಸಿದಂತೆ ತೆರಿಗೆ ಇಲಾಖೆ ಹಾಗೂ ಹಣಕಾಸು ಸಚಿವಾಲಯದ ಮಧ್ಯೆ ಮಾತುಕತೆ ನಡೆಯುತ್ತಿದೆ. ಜಿಎಸ್ಟಿ ಮೂಲಕ ವ್ಯಾಪಾರಿಗಳಿಗೆ ನೆಮ್ಮದಿ ನೀಡಲು ಮುಂದಾಗಿದೆ. ರೈತರಿಗೂ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮಧ್ಯಮ ವರ್ಗದ ಜನರನ್ನು ತೃಪ್ತಿಪಡಿಸುವುದು ಸರ್ಕಾರದ ಉದ್ದೇಶವಾಗಿದೆ.

English summary

in interim budget 2019 salaried class may get income tax concessions finance ministry working on proposal

in interim budget 2019 salaried class may get income tax concessions finance ministry working on proposal
Story first published: Wednesday, January 9, 2019, 11:34 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X